Log In
BREAKING NEWS >
ಎಲ್ಲೆಡೆಯಲ್ಲಿ ಶಾ೦ತಿಯುತವಾಗಿ ವಿಜೃ೦ಭಣೆಯ ಹನುಮಾನ್ ಜಯ೦ತಿ ಆಚರಣೆ.....

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಮುನ್ನ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಖರೀದಿಸಲು ಕೇಂದ್ರ ಕಾನೂನು ಸಚಿವಾಲಯಕ್ಕೆ ಕೇಂದ್ರ ಬಜೆಟ್‌ನಲ್ಲಿ ಸುಮಾರು 1,900 ಕೋಟಿ ರೂ. ನೀಡಲಾಗಿದೆ. ಇಂದು 2023-24ನೇ ಸಾಲಿನ  ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಚುನಾವಣಾ ಸಮಿತಿಯಿಂದ ಇವಿಎಂ ಖರೀದಿಗೆ 1,891.78 ಕೋಟಿ ರೂ. ನೀಡಲಾಗಿದೆ. "ಬ್ಯಾಲೆಟ್ ಯೂನಿಟ್‌ಗಳು,

ತುಮಕೂರು:ಫೆ 01: ಪ್ರಚೋದನಕಾರಿ ಭಾಷಣ ಮಾಡಿದ್ದ ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಕಾರ್ಯದರ್ಶಿ ಶರಣ್ ಪಂಪ್​ವೆಲ್​ ವಿರುದ್ಧ ತುಮಕೂರು ಜಿಲ್ಲೆಯ ತಿಲಕ್​ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. ನಗರದ ಬಾರ್​ಲೈನ್​ ನಿವಾಸಿಯಾಗಿರುವ ಸೈಯದ್ ಬುರ್ಹಾನ್​ ಉದ್ದೀನ್​​ ಅವರು ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತುಮಕೂರಿನಲ್ಲಿ ಇತ್ತೀಚೆಗೆ ನಡೆದ ಶೌರ್ಯಯಾತ್ರೆಯಲ್ಲಿ

ನವದೆಹಲಿ: ಕೇಂದ್ರ  ಬಜೆಟ್ 2023ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೂತನ ತೆರಿಗೆ ಸ್ಲಾಬ್ ಗಳನ್ನು ವಿವರಿಸಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷರೂ ಗೆ ಹೆಚ್ಚಳ ಮಾಡಿದ್ದಾರೆ. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ್ದು, ಹೊಸ ತೆರಿಗೆ ಪದ್ಧತಿಯಲ್ಲಿ

ಅಯೋಧ್ಯೆ: ಉತ್ತರ ಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಇದೀಗ ದೇಗುಲದ ಶ್ರೀರಾಮ-ಸೀತಾಮಾತೆ ಮೂರ್ತಿಗಾಗಿ ನೇಪಾಳದಿಂದ ಬೃಹತ್ ಶಾಲಿಗ್ರಾಮ ಕಲ್ಲುಗಳನ್ನು ಭಾರತಕ್ಕೆ ರವಾನಿಸಲಾಗುತ್ತಿದೆ. ಹೌದು ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಗರ್ಭ ಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಬೇಕಾದ ಭಗವಾನ್ ಶ್ರೀರಾಮ ಹಾಗೂ ಸೀತಾ

ಆನೇಕಲ್: ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಿಯಂತ್ರಣ ತಪ್ಪಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ತಾಯಿ ಮಗಳು ಮೃತಪಟ್ಟಿದ್ದಾರೆ. ಮೃತರನ್ನು ಐಟಿ ಉದ್ಯೋಗಿ 47 ವರ್ಷದ ಗಾಯಿತ್ರಿ ಕುಮಾರ್ ಹಾಗೂ 16 ವರ್ಷದ ಸಮತಾ ಕುಮಾರ್ ಎಂದು ಗುರುತಿಸಲಾಗಿದೆ. ಮಗಳನ್ನು ಶಾಲೆಗೆ ಬಿಡಲು ಕಾರಿನಲ್ಲಿ

ಮಂಗಳೂರು:ಫೆ 01 : ನೆತ್ತಿಲಪದವು ಎಂಬಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಸುಮಾರು 27 ಲಕ್ಷ ರೂ. ಮೌಲ್ಯದ ಗಾಂಜಾ ಸೇರಿದಂತೆ ಒಟ್ಟು 32,07,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಜೇಶ್ವರದ ಹೊಸಬೆಟ್ಟು ಕಡಪುರಂ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಅಲಿಯಾಸ್ ಹ್ಯಾರೀಸ್ (35), ಕುಂಬ್ಳೆ

ಗುಲ್ಮಾರ್ಗ್: ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನ ಸ್ಕೀ ರೆಸಾರ್ಟ್‌ನ ಮೇಲ್ಭಾಗದಲ್ಲಿ ಬುಧವಾರ ಸಂಭವಿಸಿದ ಭಾರಿ ಹಿಮಕುಸಿತದಲ್ಲಿ ಇಬ್ಬರು ಪೋಲಿಷ್ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಮಕುಸಿತ ಸಂಭವಿಸಿದಾಗ ಸ್ಕೀಯರ್‌ಗಳು, ವಿದೇಶಿಗರು ಮತ್ತು ಸ್ಥಳೀಯರು, ಇಳಿಜಾರುಗಳಲ್ಲಿ ಇದ್ದರು ಎನ್ನಲಾಗಿದೆ. ಕನಿಷ್ಠ 19 ವಿದೇಶಿ ಪ್ರವಾಸಿಗರನ್ನು ಇದುವರೆಗೆ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಇಬ್ಬರು

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ದಹನಕಾರಿ ರಾಸಾಯನಿಕ ತುಂಬಿದ ಡ್ರಮ್‌ಗಳು ಸ್ಫೋಟಗೊಂಡು ಇಬ್ಬರು ಸ್ಕ್ರ್ಯಾಪ್ ವಿತರಕರು ಮೃತಪಟ್ಟಿದ್ದಾರೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂತ್ರಸ್ತರು ಭಿವಂಡಿಯ ಕಂಬೆಯಲ್ಲಿ ಕಂಟೈನರ್‌ಗಳಿಂದ ಡೈಥಿಲೀನ್ ಗ್ಲೈಕೋಲ್ ಅನ್ನು ತೆಗೆದುಕೊಳ್ಳುತ್ತಿದ್ದಾಗ ಅವರಲ್ಲಿ ಒಬ್ಬಾತ ಸಿಗರೇಟ್ ಹಚ್ಚಿದ್ದಾರೆ. ಇದರಿಂದಾಗಿ ಬೆಳಿಗ್ಗೆ 8.30 ರ ಸುಮಾರಿಗೆ ಬೆಂಕಿ