ಮುಂಬೈ: ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಿನ್ನೆ ಶನಿವಾರ ಹಿಂಸಾಚಾರ ಸಂಭವಿಸಿದ್ದು, ಸರ್ಕಾರಿ ಉದ್ಯೋಗಗಳಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ಕೋರಿ ಪ್ರತಿಭಟನಾಕಾರರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಂಬಾಡ್‌ನಲ್ಲಿ ಟ್ರಕ್‌ಗೆ ಬೆಂಕಿ ಹಚ್ಚಲಾಗಿದ್ದು, ಇತರೆ ವಾಹನಗಳು ಧ್ವಂಸಗೊಂಡಿವೆ.
ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ನಂತರ ಶುಕ್ರವಾರವೂ ಹಿಂಸಾಚಾರ ಭುಗಿಲೆದ್ದಿತು