Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದಾದ್ಯಂತ ಶನಿವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮಧ್ಯ ಕರ್ನಾಟಕದ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ,

ಬೆಂಗಳೂರು: ಅಡುಗೆ ಮನೆಯನ್ನೇ ಡ್ರಗ್ಸ್ ತಯಾರಿಸುವ ಕಾರ್ಖಾನೆಯನ್ನಾಗಿ ಮಾಡಿಕೊಂಡಿದ್ದ ನೈಜೀರಿಯಾದ ಪ್ರಜೆಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ನೈಜೀರಿಯಾ ಪ್ರಜೆ ಬೆಂಜಮಿನ್ ಅವಲಹಳ್ಳಿಯ ತನ್ನ ಮನೆಯ ಕಿಚನ್‌ನಲ್ಲಿ ಕಚ್ಚಾ ಪದಾರ್ಥ ಬಳಸಿಕೊಂಡು ಸ್ಟೌ ಮೇಲಿಟ್ಟು ಬೆಂಕಿ ಹೊತ್ತಿಸಿ, ದೋಸೆಯ ರೀತಿ ಮಾಡಿಕೊಳ್ತಿದ್ದ. ಆ ಬಳಿಕ

ಬೆಂಗಳೂರು: ಮಾತ್ರೆ ಹಾಗೂ ಒಳ ಉಡುಪಿನಲ್ಲಿ ಚಿನ್ನಭಾರಣ ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು ಬೆಂಗಳೂರು ವಿಮಾನ ನಿಲ್ದಾಣದ ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ 3.9 ಕೋಟಿ ರೂ. ಮೌಲ್ಯದ 5.135 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎರಡು ದಿನದಲ್ಲಿ ಕುವೈತ್, ದುಬೈ, ಶಾರ್ಜಾ, ಮತ್ತು ಬ್ಯಾಂಕಾಕ್‍ನಿಂದ ಬೆಂಗಳೂರು ಅಂತರರಾಷ್ಟ್ರೀಯ

ಗೋರಖ್‌ಪುರ: ಜಗದೀಶ್‌ಪುರ ಸಮೀಪದ ಗೋರಖ್‌ಪುರ-ಕುಶಿನಗರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್‌ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಐದು ಆಂಬ್ಯುಲೆನ್ಸ್‌ಗಳ ಸಹಾಯದಿಂದ ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಇಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.

ನವದೆಹಲಿ: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪವನ್ ಕುಮಾರ್ ಮುಂಜಾಲ್ ವಿರುದ್ಧ ಜಾರಿ ನಿರ್ದೇಶನಾಲಯವು ಇಂದು ಧನ್ತೇರಸ್ ಮೇಲೆ ಮಹತ್ವದ ಕ್ರಮ ಕೈಗೊಂಡಿದೆ. ಮಾಹಿತಿಯ ಪ್ರಕಾರ, ಇಡಿ ದೆಹಲಿಯಲ್ಲಿರುವ ಪವನ್ ಮುಂಜಾಲ್ ಅವರ ಮೂರು ಆಸ್ತಿಗಳನ್ನು ವಶಪಡಿಸಿಕೊಂಡಿದೆ. ಇವರ ಬೆಲೆ ಸುಮಾರು 25 ಕೋಟಿ ಎಂದು ಹೇಳಲಾಗುತ್ತಿದೆ. ಮನಿ

ಮಂಗಳೂರು: ನಗರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ ಸಿ ರೋಡ್ ನ ರಾಷ್ಟ್ರೀಯ ಹೆದ್ದಾರಿ 66ರ ಬಳಿಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳು ಕೇರಳ ಮೂಲದ ಮುಸ್ತಫಾ (37)

ಬೆಂಗಳೂರು: ಪಿಎಸ್ ಐ ಮರುಪರೀಕ್ಷೆಗೆ ಹೈಕೋರ್ಟ್ ಶುಕ್ರವಾರ ಆದೇಶ ನೀಡಿದೆ. 2021ರಲ್ಲಿ ನಡೆದ ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದು ಪರೀಕ್ಷಾರ್ಥಿಗಳು ದೂರು ಕೊಟ್ಟ ಹಿನ್ನೆಲೆಯಲ್ಲಿ ಹಗರಣ ಬೆಳಕಿಗೆ ಬಂದಿತ್ತು. ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇಂದು ಮಹತ್ವದ ಆದೇಶ ನೀಡಿರುವ ನ್ಯಾಯಾಲಯ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ

ಉಡುಪಿ:ನ.10: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಾಯಘಾತದಿಂದ ನಿನ್ನೆ (ನ.9ರಂದು) ರಾತ್ರಿ ನಿಧನರಾದರು. ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಅವರನ್ನ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಅಂಬುಲ್ಯಾನ್ಸ್ ನಲ್ಲಿ ಕರೆದೋಯ್ಯುತ್ತಿದ್ದಾಗ ದಾರಿ ಮದ್ಯೆ ಹೆಮ್ಮಣ್ಣ

ಉಡುಪಿ:ನ 10. ನಾಗಾಲ್ಯಾಂಡ್‌ನ ಮಾಜಿ ಗವರ್ನರ್‌, ಉಡುಪಿಯ ಕುಲಪತಿ ಪಿಬಿ ಆಚಾರ್ಯ ಶುಕ್ರವಾರ ನ.10ರಂದು ನಿಧನರಾಗಿದ್ದಾರೆ. ಪಿ ಬಿ ಆಚಾರ್ಯ ಎಂದೇ ಪ್ರಸಿದ್ದರಾಗಿದ್ದ ಪದ್ಮನಾಭ ಬಾಲಕೃಷ್ಣ ಆಚಾರ್ಯ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಬಿಜೆಪಿಗೆ ಸೇವೆ ಸಲ್ಲಿಸಿದ ಹಿರಿಯ ನಾಯಕರಾಗಿದ್ದರು. ಮಾರ್ಗರೆಟ್

ಗಾಜಾ: ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ನಡುವಿನ ಸಂಘರ್ಷ ಮುಂದುವರೆದಿದ್ದು, ಒಟ್ಟು 10,812 ಮಂದಿ ಸಾವನ್ನಪ್ಪಿದ್ದಾರೆ. ಈ ಸಂಘರ್ಷದಲ್ಲಿ 4,412 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್ ಗಾಜಾ ಪಟ್ಟಿ ಮೇಲೆ ವೈಮಾನಿಕ ದಾಳಿ ಆರಂಭಿಸಿ ಈಗ ಭೂಸೇನೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ.  ಅ.07 ರಂದು ಹಮಾಸ್