ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು. ಕಾವೇರಿ ನದಿ ನೀರು

ಬೆಳ್ಳೂರು ಕ್ರಾಸ್(ಆದಿಚುಂಚನಗಿರಿ): ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ. ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್​​​ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು

ಬೆಂಗಳೂರು:ಸೆ 27. ಎರಡು ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಹೇಳಿದ್ದ ರಿಸರ್ವ್ ಬ್ಯಾಂಕ್‌ ಆಫ್‌ ಇಂಡಿಯಾ ಪಿಂಕ್ ನೋಟ್ ಹಿಂದಿರುಗಿಸಿ, ಬೇರೆ ನೋಟು ಪಡೆಯುವಂತೆ ಸೆ.30ರವರೆಗೆ ಗಡುವು ನೀಡಿತ್ತು. ಸದ್ಯ ಈ ಅವಧಿ ಮುಕ್ತಾಯದ ಹಂತದಲ್ಲಿದ್ದು ಇನ್ನು ಕೇವಲ ಮೂರು ದಿನಗಳಷ್ಟೇ ಬಾಕಿ ಉಳಿದಿದೆ. ಕಳೆದ ಮೇ ನಲ್ಲಿ

ಇರಾಕ್‌:ಸೆ 27. ವಿವಾಹ ಸಮಾರಂಭ ನಡೆಯುತ್ತಿದ್ದ ಸಭಾಂಗಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 114ಮಂದಿ ಸಜೀವ ದಹನಗೊಂಡು 150ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಇರಾಕ್ ನಲ್ಲಿ ಸಂಭವಿಸಿದೆ. ಇರಾಕ್‌ನ ನಿನೆವೆ ಪ್ರಾಂತ್ಯದ ಹಮ್ದನಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ

ಉಡುಪಿ: ನಗರದ ಗುಂಡಿಬೈಲಿನಲ್ಲಿರುವ ಯಮಹಾ ದ್ವಿಚಕ್ರಗಳ ಶೋರೂಂ ಉಡುಪಿ ಮೋಟರ್ಸ್ ಇದೀಗ ಪ್ರೀಮಿಯಂ ದರ್ಜೆಗೇರಿ ಕರಾವಳಿ ಕರ್ನಾಟಕದ ಪ್ರಪ್ರಥಮ 'ಬ್ಲೂ ಸ್ಕ್ವೇರ್' ಶೋರೂಂ ಎಂಬ ಮಾನ್ಯತೆ ಪಡೆದಿದೆ. ನೂತನವಾಗಿ ಸಂಪೂರ್ಣ ಹವಾನಿಯಂತ್ರಿತ ಬ್ಲೂ ಸ್ಕ್ವೇರ್ ಶೋರೂಮನ್ನು ಯಮಹಾ ಇಂಡಿಯಾದ ಮಾರಾಟ ವಿಭಾಗದ ಮುಖ್ಯಸ್ಥ ಎಚ್. ಕವಾಯಿ ಸ್ಯಾನ್ ರವರು ಸೆ.

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೊರತೆಯಿಂದ ತೀವ್ರ ಬರಗಾಲ ಉಂಟಾಗಿರುವಾಗ ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಿರಿಯ ಚಳವಳಿಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಡಿದ್ದು ಅಂದರೆ ಸೆಪ್ಟೆಂಬರ್ 29ರಂದು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ

ಚಾಮರಾಜನಗರ: ಚಾಮರಾಜನಗರಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆಯನ್ನು ಸಡ್ಡು ಸಿಎಂ ಸಿದ್ದರಾಮಯ್ಯ ಇಂದು ಬುಧವಾರ ಚಾಮರಾಜನಗರದ ಮಲೆ ಮಹದೇಶ್ವರಕ್ಕೆ ಭೇಟಿ ನೀಡಿದ್ದಾರೆ. ಕಳೆದ ರಾತ್ರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ ಅವರು, ಎರಡನೇ ಬಾರಿಗೆ ಅವರು ಮುಖ್ಯಮಂತ್ರಿ ಆದ ಬಳಿಕ ಇದು ಮೊದಲ

ಹ್ಯಾಂಗ್ ಝೌ: ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಮಂಗಳವಾರ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು ಈಕ್ವೇಸ್ಟ್ರಿಯನ್ ಅಥವಾ ಕುದುರೆ ಸವಾರಿಯಲ್ಲಿ ಬರೊಬ್ಬರಿ 41 ವರ್ಷಗಳ ಬಳಿಕ ಭಾರತ ತಂಡಕ್ಕೆ ಚಿನ್ನದ ಪದಕ ಲಭಿಸಿದೆ. ಹೌದು..2023 ರ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾರತದ ಕುದುರೆ ಸವಾರಿ ತಂಡವು ಇತಿಹಾಸವನ್ನು ನಿರ್ಮಿಸಿದ್ದು, ಟೀಮ್ ಡ್ರೆಸ್ಸೇಜ್

ಬಾಲಿವುಡ್ ನ ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ 'ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಂದಿದೆ. ಅವರಿಗೆ ಈ ಬಾರಿಯ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಂಗಳವಾರ ತಿಳಿಸಿದ್ದಾರೆ. ದೇಶದ ಅತ್ಯುತ್ತಮ ನಟಿಯರಲ್ಲಿ ಒಬ್ಬರಾದ