ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿ:ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ ಭಾನುವಾರದ೦ದು "ಮಹಿಷಾಸುರ ಮರ್ದಿನಿ"ಯ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಟೆಲ್ ಅವೀವ್: ಹಮಾಸ್ ಉಗ್ರ ದಾಳಿ ಬಳಿಕ ಗಾಜಾಪಟ್ಟಿಯಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ವೈಮಾನಿಕ ದಾಳಿ ತೀವ್ರವಾಗಿದ್ದು, ಜನಸಮೂಹ ಮತ್ತು ಬೃಹತ್ ಕಟ್ಟಡಗಳಿಂದ ತುಂಬಿ ತುಳುಕುತ್ತಿದ್ದ ಗಾಜಾ ನಗರ ಇದೀಗ ಅಸ್ಥಿಪಂಜರದಂತಾಗಿದೆ. ಇಸ್ರೇಲ್‌ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿರುವ ಕಾರಣ ಗಾಜಾ ನಗರದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಬಿಡಿ, ಅನ್ನ, ನೀರೂ ಕೂಡ ಸಿಗದಂತಾಗಿದೆ.

ಬೆಂಗಳೂರು: ಹಿಂದೂಪರ ಸಂಘಟನೆಯ ಕಾರ್ಯಕರ್ತೆಯೊಬ್ಬರ ವಿರುದ್ಧದ ಚುನಾವಣಾ ಟಿಕೆಟ್ ವಂಚನೆ ಪ್ರಕರಣ  ಹಸಿರಾಗಿರುವಂತೆಯೇ ಇತ್ತ ರಾಜ್ಯದಲ್ಲಿ ಮತ್ತೊಂದು ಚುನಾವಣಾ ಟಿಕೆಟ್ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ವರ ವಿರುದ್ಧ ಪೊಲೀಸ್ ಎಫ್ ಐಆರ್ ದಾಖಲಾಗಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣ ಇದಾಗಿದ್ದು, ಕೊಟ್ಟೂರು ನಿವಾಸಿ, ನಿವೃತ್ತ

ಮಂಗಳೂರು: ಅ.22: ಮಂಗಳೂರಿನಲ್ಲಿ ದಸರಾ ಹಬ್ಬ ವಿಜೃಂಭನೆಯಿಂದ ನಡೆಯುತ್ತಿದ್ದು ಅ.23ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಅ.24ರಂದು ಸಂಜೆ 4 ಗಂಟೆಯಿಂದ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಎಂದು ಕರೆಯಲಾಗುವ

ಉಡುಪಿ:ಅ.22. ನದಿಗೆ ಸ್ನಾನಕ್ಕೆಂದು ಹೋದ ಇಬ್ಬರು ನೀರು ಪಾಲಾದ ಘಟನೆ ಹೆಬ್ರಿ ಸಮೀಪದ ಕಬ್ಬಿನಾಲೆ ಮತ್ತಾವು ನಡೆದಿದೆ. ಕರ್ಜೆ ನಿವಾಸಿ ಉಮೇಶ್ ಶೆಟ್ಟಿ (48) ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಚಾರ ಹುರ್ತುರ್ಕೆ ನಿವಾಸಿ ಪ್ರಸ್ತುತ್ ಹೆಗ್ಡೆ (21) ಮೃತಪಟ್ಟವರು. ಅ.21ರಂದು ಸಂಜೆ 3 ಗಂಟೆಗೆ ಸ್ನಾನಕ್ಕೆ ಹೋದವರು ಕಾಲು ಜಾರಿ ಬಿದ್ದು

ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ​​ಕ್ರೀಡಾಂಗಣದಲ್ಲಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಸರಣಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಉಭಯ ತಂಡಗಳು ಇಂದು ಸೆಣೆಸುತ್ತಿವೆ. ಸದ್ಯ

ನವದೆಹಲಿ: ಯುದ್ಧಪೀಡಿತ ಗಾಜಾಗೆ ಜಗತ್ತಿನಾದ್ಯಂತ ನೆರವಿನ ಮಹಾಪೂರ ಹರಿದು ಬರುತ್ತಿದ್ದು, ಮಾನವೀಯ ಆಧಾರದ ಮೇಲೆ ಭಾರತ ಕೂಡ ವೈದ್ಯಕೀಯ ಅಗತ್ಯಗಳು ಮತ್ತು ವಿಪತ್ತು ಪರಿಹಾರ ವಸ್ತುಗಳನ್ನು ರವಾನಿಸಿದೆ. ಅ. 7ರಂದು ಇಸ್ರೇಲ್​ ಮೇಲೆ ಪ್ಯಾಲೆಸ್ತೀನ್​ನ ಹಮಾಸ್​ ಉಗ್ರರು ಗಾಜಾದಿಂದ 5 ಸಾವಿರ ರಾಕೆಟ್​ಗಳ ಮೂಲಕ ದಾಳಿ ಮಾಡಿ ಇಸ್ರೇಲ್​ನಲ್ಲಿ ಮಾರಣಹೋಮ

ಉಡುಪಿ:ಉಡುಪಿಯ ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ ಶನಿವಾರದ೦ದು "ಅಂತಪುರದಲ್ಲಿ ರುಗ್ಮಿಣೀ"ಯ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಕಾರ್ಕಳ : ಅ.21: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಶೃತಿನ್ ಶೆಟ್ಟಿ (35) ಕಾಣೆಯಾಗಿರುವ ಕುರಿತು ಅವರ ಪತ್ನಿ ದೂರು ದಾಖಲಿಸಿದ್ದಾರೆ. ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ ಗುರುವಾರ ರಾತ್ರಿ 7.30ಕ್ಕೆ ಹೆಂಡತಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ

ವಿಜಯಪುರ: ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಕಷ್ಟದಲ್ಲಿರುವ ನೇಕಾರರಿಗೆ ದಸರಾ ಉಡುಗೊರೆ ನೀಡಿದ್ದು, ಕೈಮಗ್ಗಗಳಿಗೆ 250 ಯುನಿಟ್‌ವರೆಗೂ ಉಚಿತ ವಿದ್ಯುತ್‌ ನೀಡುವಂತೆ ಆದೇಶ ಹೊರಡಿಸಿದೆ. 10 ಎಚ್​ಪಿವರೆಗಿನ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ತಿಂಗಳಿಗೆ ಗರಿಷ್ಠ 250 ಯೂನಿಟ್ ಉಚಿತ ವಿದ್ಯುತ್ ನೀಡಲು ಆದೇಶ ಹೊರಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ