ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ (ಬಿಎನ್‌ಪಿ)ಲ್ಲಿ ಆನೆ ದಾಳಿಗೆ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ನಾಗಮ್ಮ (45) ಆನೆ ತುಳಿತಕ್ಕೆ ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ. ಘಟನೆ ನಡೆದ ಸ್ಥಳವು ಬನ್ನೇರುಘಟ್ಟ ಜೈವಿಕ ಉದ್ಯಾನವನದ (ಬಿಬಿಪಿ) ನಿಯಂತ್ರಣ ಮತ್ತು ನಿರ್ವಹಣೆಯಲ್ಲಿದೆ ಎಂದು ತಿಳಿದುಬಂದಿದೆ. ಮೃತ ಮಹಿಳೆ ನಾಗಮ್ಮ ಅವರು,
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಇದೇ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಪ್ರತಿಪಕ್ಷದ ನಾಯಕನ ಆಯ್ಕೆಗೆ ಕೇಸರಿ ಪಕ್ಷವು ಏಕೆ ಇಷ್ಟು ಸಮಯ ತೆಗೆದುಕೊಳ್ಳುತ್ತಿದೆ ಎಂದು ತಿರುಗೇಟು ನೀಡಿದೆ. ಪಕ್ಷದ ಅಧಿಕೃತ ಕರ್ನಾಟಕ ಹ್ಯಾಂಡಲ್‌ನಲ್ಲಿ
ಉಡುಪಿ: ನಮ್ಮ ಕಾಂಗ್ರೆಸ್ ಪಕ್ಷದ ನಾಯಕರುಗಳು ನೀಡಿದಂತಹ ಗ್ಯಾರೆಂಟಿ ಕಾರ್ಡ್ ನ ಬಗ್ಗೆ ಅನಗತ್ಯವಾಗಿ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುವಂತಹ ಹೇಳಿಕೆಗಳನ್ನು ಮಾಜಿ ಸಚಿವರುಗಳಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇನ್ನಿತರ ಮಾಜಿ ಸಚಿವರು ಹಾಗೂ ರಾಜ್ಯದ ಬಿಜೆಪಿ ನಾಯಕರುಗಳು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ನಮ್ಮ ರಾಜ್ಯದ ಜನರನ್ನು
ಬೆಂಗಳೂರು ಗ್ರಾಮಾಂತರ: ಕುಖ್ಯಾತ ದರೋಡೆ ಗ್ಯಾಂಗ್ನ್ನ ಸೂರ್ಯನಗರ ಪೊಲೀಸರು(Police) ಇದೀಗ ಬಂಧಿಸಿದ್ದಾರೆ. ಸುನೀಲ್ ಹಾವೇರಿ(26), ಸರವಣ ಅಲಿಯಾಸ್ ಚಿಟ್ಟಿ(32), ಕಾಂತರಾಜ(27 ) ಬಂಧಿತರು. ಸೂರ್ಯನಗರ ಪೇಸ್-2 ಹಿನ್ನಕ್ಕಿ ಬಳಿ ಮಾರಕಾಸ್ತ್ರಗಳೊಂದಿಗೆ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ವೇಳೆ ಬಂಧಿಸಲಾಗಿದೆ. ಹೌದು ಈ ಖತರ್ನಾಕ್ ಗ್ಯಾಂಗ್ ಒಬ್ಬಂಟಿಯಾಗಿ ಸಾಗುವವರನ್ನು ಟಾರ್ಗೆಟ್ ಮಾಡುತ್ತಿತ್ತು. ಅವರನ್ನ
ನವದೆಹಲಿ: ನೂತನವಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್‌ಗಳು ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್‌ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್
ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಬಾಲಕ ಸಾವಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಡಿ ಜಾಗೀರ ಜಾಡಲದಿನ್ನಿ ಗ್ರಾಮ ಪಂಚಾಯಿತಿಯ ಪಿಡಿಒ ರೇಣುಕಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಶಶಿಧರ್ ಆದೇಶ ಹೊರಡಿಸಿದ್ದಾರೆ. ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ:
ಬೆಂಗಳೂರು: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ದೊರೆತಿದೆ. ಉಳಿದಂತೆ ಖಾತೆಗಳ ವಿವರ ಹೀಗಿದೆ: ಡಾ. ಜಿ. ಪರಮೇಶ್ವರ್- ಗೃಹ, ಹೆಚ್ ಕೆ ಪಾಟೀಲ್-
ಮಂಗಳೂರು:ಮೇ 27, ಸರ್ಕಾರ ಬದಲಾದ ಬೆನ್ನಲ್ಲೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೌಕರಿಗೆ ಕುತ್ತು ಬಂದಿದೆ.ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಹಿಂದಿನ ಸರ್ಕಾರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಇಂದು ಶನಿವಾರ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ
ನವೆದೆಹಲಿ: ಇಂದು ಬೆಳಿಗ್ಗೆ ಸುರಿದ ಭಾರಿ ಮಳೆ ಮತ್ತು ಜೋರಾದ ಗಾಳಿಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಶಾಖದ ಅಲೆಯಿಂದಾಗಿ ಕೊಂಚ ತಂಪೆರೆದಂತಾಗಿದೆ. ಆದರೆ, ಶನಿವಾರ ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ನಗರದಲ್ಲಿ ಹಲವಾರು ಮರಗಳು ಧರೆಗುರುಳಿವೆ. ರಾಷ್ಟ್ರ ರಾಜಧಾನಿ ಮತ್ತು ನೋಯ್ಡಾ ಮತ್ತು ಗಾಜಿಯಾಬಾದ್ ಸೇರಿದಂತೆ