BREAKING NEWS > |
ಶಿವಮೊಗ್ಗ:ಮಾ 08 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರಿಖ್ ನನ್ನು ತೀರ್ಥಹಳ್ಳಿ ಹಾಗೂ ಶಿವಮೊಗ್ಗಕ್ಕೆ ಸ್ಥಳ ಮಹಜರು ಮಾಡಲಾಗಿದೆ. ಶಾರಿಕ್ ನನ್ನು ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು ಕರೆತಂದಿರುವ ಎನ್ ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. ಇನ್ನು ತೀರ್ಥಹಳ್ಳಿ ಸೊಪ್ಪುಗುಡ್ಡೆ
ಢಾಕ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 7 ಅಂತಸ್ತಿನ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದ್ದು, 100 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು 15 ಮಂದಿ ಸಾವನ್ನಪ್ಪಿದ್ದಾರೆ. ಕಚೇರಿ ಒಳಭಾಗದಲ್ಲಿ ಈ ಸ್ಫೋಟ ಸಂಭವಿಸಿದ್ದು, ಸ್ಫೋಟಕ್ಕೆ ಕಾರಣ ಇನ್ನೂ ತಿಳಿದಿಲ್ಲ. ಆದರೆ ಸ್ಥಳೀಯರ ಪ್ರಕಾರ, ಕಟ್ಟಡದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ರಾಸಾಯನಿಕಗಳಿಂದಾಗಿ ಈ ಸ್ಫೋಟ ಸಂಭವಿಸಿರಬಹುದು
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಪ್ರಮುಖ ಆರೋಪಿ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಬಂಧನದ ಬಳಿಕ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಬಿಆರ್ ಎಸ್ ನಾಯಕಿ ಕೆ ಕವಿತಾ
ಬೆಂಗಳೂರು: ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ಮಾರ್ಚ್ 9 ರಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ರದ್ದಾಗಿದೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ವಿರುದ್ಧ ನಾಳೆ ಬೆಳಿಗ್ಗೆ 9 ರಿಂದ 11ಗಂಟೆವರೆಗೆ ಅಂದರೆ ಎರಡು ಗಂಟೆಗಳ ಕಾಲ ಬಂದ್ ಗೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದರು. ಆದರೆ ನಾಳೆಯಿಂದ ದ್ವಿತೀಯ ಪಿಯು
ದಾವಣಗೆರೆ: ಲೋಕಾಯುಕ್ತ ದಾಳಿಯ ನಂತರ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಕೆಎಸ್‌ಡಿಎಲ್ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಂಗಳವಾರ ಹೈಕೋರ್ಟ್‌ನಿರೀಕ್ಷಣಾ ಜಾಮೀನು ನೀಡಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಚೆನ್ನಗಿರಿಯ ಚನ್ನೇಶಪುರದ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಅದ್ಧೂರಿ ಸ್ವಾಗತ: ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪ
ಗುವಾಹಟಿ: 60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕೇವಲ ಐದು ದಿನಗಳ ನಂತರ ಸಲ್ಹೌಟುವೊನುವೊ ಕ್ರೂಸ್ ಅವರು ಮಂಗಳವಾರ ರಾಜ್ಯದ ಮೊದಲ ಮಹಿಳಾ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದ್ದಾರೆ. ನಾಗಾಲ್ಯಾಂಡ್ ರಾಜ್ಯದ ಸ್ಥಾನಮಾನ ಪಡೆದು 60 ವರ್ಷಗಳ
ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಒಳಪಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ತಂದೆಗೆ ಮೂತ್ರಪಿಂಡ ದಾನ ಮಾಡಿರುವ ಲಾಲು ಪುತ್ರಿ ರೋಹಿಣಿ ಆಚಾರ್ಯ ಅವರು, ಅನಾರೋಗ್ಯದಿಂದ ಬಳಲುತ್ತಿರುವ
ಪಡುಬಿದ್ರಿ:ಮಾ 07, ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಮೂಲ್ಕಿ ಸೇತುವೆ ಮೇಲೆ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು
ಕಣ್ಣೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದ ಟಾಯ್ಲೆಟ್‌ನಲ್ಲಿ ಭಾರೀ ಮೌಲ್ಯದ ಚಿನ್ನವನ್ನು ಡಿಆರ್‌ಐ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಬುಧಾಬಿಯಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ‘ಗೋ ಫಸ್ಟ್’ ವಿಮಾನದ ಟಾಯ್ಲೆಟ್‌ನಲ್ಲಿ 2,536 ಗ್ರಾಂ ಚಿನ್ನ ಪತ್ತೆಯಾಗಿದೆ. ಸುಮಾರು 1.42 ಕೋಟಿ ರೂ. ಬೆಲೆಬಾಳುವ ಚಿನ್ನವನ್ನು ಕಪ್ಪು ಬಟ್ಟೆಯಿಂದ
ಮಾರ್ಚ್ 12ಕ್ಕೆ ಬೆಂಗಳೂರಿನ ರಾಣಿ ಅಬ್ಬಕ್ಕ ಕ್ರೀಡಾಂಗಣ, ಮಹಾಲಕ್ಷ್ಮೀ ಲೇಔಟ್ನಲ್ಲಿ ರಾಣಿ ಅಬ್ಬಕ್ಕ ಉತ್ಸವ 2023 ನಡೆಯಲಿದೆ ಎಂದು ರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಉಪಾಧ್ಯಕ್ಷೆ ಕಾಂತಿ ಶೆಟ್ಟಿ ತಿಳಿಸಿದ್ದಾರೆ. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟ, ಪರಕೀಯರ ದಾಳಿಯನ್ನು ಸದೆ ಬಡಿದು,