ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಚಿಕ್ಕೋಡಿ: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಇದೀಗ ಬಹಿರಂಗಗೊಂಡಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಜುಲೈ 6ರಿಂದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿಗಾಗಿ ಜುಲೈ

ಮಂಗಳೂರು: ಪಿಂಚಣಿ ಉಪದಾನ ಪತ್ರಕ್ಕೆ ಸಹಿ ಹಾಕಲು 5 ಲಕ್ಷ ರೂಪಾಯಿ ಲಂಚ ಕೇಳಿದ ಅನುದಾನಿತ ಶಾಲಾ ಸಂಚಾಲಕಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಬಜ್ಪೆಯ ಶಾಲೆಯೊಂದರಲ್ಲಿ ನಡೆದಿದೆ. ಬಜಪೆ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ

ಬೆಂಗಳೂರು: ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ, ಗುರುವಾರ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯ ನಂತರ ನಡೆದ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಪ್ರಕಟಿಸಿದರು. ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ಉಪಸಭಾಧ್ಯಕ್ಷ ಸ್ಥಾನಕ್ಕೆ ರುದ್ರಪ್ಪ

ಜೋಹಾನ್ಸ್​ಬರ್ಗ್:ಜು 6. ದಕ್ಷಿಣ ಆಫ್ರಿಕಾದ ಜೋಹಾನ್ಸ್​ಬರ್ಗ್​ನ ಸಮೀಪದ ಬೋಕ್ಸ್‌ಬರ್ಗ್ ಜಿಲ್ಲೆಯ ಬಳಿಯ ಏಂಜೆಲೋ ಟೌನ್‌ಶಿಪ್‌ನಲ್ಲಿ ವಿಷಕಾರಿ ಅನಿಲ ಸೋರಿಕೆ ಉಂಟಾಗಿ ಮಕ್ಕಳು ಸೇರಿ 16 ಮಂದಿ ಮೃತಪಟ್ಟಿದ್ದಾರೆ. ಅನಿಲ ಸೋರಿಕೆಯಿಂದ ಸಾವನ್ನಪ್ಪಿದವರಲ್ಲಿ ಐವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅನಿಲ ಸಿಲಿಂಡರ್ ಅನ್ನು ಗುಡಿಸಲಿನೊಳಗೆ ಅಕ್ರಮವಾಗಿ ಚಿನ್ನ

ಉಡುಪಿ:ಜು 6. ಭಾರೀ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಶುಕ್ರವಾರ ಬಜೆಟ್ ಮುಗಿದ ಕೂಡಲೇ ಉಡುಪಿಗೆ ತೆರಳುವೆ ಎಂದರು. ಎಲ್ಲಾ ಅಧಿಕಾರಿಗಳ ಸಭೆ ನಡೆಸಿ

ಉಡುಪಿ: ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ತಮ್ಮ ಶಿಷ್ಯ ವೃಂದದವರೊಂದಿಗೆ ತಿರುಪತಿ ಶ್ರೀ ವೆಂಕಟೇಶನಕ್ಕೆ ತೆರಳಿ ದೇವರ ದರ್ಶನ ಪಡೆದರು. ಟಿಟಿಡಿ ವತಿಯಿಂದ ಶ್ರೀಗಳನ್ನು ಬರಮಾಡಿಕೊಂಡ ಆಡಳಿತ ಮಂಡಳಿ, ಶಿಷ್ಟಾಚಾರ ಪ್ರಕಾರ ಅವರಿಗೆ ಅದ್ದೂರಿ ಸ್ವಾಗತ ನೀಡಿದರು.

ಉಡುಪಿ: ಜಿಲ್ಲೆಯಾದ್ಯಂತ ಗುರುವಾರವೂ ಧಾರಾಕಾರ ಮಳೆ ಸುರಿಯುತ್ತಿದೆ.ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ವಿವಿಧೆಡೆಗಳಲ್ಲಿ ನೀರು ತುಂಬಿದ್ದು, ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲಾಗಿದೆ. ಆ ಕಾರ್ಯಕ್ಕೆ ಕೆಲವೆಡೆಗಳಲ್ಲಿ ಬೋಟುಗಳನ್ನು ಬಳಸಲಾಗಿದೆ‌. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮರವಂತೆ, ಉದ್ಯಾವರ, ಪಡುಕರೆ, ಕಾಪು ಮೊದಲಾದೆಡೆಗಳಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಮಳೆಯೊಂದಿಗೆ ವೇಗದ ಗಾಳಿ ಬೀಸುವ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಕಳೆದ ಮುರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ

ಬೆಂಗಳೂರು: ಕರ್ನಾಟಕದಲ್ಲಿ ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಬಹುನಿರೀಕ್ಷಿತ ಮುಂಗಾರು ಮಳೆ ರಾಜ್ಯಕ್ಕೆ ಆಗಮಿಸಿದ್ದು, ರೈತ ಸಮುದಾಯದಲ್ಲಿ ಸಂತಸ ಮೂಡಿಸಿದೆ. ರಾಜ್ಯ

ಬೈಂದೂರು:ಜು 4.: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಲೋಕಾಯುಕ್ತ ಕಾರ್ಯಾಚರಣೆ ನಡೆದಿದ್ದು, ಬೈಂದೂರು ಮೆಸ್ಕಾಂ ಲೈನ್ ಮ್ಯಾನ್ ರಮೇಶ್ ಬಡಿಗೇರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ 2,000 ರುಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ವಿದ್ಯುತ್ ಕಂಬದ ಲೈನ್ ನಿಷ್ಕ್ರಿಯಗೊಳಿಸಲು ರಮೇಶ್ ಲಂಚ ಸ್ವೀಕರಿಸುತ್ತಿದ್ದ. ಮರ ಕಡಿಯುವ ಸಂದರ್ಭ