Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮೂಡಬಿದಿರೆ:ಅ.31. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಮಿಜಾರುಗುತ್ತು ಆನಂದ ಆಳ್ವ ಇಂದು ಮ೦ಗಳವಾರದ೦ದು ನಿಧನ ಹೊಂದಿದ್ದಾರೆ. 106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲರಾಗಿ ಗುರುತಿಸಿಕೊಂಡಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ

ಉಡುಪಿ:ಅ.31,ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ವಂಚನೆ ಆರೋಪಿಯಾಗಿರುವ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಕುಂದಾಪುರ ಮೂಲದ ಚೈತ್ರಾಳನ್ನು , ಮತ್ತೊಂದು ವಂಚನೆ ಪ್ರಕರಣದ ತನಿಖೆಗಾಗಿ ಬ್ರಹ್ಮಾವರ ಠಾಣೆಗೆ ಕರೆ ತರಲಾಗಿದೆ. ಬಟ್ಟೆ ಅಂಗಡಿಯನ್ನು ತೆರೆದುಕೊಂಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ಸುಧೀನ್

ನವದೆಹಲಿ: ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ. ಹೌದು. ಕಳೆದ ವಾರ ಕೆಜಿ 40-50 ರೂ. ಇದ್ದ ಈರುಳ್ಳಿ ಈಗ ರೂ. 100 ಅಸುಪಾಸಿನಲ್ಲಿದ್ದು, ಬಡ ಹಾಗೂ ಮಧ್ಯಮ ವರ್ಗದವರ ಕೈ ಸುಡುತ್ತಿದೆ. ಅತಿವೃಷ್ಟಿ ಮತ್ತು ಪ್ರವಾಹದಿಂದ ಉತ್ವಾದನೆ ಕುಂಠಿತ ಹಾಗೂ ಪೂರೈಕೆಯ ಕೊರತೆಯಿಂದಾಗಿ ಬೆಲೆಗಳು ಗಗನಕ್ಕೇರಿದೆ. ಕರ್ನಾಟಕದಲ್ಲಿಯೂ

ಬೆಂಗಳೂರು: ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ. ಇದೀಗ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಹೊರಬಿದ್ದಿದೆ. ಸಿಎಂ ಸಿದ್ದರಾಮಯ್ಯ  ನೇತೃತ್ವದಲ್ಲಿ

ಬೆಂಗಳೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವದ ಅಂಗವಾಗಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ನಂತರ ಕಾರ್ಯಕ್ರಮವನ್ನ ಉದ್ದೇಶಿಸಿ

ಮೂಡುಬಿದಿರೆ : ಅ.31.ಹಿರಿಯ ಪತ್ರಕರ್ತ, ಸಾಹಿತಿ, ಸಂಘಟಕ ಶೇಖರ ಅಜೆಕಾರು (54) ಅವರು ಹೃದಯಾಘಾತದಿಂದ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಕಾರ್ಕಳ ತಾಲೂಕಿನ ಅಜೆಕಾರು ಗ್ರಾಮದ ನಿವಾಸಿಯಾಗಿರುವ ಶೇಖರ ಅಜೆಕಾರು ಅವರು ಮಕ್ಕಳ ಸಾಹಿತ್ಯದ ಕುರಿತು ಹೆಚ್ಚು ಆಸಕ್ತಿ ವಹಿಸಿ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುತ್ತಿದ್ದರು. ಅಲ್ಲದೆ ಗ್ರಾಮೋತ್ಸವದ ಮೂಲಕ ವಿವಿಧ

ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರದ ನಿವಾಸಿ ನೌಸೀನ್ (22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು

ಛತ್ರಪತಿ ಸಂಭಾಜಿನಗರ: ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಈ ಸಂಬಂಧ ಬೀಡ್ ಜಿಲ್ಲೆಯಲ್ಲಿ ಪೊಲೀಸರು 49 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ರಾಜಕಾರಣಿಗಳ ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರ ಮತ್ತು ಬೆಂಕಿ ಹಚ್ಚಿದ ಸರಣಿ ಘಟನೆಗಳ ನಂತರ ಸೋಮವಾರ ಸಂಜೆ ಬೀಡ್

ಬೆಂಗಳೂರು: ಬೆಳ್ಳಂಬೆಳಗ್ಗೆ ಚಿನ್ನದಂಗಡಿ ಮಾಲೀಕರಿಗೆ ಶಾಕ್‌ ನೀಡಿದ ಆದಾಯ ತೆರಿಗೆ ಅಧಿಕಾರಿಗಳು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಂಗಳವಾರ ಏಕಕಾಲದಲ್ಲಿ ಹಲವು ಜ್ಯುವೆಲರ್‌ಗಳ ಮೇಲ ದಾಳಿ ನಡೆಸಿದ್ದಾರೆ. ಉಡುಪಿ ನಗರ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಮತ್ತಿತರ ಕಡೆಗಳಲ್ಲಿ ಐಟಿ ದಾಳಿ ನಡೆದಿದೆ ಎಂದು ಮೂಲಗಳು

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC)  ಮತ್ತೆ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಇಂದು ಸೂಚನೆ ನೀಡಿದೆ. ಇಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್​ ನೀರು