ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬ್ಯಾಂಕಾಕ್‌: ಬಾಡಿಬಿಲ್ಡರ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಖ್ಯಾತರಾಗಿದ್ದ ಜೋ ಲಿಂಡ್ನರ್‌ (30) ನಿಧನರಾಗಿದ್ದಾರೆ. ರಕ್ತನಾಳ ಸಮಸ್ಯೆಯಿಂದ ಬಳಲುತ್ತಿದ್ದ ಜೋ ಲಿಂಡ್ನರ್‌ ಅವರು ಶನಿವಾರ ನಿಧನರಾಗಿದ್ದಾರೆ ಎಂದು ಅವರ ಗೆಳತಿ ನಿಚಾ ಅವರು ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 2 ದಿನಗಳ ಹಿಂದೆಯಷ್ಟೇ ಆರೋಗ್ಯಕರ ದೇಹದಾರ್ಢ್ಯ ಅಭ್ಯಾಸಗಳನ್ನು ರೂಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದ

ನವದೆಹಲಿ: ರಾಷ್ಟ್ರ ರಾಜಧಾನಿಯ ಭಜನ್‌ಪುರ ಪ್ರದೇಶದಲ್ಲಿ ಭಾನುವಾರ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಪಿಡಬ್ಲ್ಯೂಡಿ ಇಲಾಖೆ ಹನುಮಾನ್ ಮಂದಿರ ಮತ್ತು ಮಜರ್ ನ್ನು ಧ್ವಂಸಗೊಳಿಸಿದೆ. ಉದ್ದೇಶಿತ ರಸ್ತೆ ವಿಸ್ತರಣೆ ಯೋಜನೆಗೆ ದಾರಿ ಮಾಡಿಕೊಡುವ ಉದ್ದೇಶದಿಂದ ಈ ಧಾರ್ಮಿಕ ಕೇಂದ್ರಗಳನ್ನು ಕೆಡವಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಒತ್ತುವರಿ ತೆರವು ಕಾರ್ಯಾಚರಣೆ

ಇಂಫಾಲ: ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಅಪರಿಚಿತ ಬಂದೂಕುಧಾರಿಗಳು ನಡೆಸಿದೆ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ಸ್ವಯಂಸೇವಕರು ಸಾವನ್ನಪ್ಪಿದ್ದಾರೆಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ. ತಡರಾತ್ರಿ ಖೋಯಿಜುಮಂತಬಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. "ಗ್ರಾಮದ ಸ್ವಯಂಸೇವಕರು" ತಾತ್ಕಾಲಿಕ ಬಂಕರ್‌ನಲ್ಲಿ ಕಾವಲು ಕಾಯುತ್ತಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದೆ ಎಂದು ಹೇಳಿದ್ದಾರೆ. ಭದ್ರತಾ

ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಬದರಿನಾಥ್ ರಾಷ್ಟ್ರೀಯ ಹೆದ್ದಾರಿ (ಎನ್ ಹೆಚ್ 7ನ್ನು) ಲಂಬಗಡ ಮತ್ತು ಖಚಡಾ ಡ್ರೈನ್‌ಗಳಲ್ಲಿ ಕಳೆದ 13 ಗಂಟೆಗಳಿಂದ ಮುಚ್ಚಲಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಸಾರ್ವಜನಿಕರ ಪ್ರಯಾಣಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರಂತರವಾಗಿ ಶ್ರಮಿಸುತ್ತಿದೆ. ಹೆದ್ದಾರಿ ಬಂದ್

ನೈರೋಬಿ:ಜು 01.ಹಡಗಿಗೆ ಸಂಬಂಧಿಸಿದ ವಸ್ತುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು, ಪಾದಚಾರಿಗಳ ಮೇಲೆ ಹರಿದ ಪರಿಣಾಮ 48 ಜನ ಮೃತಪಟ್ಟಿರುವ ಘಟನೆ ಪಶ್ಚಿಮ ಕೀನ್ಯಾದ ಲೊಂಡಿಯಾನಿ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ

ಹುಬ್ಬಳ್ಳಿ: ‘ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದ್ದು, ಜಲಪ್ರಳಯ ಆಗುವ ಲಕ್ಷಣಗಳಿವೆ. ಪ್ರಕೃತಿ ಮುನಿದಿದ್ದು ಸರಿಯಾಗಲಿದೆ. ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ. ಜನರ ಅಕಾಲ ಮೃತ್ಯು ಸಂಭವಿಸುವ ಸಾಧ್ಯತೆ ಇದೆ’ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಾಗತಿಕ

ರಾಯಗಡ: ಒಡಿಶಾದ ರಾಯಗಡ ಜಿಲ್ಲೆಯ ಕ್ರಷರ್ ಘಟಕದಲ್ಲಿ ಶಂಕಿತ ನಕ್ಸಲೀಯರು 9 ಯಂತ್ರಗಳಿಗೆ ಬೆಂಕಿ ಹಚ್ಚಿದ್ದು,  ಆಸ್ತಿಪಾಸ್ತಿಗಳನ್ನು ದೋಚಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.  ಶುಕ್ರವಾರ ತಡರಾತ್ರಿ ಮುನಿಗೂಡ ಪೊಲೀಸ್ ಠಾಣಾ ವ್ಯಾಪ್ತಿಯ ದೇವುಕುಪಲಿ ಬಳಿ ಈ  ಘಟನೆ ನಡೆದಿದೆ. ಕೆಲವು ಮಹಿಳಾ ಕಾರ್ಯಕರ್ತರು ಸೇರಿದಂತೆ 10 ನಕ್ಸಲೀಯರು ಕ್ರಷರ್ ಘಟಕಕ್ಕೆ ನುಗ್ಗಿದ್ದು,

ಮುಂಬೈ: ಬೈಜೂಸ್ ಭಾರತ ಕ್ರಿಕೆಟ್ ತಂಡದ ಪ್ರಾಯೋಜಕತ್ವದಿಂದ ಹಿಂದೆ ಸರಿದ ದೀರ್ಘ ಕಾಲದ ನಂತರ ಬಿಸಿಸಿಐ ಹೊಸ ಪ್ರಾಯೋಜಕರನ್ನು ಆಯ್ಕೆ ಮಾಡಿದೆ. ಆನ್‌ಲೈನ್ ಫ್ಯಾಂಟಸಿ ಗೇಮಿಂಗ್ ವೇದಿಕೆಯಾದ 'ಡ್ರೀಮ್11' ಇನ್ಮುಂದೆ ಮೂರು ವರ್ಷಗಳ ಅವಧಿಗೆ ಟೀಂ ಇಂಡಿಯಾದ ಪ್ರಾಯೋಜಕತ್ವ ವಹಿಸಿಕೊಳ್ಳಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಮುಂದುವರಿದಿದೆ. ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ ಹಲವರಿಗೆ ಬಿಜೆಪಿ ಶಿಸ್ತುಪಾಲನಾ ಸಮಿತಿಯಿಂದ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಲಾಗಿದೆ.. ಇದರ ಬೆನ್ನಲ್ಲೇ ಇಂದು (ಶನಿವಾರ) ರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್

ಬ್ರಹ್ಮಾವರ:ಬ್ರಹ್ಮಾವರ ಸರಕಾರಿ ಪ್ರೌಢಶಾಲೆ (ಬೋರ್ಡ್ ಹೈಸ್ಕೂಲ್) ಯಲ್ಲಿ ಜೂನ್ 30, 2023ರಂದು ಈ ಬಾರಿಯ ಯಕ್ಷಶಿಕ್ಷಣ ತರಬೇತಿಯನ್ನುಉಡುಪಿ ಶಾಸಕರಾದಯಶ್‍ಪಾಲ್ ಸುವರ್ಣಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಕೆ.ರಘುಪತಿ ಭಟ್ 16 ವರ್ಷದ ಹಿಂದೆತಾವು ಶಾಸಕರಾಗಿದ್ದಾಗ ಆರಂಭಿಸಿದ ಪ್ರೌಢಶಾಲಾ ವಿದ್ಯಾರ್ಥಿಗಳ ಯಕ್ಷಶಿಕ್ಷಣದ ಈ ಅಭಿಯಾನವುಅತ್ಯಂತ ಮೌಲಿಕವಾಗಿದ್ದು, ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದೆ. ಈ ಹಿನ್ನಲೆಯಲ್ಲಿ