ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಪ್ರಕಾಶಂ (ಆಂಧ್ರ ಪ್ರದೇಶ): ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ಪ್ರಕಾಶಂ ಜಿಲ್ಲೆಯ ದರ್ಶಿ ಎಂಬಲ್ಲಿ ನಡೆದಿದೆ. ಅಪಘಾತಕ್ಕೀಡಾದ ಸಂದರ್ಭದಲ್ಲಿ ಬಸ್ ನಲ್ಲಿ 47 ಮಂದಿ ಇದ್ದರು ಎಂದು ತಿಳಿದುಬಂದಿದೆ. ಈ ಪೈಕಿ 7 ಮಂದಿ ಸ್ಥಳದಲ್ಲಿಯೇ

ನವದೆಹಲಿ: ಗಾಜಿಯಾಬಾದ್​ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6  ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಇಂದು ಮುಂಜಾನೆ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಶಾಲಾ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಮುಖಾಮುಖಿಯಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲಾ ಆರು ಮಂದಿ ಕಾರಿನಲ್ಲಿದ್ದು, ಕಾರು

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ, ದೆಹಲಿ ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಕ್ರೀಡಾಪಟುಗಳಿಗೆ ಕಿರುಕುಳ, ಲೈಂಗಿಕ ಕಿರುಕುಳ ನೀಡಿದ್ದು, ಈ ಕೃತ್ಯವನ್ನು ಶಿಕ್ಷಾರ್ಹ ಎಂದು ದೆಹಲಿ ಪೊಲೀಸರು ಪರಿಗಣಿಸಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಚಾರ್ಜ್​

ಕೋಲ್ಕತ್ತಾ: ಪಶ್ಚಿಮ ಬಂಗಾಳ ಗ್ರಾಮ ಪಂಚಾಯತ್ ಚುನಾವಣೆ ಮಂಗಳವಾರ ಪ್ರಕಟವಾಗುತ್ತಿದ್ದು, ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಆಡಳಿತರೂಢ ತೃಣಮೂಲ ಕಾಂಗ್ರೆಸ್ 3,700ಕ್ಕೂ  ಗ್ರಾಮ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 3,167 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ರಾಜ್ಯಾದ್ಯಂತ ಒಟ್ಟು 63,229 ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿಪಕ್ಷ ಬಿಜೆಪಿ

ಉಡುಪಿ:ಜು 10. ಇಲ್ಲಿನ ಸಂತೆಕಟ್ಟೆ ಬಳಿ ನಿರ್ಮಾಣವಾಗುತ್ತಿದ್ದ ಅಂಡರ್ ಪಾಸ್ ನಿರ್ಮಾಣ ಪ್ರದೇಶದಲ್ಲಿ ಸರ್ವೀಸ್ ರಸ್ತೆ ಕುಸಿದು ಸುಮಾರು 350ಕ್ಕೂ ಹೆಚ್ಚು ಮನೆ , ಹಾಗೂ ಅಂಗಡಿ ಮುಂಗಟ್ಟುಗಳಿಗೆ ರಸ್ತೆಯೇ ಇಲ್ಲದಂತಾಗಿದೆ. ಅಂಡರ್‌ಪಾಸ್ ನಿರ್ಮಾಣದ ಸನಿಹವಿದ್ದ ತಡೆಗೋಡೆ ಜುಲೈ 10 ರ ಸೋಮವಾರ ಬೆಳಿಗ್ಗೆ ಭಾಗಶಃ ಕುಸಿದಿದೆ. ಇದರಿಂದಾಗಿ ಸರ್ವಿಸ್

ಹ್ಯಾರಿ ಬ್ರೂಕ್ ಮತ್ತು ಕ್ರಿಸ್ ವೋಕ್ಸ್ ಅವರ ಅತ್ಯುತ್ತಮ ಬ್ಯಾಟಿಂಗ್ ಆಧಾರದ ಮೇಲೆ ಇಂಗ್ಲೆಂಡ್ 2023ರ ಆಶಸ್ ಸರಣಿಯ ಮೂರನೇ ಮತ್ತು ರೋಚಕ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾವನ್ನು ಮೂರು ವಿಕೆಟ್‌ಗಳಿಂದ ಸೋಲಿಸಿತು. ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಆತಿಥೇಯರು ಗೆಲ್ಲಲು 251 ರನ್‌ಗಳ ಗುರಿಯನ್ನು ಪಡೆದಿದ್ದರು. ಭಾನುವಾರ ನಾಲ್ಕನೇ ದಿನದಲ್ಲಿ

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಸ್ಕೂಟಿಗೆ ಟೊಮೆಟೊ ತುಂಬಿದ ಟೆಂಪೊ ಡಿಕ್ಕಿ (Accident) ಹೊಡೆದು ದಂಪತಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಬಳಿ ನಡೆದಿದೆ. ಶ್ಯಾಮಲಾ (35) ಮತ್ತು ಶ್ರೀರಾಮ್ (40) ಮೃತ ದಂಪತಿ. ಘಟನೆಯಲ್ಲಿ ದಂಪತಿಯ ಮೂವರು ಮಕ್ಕಳು ಗಾಯಗೊಂಡಿದ್ದು, ಈ ಪೈಕಿ ಒಂದು ಮಗು

ಚಿಕ್ಕೋಡಿ:ಜು 09. ಜುಲೈ 6 ರಿಂದ ನಾಪತ್ತೆಯಾಗಿದ್ದ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರು ಹತ್ಯೆಗೊಳಗಾಗಿದ್ದು, ಇಂದು ಅವರ ಅಂತ್ಯ ಸಂಸ್ಕಾರ ನಡೆಯಿತು. ಪಾರ್ಥಿವ ಶರೀರ ಮರಣ್ಣೋತ್ತರ ಪರೀಕ್ಷೆಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿಂದ ನೇರವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆ ಅವಾಂತರ ಮುಂದುವರೆದಿದ್ದು, ಭಾರಿ ಮಳೆ ಮತ್ತು ಪ್ರತೀಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಕರ್ತವ್ಯ ನಿರ್ವಹಣೆ ವೇಳೆ ಪೋಶನಾ ನದಿಯಲ್ಲಿ ಕೊಚ್ಚಿ ಹೋಗಿ ಭಾರತೀಯ ಸೇನೆಯ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ. ಪೂಂಛ್ ಜಿಲ್ಲೆಯ ಪೋಶನಾ ನದಿಯಲ್ಲಿ ಇಬ್ಬರು ಸೈನಿಕರು ನೀರು ಪಾಲಾಗಿದ್ದು, ಮೃತರ