ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಖಿನ್ನತೆಗೆ ಜಾರಿದ್ದ ವ್ಯಕ್ತಿಯೊಬ್ಬರು ಮಗಳನ್ನೇ ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಆರೋಪಿಯು ಖಿನ್ನತೆಯಿಂದ ಬಳಲುತ್ತಿದ್ದ, ನಾಲ್ಕು ವರ್ಷಗಳ ಹಿಂದೆ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು, ಬಳಿಕ ಆತ ಖಿನ್ನತೆಗೆ ಜಾರಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆಲಪ್ಪುಳದ ಪುನ್ನಮೂಡು, ಮಾವೇಲಿಕ್ಕರ ಮೂಲದ ಶ್ರೀಮಹೇಶ್ ಎಂಬಾತ ತನ್ನ

ಕೊಲ್ಲಾಪುರ (ಮಹಾರಾಷ್ಟ್ರ): ಟಿಪ್ಪು ಸುಲ್ತಾನ್, ಔರಂಗಜೇಬ್‌ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ನೆರೆಯ ಕೊಲ್ಲಾಪುರದಲ್ಲಿ ಹಿಂಸಾಚಾರ ನಡೆದ ಹಿನ್ನೆಲೆ ಮಹಾರಾಷ್ಟ್ರ ಗಡಿಯಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ

ಬೆಂಗಳೂರು: ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಈ ತಿಂಗಳ ಅಂತ್ಯದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಉಪ ಚುನಾವಣೆಗೆ ಪ್ರತ್ಯೇಕ ಚುನಾವಣೆ ಅಧಿಸೂಚನೆ ಹೊರಡಿಸುವುದರಿಂದ ವಿಧಾನಸಭೆಯಲ್ಲಿ ಅತಿಹೆಚ್ಚಿನ ಶಾಸಕರ ಬಲ ಹೊಂದಿರುವ ಆಡಳಿತ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸುವುದು ನಿಶ್ಚಿತವಾಗಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್‌ 135

ಚಿತ್ರದುರ್ಗ: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್​​  ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಕನಕಮಣಿ (72), ಆಕಾಶ್ (17) ಮತ್ತು ಆ್ಯಂಬುಲೆನ್ಸ್ ಚಾಲಕ ಸಾವನ್ನಪ್ಪಿದ್ದಾರೆ. ಮುಂಜಾನೆ  ಆ್ಯಂಬುಲೆನ್ಸ್​ ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಈ ವೇಳೆ

ಬೆಂಗಳೂರು: ಬಾಲಕಿಯರ ಶಾಲಾ ಸಮವಸ್ತ್ರವನ್ನು ಸ್ಕರ್ಟ್‌ನಿಂದ ಚೂಡಿದಾರ್ ಅಥವಾ ಪ್ಯಾಂಟ್‌ಗೆ ಬದಲಾಯಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಸಿಪಿಸಿಆರ್) ರಾಜ್ಯ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ. ಕಲಬುರಗಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸ್ಕರ್ಟ್ ಧರಿಸುವ ಹುಡುಗಿಯರು ಎದುರಿಸುತ್ತಿರುವ ಅನಾನುಕೂಲತೆಗಳ ಕುರಿತು ಆಯೋಗಕ್ಕೆ ಪತ್ರ

ನವದೆಹಲಿ: ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮಹಿಳಾ ಡಬ್ಲ್ಯುಎಫ್‌ಐ ಮುಖ್ಯಸ್ಥರ ನೇಮಕ ಮತ್ತು ತಮ್ಮ ವಿರುದ್ಧದ ಪೊಲೀಸ್ ಎಫ್‌ಐಆರ್‌ಗಳನ್ನು ರದ್ದುಗೊಳಿಸುವುದು ಸೇರಿದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಮುಂದೆ ನಾಲ್ಕು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ)ಗೆ ಮುಕ್ತ

ಕಟೀಲು: ಖ್ಯಾತ ವೈದಿಕರಾಗಿದ್ದ ದಿ. ಶಿಬರೂರು ಹಯಗ್ರೀವ ತಂತ್ರಿಯವರ ಪತ್ನಿ, ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಮಾತೃಶ್ರೀ ಕಸ್ತೂರಿಯಮ್ಮ ಮಂಗಳವಾರ ಬೆಳಿಗ್ಗೆ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕಟೀಲು ಸೇರಿದಂತೆ ವಿವಿಧ ದೇಗುಲಗಳ ತಂತ್ರಿಗಳಾಗಿರುವ ನಿವೃತ್ತ ಉಪನ್ಯಾಸಕ ವೇದವ್ಯಾಸ ತಂತ್ರಿ ಹಾಗೂ ಈರ್ವರು ಪುತ್ರಿಯರನ್ನು ಅಗಲಿದ್ದಾರೆ. ಶಿಬರೂರು ಮಠ

ಬೆಂಗಳೂರು:ಜೂ.7. ಕರ್ನಾಟಕದಲ್ಲಿ ಹನ್ನೊಂದು ಮಂದಿ ಐಎಎಸ್‌ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಪಿಲ್‌ ಮೋಹನ್‌- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ; ಉಮಾಶಂಕರ್‌ಎಸ್‌.ಆರ್‌. ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಶಿಕ್ಷಣ ಇಲಾಖೆ(ಉನ್ನತ ಶಿಕ್ಷಣ); ಮಂಜುನಾಥ ಪ್ರಸಾದ್‌- ಪ್ರಧಾನ ಕಾರ್ಯದರ್ಶಿ,ಸಹಕಾರ ಇಲಾಖೆ; ವಿ. ಅನುಕುಮಾರ್‌-ಕಾರ್ಯದರ್ಶಿ, ಕೃಷಿ ಇಲಾಖೆ; ಮೋಹನ್‌ ರಾಜ್‌ ಕೆ.ಪಿ.- ಕಾರ್ಯದರ್ಶಿ, ತೋಟಗಾರಿಕೆ, ರೇಷ್ಮೆ

ಮಂಗಳೂರು:ಜೂ.7.ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಕಾಳಗ ನಡೆದು, ಒಂದು ಹುಲಿ ಮೃತಪಟ್ಟ ಘಟನೆ ನಡೆದಿದೆ. ತನ್ನ ಸಂಗಾತಿಯೊಂದಿಗಿನ ಕಾದಾಟದಲ್ಲಿ 15 ವರ್ಷದ ಹೆಣ್ಣು ಹುಲಿ ಗಾಯಗೊಂಡಿತ್ತು. ಹೀಗಾಗಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಣ್ಣುಹುಲಿ ಜೂ. 7ರ ಇಂದು ಬೆಳಗ್ಗೆ ಸಾವನ್ನಪ್ಪಿದೆ. ಮೃತಪಟ್ಟ ಹುಲಿಯ ಮರಣೋತ್ತರ