Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಸತ್ನಾ: 12 ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳ ಮನೆಯನ್ನು ಮಧ್ಯ ಪ್ರದೇಶ ಸರ್ಕಾರ ಧ್ವಂಸ ಮಾಡಿದೆ ಎಂದು ಹೇಳಲಾಗಿದೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ದೇವಸ್ಥಾನ ಪಟ್ಟಣವಾದ ಮೈಹಾರ್‌ನಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕ್ರೂರವಾಗಿ ವರ್ತಿಸಿದ ಆರೋಪ ಹೊತ್ತಿರುವ ಇಬ್ಬರ

ನವದೆಹಲಿ: ಮೇ 4 ರಂದು ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ರಾಜ್ಯದಲ್ಲಿನ  ಎರಡು ಸಮುದಾಯದ ಪೈಕಿ ಒಂದು ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಇನ್ನೊಂದು ಸಮುದಾಯದ ಪುರುಷರು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿರುವುದನ್ನು ತೋರಿಸುವ ವಿಡಿಯೋ ಜುಲೈ 19ರಂದು

ನವದೆಹಲಿ: ಲೋಕಸಭೆ ಮತ್ತು ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಭಾರತೀಯ ಜನತಾ ಪಕ್ಷವು ಆಡಳಿತಾತ್ಮಕ ಬದಲಾವಣೆ ಮಾಡಿದೆ. ಪಕ್ಷವು ಕೇಂದ್ರ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕರ್ನಾಟಕದ ಸಿ.ಟಿ ರವಿ ಅವರಿಗೆ ಕೊಕ್ ನೀಡಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರೀಯ

ರಾಂಚಿ: ಇಂದು ದೇಶದ್ಯಾಂತ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಸಂಭ್ರಮದ ನಡುವೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈ ಟೆನ್ಷನ್‌ ವಿದ್ಯುತ್‌ ತಂತಿ ತಗುಲಿ ನಾಲ್ವರು ಮೃತಪಟ್ಟಿದ್ದಾರೆ 10 ಮಂದಿ ಗಾಯಗೊಂಡ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಖೆಟ್ಕೊ ಎನ್ನುವ

ಬುಲ್ದಾನ (ಮಹರಾಷ್ಟ್ರ): ಎರಡು ಬಸ್'ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಮಂದಿ ಸಾವನ್ನಪ್ಪಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮುಂಬೈ ನಾಗ್ಪುರ ಹೆದ್ದಾರಿಯ ಲಕ್ಷ್ಮಿ ನಗರ ಮಲ್ಕಾಪುರ ಬಳಿಯ ಮೇಲ್ಸೇವೆಯಲ್ಲಿ ಶನಿವಾರ ನಡೆದಿದೆ. ಅಪಘಾತವಾದ ಬಸ್​ ಟ್ರಾವೆಲ್ಸ್ ಸಂಖ್ಯೆ MH 08. 9458 ಆಗಿದ್ದು, ಅಮರನಾಥ ತೀರ್ಥಯಾತ್ರೆಯಿಂದ ಹಿಂತಿರುಗಿ

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಒಟ್ಟು 222 ವಾಹನ ಸವಾರರ ಚಾಲನಾ ಪರವಾನಗಿಯನ್ನು ಅಮಾನತುಪಡಿಸುವಂತೆ ಮಂಗಳೂರು ನಗರ ಪೊಲೀಸರು ಸಂಬಂಧಿಸಿದ ಆರ್ ಟಿಒಗಳಿಗೆ ಶಿಫಾರಸು ಮಾಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಸಂಚಾರ ಉಪ ವಿಭಾಗದ ಅಧೀನ ಠಾಣಾ ವ್ಯಾಪ್ತಿಯ ರಸ್ತೆಗಳಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷತದಿಂದ ಚಾಲನೆ

ನವದೆಹಲಿ: ಭಾರಿ ಮಳೆ ಮತ್ತು ಭೂಕುಸಿತದಿಂದ ಪದೇಪದೆ ರಸ್ತೆಗಳು ಕೊಚ್ಚಿ ಹೋಗುತ್ತಿದ್ದು, ಪ್ರಕೃತಿ ವಿಕೋಪಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಜ್ಞರ ಸಮಿತಿ ರಚಿಸಲಿದೆ ಮತ್ತು ನೈಸರ್ಗಿಕ ವಿಕೋಪಗಳಿಗೆ ತುತ್ತಾಗುವ ಪ್ರದೇಶಗಳಲ್ಲಿ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸುವ

ಉಡುಪಿ: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಂದೂ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಕಾನೂನು ಪ್ರಕಾರ ಕ್ರಮಕೈಗೊಂಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ(ಎನ್‌ಸಿಡಬ್ಲ್ಯು)ದ ಸದಸ್ಯೆ ಖುಷ್ಬು ಸುಂದರ್ ಅವರು ಗುರುವಾರ ಹೇಳಿದ್ದಾರೆ. ಇಂದು ಉಡುಪಿ ಜಿಲ್ಲಾ ಪೊಲೀಸ್

ಬೆಂಗಳೂರು: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯ ವಿಡಿಯೊವನ್ನು ಶೌಚಾಲಯದಲ್ಲಿ ಸಹಪಾಠಿಗಳು ಚಿತ್ರೀಕರಿಸಿದ ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಕೈಗೊಳ್ಳಬೇಕೆಂದು ಬಿಜೆಪಿ ಆಗ್ರಹಿಸುತ್ತಿದೆ. ಘಟನೆ ನಡೆದಿರುವ ನೇತ್ರ ಜ್ಯೋತಿ ಕಾಲೇಜಿಗೆ ರಾಷ್ಟ್ರೀಯ ಮಹಿಳಾ ಆಯೋಗದ (National Commission for Women) ಸದಸ್ಯೆ

ನವದೆಹಲಿ: ಬಿಜೆಪಿ-ಆರ್‌ಎಸ್‌ಎಸ್ ಕೇವಲ ಅಧಿಕಾರದ ಮೇಲೆ ಮಾತ್ರ ಆಸಕ್ತಿ ಹೊಂದಿದ್ದು, ಜನರ ದುಃಖ ಮತ್ತು ನೋವಿನ ಬಗ್ಗೆ ಕಾಳಜಿ ವಹಿಸದೆ ದೇಶವನ್ನು ವಿಭಜಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ. ಯೂತ್ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, 'ಬಿಜೆಪಿ-ಆರ್‌ಎಸ್‌ಎಸ್‌ಗೆ ಅಧಿಕಾರ ಮಾತ್ರ ಬೇಕು