Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದವರಲ್ಲಿ ಕೆಲವರಿಗೆ ಒಂದು ಬಾರಿ ಹಣ ಬಂದಿದ್ದರೆ ಇನ್ನು ಕೆಲವರಿಗೆ ಇದುವರೆಗೆ ಹಣವೇ ಬಂದಿಲ್ಲ. ಅರ್ಜಿ ಸಲ್ಲಿಸಲು ಹೋದರೆ ಹತ್ತಾರು ದಾಖಲೆ ಕೇಳುತ್ತಾರೆ, ಅದು ಸರಿ ಇಲ್ಲ, ಇದನ್ನು ಬದಲಾಯಿಸಿಕೊಂಡು ಬನ್ನಿ ಎನ್ನುತ್ತಾರೆ ಹೀಗೆ

ಬೆಂಗಳೂರು: ಚೈತ್ರಾ ಕುಂದಾಪುರ ಗ್ಯಾಂಗ್​ನಿಂದ ಉದ್ಯಮಿಗೆ ಕೋಟ್ಯಾಂತರ ರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್​​ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದೆ. ಕೇಂದ್ರ ನಗರ ಅಪರಾಧ ವಿಭಾಗ ಮೊದಲ ಹೆಚ್ಚುವರಿ

ಬೆಂಗಳೂರು: ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ 2012ರಲ್ಲಿ ನಡೆದ ತೀವ್ರ ಸಂಚಲನ ಮೂಡಿಸಿದ್ದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಸಿಬಿಐ ವಿಶೇಷ ನ್ಯಾಯಾಲಯವು ಜುಲೈ 16 ರಂದು ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿತ್ತು

ವಾಷಿಂಗ್ಟನ್‌: ಗಾಜಾ ಪಟ್ಟಿ ಆಕ್ರಮಿಸುವ ಇಸ್ರೇಲ್‌ ನಡೆಗೆ ಅಮೆರಿಕ ವಿರೋಧ ವ್ಯಕ್ತಪಡಿಸಿದೆ. ಇದು ಇಸ್ರೇಲಿ ಜನರಿಗೆ ಒಳ್ಳೆಯದಲ್ಲ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.  ಇಸ್ರೇಲಿ ಪಡೆಗಳಿಂದ ಗಾಜಾವನ್ನುಮರು ಆಕ್ರಮಿಸಿಕೊಳ್ಳುವುದು ಸರಿಯಾದ ಕೆಲಸವಲ್ಲ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ ಹೇಳಿದ್ದಾರೆಂದು ದಿ ವಾಲ್ ಸ್ಟ್ರೀಟ್ ಜರ್ನಲ್

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಠಕ್ಕರ್‌ ನೀಡಲು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್‌ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಡಲು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಪ್ಲ್ಯಾನ್‌ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರ ಭಿನ್ನಮತ ದೆಹಲಿ ಅಂಗಳಕ್ಕೆ ತಲುಪಿದೆ. ಇದೆಲ್ಲದರ ನಡುವೆ ಲೋಕೋಪಯೋಗಿ ಸಚಿವ

ಉಡುಪಿ : ಉಚಿತ ಯೋಜನೆಗಳಿಂದ ಆರ್ಥಿಕತೆ ಹಾಳಾಗುತ್ತದೆ ಎಂದಿದ್ದ ಇದೇ ನರೇಂದ್ರ ಮೋದಿ ಈಗ "ಮೋದಿ ಕಿ ಗ್ಯಾರಂಟಿ" ಘೋಷಿಸಿದ್ದಾರೆ.ಇದು ನರೆಂದ್ರ ಮೋದಿ ಕಿ ಗ್ಯಾರಂಟಿ ಅಲ್ಲ ಇದು ಜನರಿಗೆ ಮತ್ತೋಮ್ಮೆ ಮಂಕು ಬೂದಿ ಎಂದು ಶ್ರೀ ಕೆ ಕೃಷ್ಣಮೂರ್ತಿ ಆಚಾರ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಉಡುಪಿ

ಉಡುಪಿ:ಮ೦ಗಳವಾರದ೦ದು (ನಿನ್ನೆ) ಉಡುಪಿ ನಗರಸಭೆಯಲ್ಲಿ ವಾರಹಿ ನೀರು ಫೆಬ್ರವರಿ ತಿಂಗಳಲ್ಲಿ ಉಡುಪಿಯ ನಗರದ ಜನತೆಗೆ ನೀಡುತ್ತೇವೆ ಎಂದು ಉಡುಪಿ ಶಾಸಕರ ಹೇಳಿಕೆ ಕೇವಲ ಪ್ರಚಾರಕ್ಕಾಗಿ ಹೇಳಿದ ಹೇಳಿಕೆಯಂತೆ ತೋರುತ್ತಿದೆ ವಾರಾಹಿ ನದಿ ನೀರಿನ ಜೋಡಣೆಯು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಆಗದಿದ್ದು ಈ ಬಗ್ಗೆ ಉಡುಪಿ ಶಾಸಕರು ಹಾಗೂ

ಉಡುಪಿ:ಜನವರಿ 2024ರಲ್ಲಿ ನಡೆಯುವ ಉಡುಪಿ ಶ್ರೀ ಪುತ್ತಿಗೆ ಪರ್ಯಾಯ ಉತ್ಸವದ ಸಂದರ್ಭದಲ್ಲಿ ಜನವರಿ 14 ರಿಂದ 19 ರವರೆಗೆ ಉಡುಪಿಗೆ ಬರುವ ಶ್ರೀಕೃಷ್ಣ ಭಕ್ತರಿಗೆ ತಮ್ಮ ಮನೆಗಳಲ್ಲಿ ಅತಿಥಿಗಳಾಗಿ ಸ್ವೀಕರಿಸಲು ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯು ಉಡುಪಿ ನಿವಾಸಿಗಳಲ್ಲಿ ಮನವಿ ಮಾಡಿದೆ. ಡಿಸೆಂಬರ್ 10ರೊಳಗೆ ಉಡುಪಿ ನಿವಾಸಿಗಳು ತಮ್ಮ ಮನೆಯಲ್ಲಿ

ಅಮರಾವತಿ:ನ,07.ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಪರಿಣಾಮ 10 ತಿಂಗಳ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪದೇಶದ ವಿಜಯವಾಡದಲ್ಲಿ ನ. 6 ರಂದು ಸಂಭವಿಸಿದೆ. ಬೆಳಿಗ್ಗೆ ಸುಮಾರು 8:30ರ ಸಮಯಕ್ಕೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ವಿಜಯವಾಡದಿಂದ ಗುಂಟೂರಿಗೆ ತೆರಳುವ ಬಸ್‌.

ನವದೆಹಲಿ: ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ನಾಕೌಟ್ ಹಂತಕ್ಕೂ ಮುನ್ನ ಬಾಂಗ್ಲಾದೇಶ ದೊಡ್ಡ ಹಿನ್ನಡೆ ಅನುಭವಿಸಿದ್ದು ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಟೂರ್ನಿಯಿಂದಲೇ ಹೊರಹೋಗಿದ್ದಾರೆ. ನವೆಂಬರ್ 6ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ ಬ್ಯಾಟಿಂಗ್ ಮಾಡುವಾಗ ಶಕೀಬ್ ಅಲ್ ಹಸನ್ ಗಾಯಗೊಂಡಿದ್ದರು. ಅವರ ಕೈ ಬೆರಳಿಗೆ ಗಾಯವಾಗಿದ್ದು