Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಬೆಂಗಳೂರು, (ನವೆಂಬರ್ 29): ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ವಾಪಸ್​ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಆದ್ರೆ, ಇತ್ತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda

ಮಂಗಳೂರು:ನ 28: ಭಿನ್ನ ಕೋಮಿನ ಯುವಕ-ಯುವತಿ ಕೆಲಸ ಬಿಟ್ಟು ಜತೆಯಾಗಿ ಸ್ಕೂಟರ್‌ ನಲ್ಲಿ ಹೋಗುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡು ನೈತಿಕ ಪೊಲೀಸ್‌ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ: ಮಂಗಳೂರು ಮಂಕಿ

ಕೊಲ್ಲಂ:ನ 28 : ಕೇರಳದ ಕೊಲ್ಲಂನಿಂದ ಅಪಹರಣಗೊಂಡಿದ್ದ ಆರು ವರ್ಷದ ಬಾಲಕಿ ಅಬಿಗೈಲ್ ಸಾರಾ ರೆಜಿ ಪತ್ತೆ ಸುರಕ್ಷಿತವಾಗಿ ಪತ್ತೆಯಾಗಿದ್ದಾಳೆ. ಅಪಹರಣಕಾರರು ಕೊಲ್ಲಂ ಆಶ್ರಮದ ಮೈದಾನದಲ್ಲಿ ಮಗುವನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಬಾಲಕಿಯನ್ನು ಪೊಲೀಸರು ಸದ್ಯ ನಗರ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಗೆ ಸ್ಥಳಾಂತರಿಸಿದ್ದಾರೆ. ತನ್ನ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಕುಟುಂಬದ ಯಜಮಾನಿ ಖಾತೆಗೆ ನೀಡುವ ತಿಂಗಳಿಗೆ 2 ಸಾವಿರ ರೂಪಾಯಿಗಳ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಯಶಸ್ಸಿಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನಾಡಿನ ಅಧಿದೇವತೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ

ಬೆಂಗಳೂರು: ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿದೆ. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಾಗಿತ್ತು. ಇದೀಗ ಪ್ರಕರಣ ಸಂಬಂದ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಮತ್ತಷ್ಟು ಆತಂಕಕಾರಿ ಮಾಹಿತಿಯನ್ನು

ಕುಂದಾಪುರ, ನ 27: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಪುರಾಣ ಪ್ರಸಿದ್ಧ ಧ್ವಜಪುರ (ಕೋಟೇಶ್ವರ)ದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಕೊಡಿ ಹಬ್ಬ-ರಥೋತ್ಸವ ನ.27 ಸೋಮವಾರ ವಿಜೃಂಭಣೆಯಿಂದ ನಡೆಯಿತು. ಕರಾವಳಿಯ ಪ್ರಥಮ ರಥೋತ್ಸವ ಎಂಬ ಹೆಗ್ಗಳಿಕೆ ಪಡೆದಿರುವ ಕೋಟೇಶ್ವರ ರಥೋತ್ಸವದ ಅಂಗವಾಗಿ ನ.20ರಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದವು.

ಉತ್ತರಕಾಶಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕುಮಾರ್ ಮಿಶ್ರಾ ನೇತೃತ್ವದ ನಿಯೋಗ ಸೋಮವಾರ ಉತ್ತರಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ. ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಇಂದು 16ನೇ ದಿನಕ್ಕೆ ಕಾಲಿಟ್ಟಿದ್ದು, ಕಾರ್ಮಿಕರನ್ನು

ಭುವನೇಶ್ವರ: ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ವಿಶ್ವಾಸಾರ್ಹ ಸಹಾಯಕ ಮತ್ತು ಮಾಜಿ ಐಎಎಸ್ ಅಧಿಕಾರಿ ವಿಕೆ ಪಾಂಡಿಯನ್ ಅವರು ಸೋಮವಾರ ಆಡಳಿತಾರೂಢ ಬಿಜು ಜನತಾ ದಳ(ಬಿಜೆಡಿ)ಗೆ ಅಧಿಕೃವಾಗಿ ಸೇರ್ಪಡೆಯಾಗಿದ್ದಾರೆ. ಇಂದು ನವೀನ್ ಪಟ್ನಾಯಕ್ ಅವರ ನಿವಾಸ್‌ನಲ್ಲಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ

ಉತ್ತರಕಾಶಿ: ಉತ್ತರಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದ್ದು, ಕಾರ್ಮಿಕರು ಮಾನಸಿಕವಾಗಿ ಕುಗ್ಗದಂತೆ ನೋಡಿಕೊಳ್ಳಲು ವೈದ್ಯರು ಮತ್ತು ಮನೋವೈದ್ಯರಿಂದ ಸಲಹೆ ನೀಡಲಾಗುತ್ತಿದೆ. ಸಿಕ್ಕಿಬಿದ್ದ ಕಾರ್ಮಿಕರನ್ನು ನಿಯಮಿತವಾಗಿ ಪರೀಕ್ಷಿಸಲಾಗುತ್ತಿದೆ ಎಂದು ವೈದ್ಯಕೀಯ ತಂಡದ ಮತ್ತೊಬ್ಬ ಹಿರಿಯ ವೈದ್ಯ ಡಾ.ಪ್ರೇಮ್ ಪೋಖ್ರಿಯಾಲ್ ಅವರು ಹೇಳಿದ್ದಾರೆ. "ಆರಂಭದಲ್ಲಿ, ನಾವು

ಬೆಂಗಳೂರು: ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್‌.ಕೆ.ಅತೀಕ್‌ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್‌ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹಣಕಾಸು ಇಲಾಖೆಯ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ. ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯರ್ಶಿಯಾಗಿದ್ದ ರಜನೀಶ್‌ ಗೋಯಲ್‌ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ