Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಲಖನೌ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಬಿಸಿ ಹೆಚ್ಚುತ್ತಿದೆ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಕಳುಹಿಸಲಾಗಿದೆ. ರಾಮಮಂದಿರವನ್ನು ಬಿಜೆಪಿ ತನ್ನ ಸಾಧನೆ ಎಂದು ಬಿಂಬಿಸುತ್ತಿದೆ. ಅಯೋಧ್ಯೆಯ ನಂತರ ಮಥುರಾ ಮತ್ತು ಕಾಶಿಯಲ್ಲೂ

ಬಳ್ಳಾರಿ: ಸುಮಾರು 50 ವರ್ಷಗಳ ನಂತರ ತಿರುಪತಿ ತಿರುಮಲ ಟ್ರಸ್ಟ್ (ಟಿಟಿಡಿ) ತನ್ನ ಪ್ರಸಿದ್ಧ ಲಡ್ಡುಗಳನ್ನು ತಯಾರಿಸಲು ಕರ್ನಾಟಕ ಹಾಲು ಒಕ್ಕೂಟದಿಂದ (ಕೆಎಂಎಫ್) ತುಪ್ಪ ಖರೀದಿಯನ್ನು ಸ್ಥಗಿತಗೊಳಿಸಿದೆ. ಕೆಎಂಎಫ್ ನೀಡಿರುವ ಬೆಲೆಯನ್ನು ಒಪ್ಪಿಕೊಳ್ಳದ ಟಿಟಿಡಿ ಮತ್ತೊಂದು ಕಂಪನಿಯೊಂದಿಗೆ ಮುಂದಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಭಾನುವಾರ ಹೇಳಿದರು. ಕೆಎಂಎಫ್ ತುಪ್ಪದಿಂದ

ಕೋಲಾರ: ಟೊಮ್ಯಾಟೊ ಬೆಲೆ ಗಗನಕ್ಕೇರುತ್ತಿದ್ದಂತೆ ಅದರಿಂದ ಲಕ್ಷಗಟ್ಟಲೆ ಹಣ ಗಳಿಸಿದವರು, ಟೊಮ್ಯಾಟೊ ಕಳವಿನ ಸುದ್ದಿಯನ್ನು ಕೇಳುತ್ತಿದ್ದೇವೆ. ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮ್ಯಾಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಈಗ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ಪತ್ತೆಯಾಗಿದೆ. ಮೊನ್ನೆ ಜುಲೈ 27 ರಂದು ಮಧ್ಯಾಹ್ನ ಕೋಲಾರದಿಂದ ಜೈಪುರಕ್ಕೆ ಸಾಗಿಸುತ್ತಿದ್ದ

ಬೆಂಗಳೂರು: ತರಕಾರಿ, ದವಸ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ನಾಳೆಯಿಂದ ಮತ್ತಷ್ಟು ದುನಿಯಾ ದುಬಾರಿ ಎನಿಸಲಿದೆ. ಹೊರಗಡೆ ಪ್ರಯಾಣಿಸುವಾಗ ಹಸಿವಾಯಿತೆಂದು ಹೊಟೇಲ್ ಒಳಗೆ ಕಾಲಿಟ್ಟರೆ ಜೇಬು ಭರ್ತಿಯಿಲ್ಲದೆ ಹೋದರೆ ಅರ್ಧ ಹೊಟ್ಟೆ ತುಂಬಿಸಿಕೊಂಡು ಬರಬೇಕಾದೀತು. ನಾಳೆ ಆಗಸ್ಟ್‌ 1 ರಿಂದ

ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಂತ್ರಸ್ತೆಯರು ಇದೀಗ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಬೇಕು ಎಂದು ಇಬ್ಬರು ಮಹಿಳೆಯರು ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಶ್ರೀಹರಿಕೋಟಾ: 7 ವಿದೇಶಿ ಉಪಗ್ರಹಗಳನ್ನು ಹೊತ್ತು ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಪಿಎಸ್​ಎಲ್​ವಿ-ಸಿ56 ರಾಕೆಟ್ ಯಶಸ್ವಿಯಾಗಿ ಉಡಾವಣೆಯಾಗಿದೆ. ಚಂದ್ರಯಾನ-3 ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಮತ್ತೊಂದು ರಾಕೆಟ್​ ಉಡಾವಣೆ ಮಾಡಿದ್ದು, ಸಿಂಗಾಪೂರದ ಉಪಗ್ರಹಗಳನ್ನು ಹೊತ್ತ ಪಿಎಸ್​ಎಲ್​ವಿ-ಸಿ56 ರಾಕೆಟ್​ ಅನ್ನು​ ಇಂದು ಬೆಳಗ್ಗೆ 6.30ಕ್ಕೆ ಆಂಧ್ರ ಪ್ರದೇಶದದ

ಮಲ್ಪೆ: ಕಲ್ಮಾಡಿ ಶ್ರೀ ಬಗ್ಗುಪಂಜುರ್ಲಿ ದೈವಸ್ಥಾನದ ಮುಂದಿನ ಮೂರು ವರ್ಷಗಳ ಅವಧಿಗೆ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸಾಧು ಸಾಲ್ಯಾನ್ ಪುನರ್ ಆಯ್ಕೆಯಾಗಿರುತ್ತಾರೆ. ಗೌರವಾಧ್ಯಕ್ಷರು : ಚಂದ್ರಶೇಖರ್ ಸೇರಿಗಾರ್ ಬಗ್ಗುಮನೆ ಸಾನಿಕ, ಪ್ರೇಮ್ ನಾಥ್ ಕಲ್ಮಾಡಿ, ಉಪಾಧ್ಯಕ್ಷರು : ದಯಾಕರ್.ವಿ. ಸುವರ್ಣ, ಶೇಖರ್ ಎನ್.ಕೋಟ್ಯಾನ್,ಸುಂದರ್ ಜೆ.ಕಲ್ಮಾಡಿ, ಚಂದ್ರಕಾಂತ್ ಕಲ್ಮಾಡಿ, ಪ್ರಧಾನ ಕಾರ್ಯದರ್ಶಿ: ಸತೀಶ್

ಪಣಜಿ: ವಿಮಾನ ನಿಲ್ದಾಣದಲ್ಲಿ ಬಾಂಬ್ ಇರುವುದಾಗಿ ಹುಸಿ ಕರೆ ಮಾಡಿದ ಆರೋಪದ ಮೇಲೆ ಗೋವಾದ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿರುವ 22 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಸಂಜೆ 4.45ರ ಸುಮಾರಿಗೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್ ನಗರದ 10 ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಸಾಹಿಬಾಗ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಂ ಡಿ ಚಂಪಾವತ್ ತಿಳಿಸಿದ್ದಾರೆ. ನಗರದ

ಉಡುಪಿ: ಕೊಲ್ಲೂರಿನ ಅರಿಶಿನ ಗುಂಡಿ ಜಲಪಾತ ವೀಕ್ಷಣೆಗೆ ಬಂದಾಗ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು, ಕೊಚ್ಚಿ ಹೋಗಿದ್ದ ಯುವಕ ಶರತ್ (23) ಮೃತದೇಹ ಪತ್ತೆಯಾಗಿದೆ. ಸತತ ಒಂದು ವಾರಗಳ ನಿರಂತರ ಶೋಧ ಕಾರ್ಯದ ಬಳಿಕ ಇಂದು ಮೃತದೇಹ ಪತ್ತೆಯಾಗಿದೆ. ಕೊಲ್ಲೂರಿನ ಅರಿಶಿನ ಗುಂಡಿ ಜಲಪಾತದ ಬಳಿ ಸ್ನೇಹಿತನೊಂದಿಗೆ ರೀಲ್ಸ್ ಮಾಡಲು