ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

(ವಿಶೇಷ ವರದಿ:ಜಯಪ್ರಕಾಶ್ ಕಿಣಿ,ಉಡುಪಿ) ಉಡುಪಿ:ಪ್ರತಿವರುಷ ವಾಡಿಕೆಯ೦ತೆ ಉಡುಪಿಯ ಶ್ರೀಕೃಷ್ಣಮಠದ ನಡೆಯುವ ಲಕ್ಷದೀಪೋತ್ಸವ ಉತ್ಧಾನದ್ವಾದಶಿಯ೦ದು ಆರ೦ಭಗೊ೦ಡು ಒಟ್ಟು ಮೂರುದಿನಗಳ ಕಾಲ ಜರಗಲಿದೆ.ಲಕ್ಷದೀಪಕ್ಕೆ ಬೇಕಾಗುವ ಸಕಲ ವ್ಯವಸ್ಥೆಯನ್ನು ಈಗಾಗಲೇ ರಥಬೀದಿಯಲ್ಲಿ ಮಾಡಲಾಗಿದೆ.   ಅದೇ ರೀತಿಯಲ್ಲಿ ಜನರು ತಮ್ಮ ತಮ್ಮ ಮನೆಯಲ್ಲಿ ತುಳಸಿ ಪೂಜೆಯನ್ನು ನಡೆಸಲು ಎಲ್ಲಾ ರೀತಿಯಲ್ಲಿ ತಯಾರಿಯನ್ನು ಮಾಡುತ್ತಿದ್ದಾರೆ. ನೆಲ್ಲಿಕಾಯಿ,ಹುಣಸೆಕಾಯಿ,ಕಬ್ಬು,ಹಣತೆ,ಹೂವನ್ನು ಖರೀದಿಸುವಲ್ಲಿ ಮುಗಿಬಿದ್ದಿರುವ

ಮಂಗಳೂರು: ಜಮ್ಮು- ಕಾಶ್ಮೀರದ ರಚೌರಿ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಹಾಗೂ ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್‌ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. 28ರ ಹರೆಯದ 63ನೇ ರಾಷ್ಟ್ರೀಯ ರೈಫಲ್ಸ್ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್ ಮಂಗಳೂರಿನಲ್ಲಿಯೇ ಹುಟ್ಟಿ ಬಾಲ್ಯ

ನವದೆಹಲಿ: 350 ರೂ.ಗಾಗಿ 16 ವರ್ಷದ ಹುಡುಗನೊಬ್ಬ 18 ವರ್ಷದ ಯುವಕನ ಕತ್ತು ಕೊಯ್ತು ಭೀಕರವಾಗಿ ಕೊಲೆ ಮಾಡಿರುವ ಘಟನೆ ದೆಹಲಿಯ ಕಾಲೊನಿಯೊಂದರಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಹುಡುಗ ಅದೇ ಶವದ ಮೇಲೆ ನೃತ್ಯಮಾಡಿ ವಿಕೃತಿ ಮೆರೆದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈಶಾನ್ಯ ದೆಹಲಿಯ ಪ್ರದೇಶದ ಕಾಲೊನಿಯೊಂದರಲ್ಲಿ ಕೊಲೆ ನಡೆದಿದ್ದು,

ಉಡುಪಿ, ನ.23: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ (Udupi Four Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗಲೆ ತನಿಖೆ ಮುಂದುವರಿದಿದ್ದು, ಸಾಕಷ್ಟು ವಿಚಾರಗಳು ಈಗಾಗಲೇ ಬಹಿರಂಗವಾಗಿವೆ. ಇದೀಗ, ತನ್ನೊಂದಿಗೆ ಮಾತು ಬಿಟ್ಟಿದ್ದಕ್ಕೆ ಸ್ಕೆಚ್ ಹಾಕಿ ಅಯ್ನಾಸ್​ಳನ್ನು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ

ಬೆಂಗಳೂರು : ವಿವಾದಿತ ಕಾಂತರಾಜು ವರದಿ ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾತುರಿ ತೋರುತ್ತಿರುವುದು ಅನೇಕ ಅನುಮಾನಗಳನ್ನು ಹುಟ್ಟು ಹಾಕುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ವರದಿಯ ಮೂಲಪ್ರತಿ ಕಾಣೆಯಾಗಿದೆ, ಅದಕ್ಕೆ ಕಾರ್ಯದರ್ಶಿ ಸಹಿ ಇಲ್ಲ, ಇದೊಂದು ಅವೈಜ್ಞಾನಿಕ ವರದಿ ಎಂದು ಅನೇಕ ಸಮುದಾಯಗಳು ಆರೋಪಿಸಿವೆ. ಸಚಿವ ಸಂಪುಟದಲ್ಲೇ

ನವದೆಹಲಿ: ಭಾರತದ ಸರ್ವೋಚ್ಚ ನ್ಯಾಯಾಲಯಕ್ಕೆ ನೇಮಕಗೊಂಡ ಮೊದಲ ಮಹಿಳಾ ನ್ಯಾಯಾಧೀಶರಾದ ಜಸ್ಟಿಸ್ ಎಂ. ಫಾತಿಮಾ ಬೀವಿ ಅವರು ಗುರುವಾರ ನಿಧನಹೊಂದಿದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ಮೂರು ದಿನಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಕೊಲ್ಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ನಿಧನ ಹೊಂದಿದ್ದಾರೆ ಎಂದು

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ 12ನೇ ದಿನವಾದ ಗುರುವಾರವೂ ಮುಂದುವರೆದಿದ್ದು, ಕಾರ್ಮಿಕರನ್ನು ತಲುಪಲು ಇನ್ನು 12 ರಿಂದ 14 ಗಂಟೆ ತೆಗೆದುಕೊಳ್ಳುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಾರ್ಮಿಕರನ್ನು ಕರೆತರಲು ಮಾರ್ಗ ಸೃಷ್ಟಿಸುವ ಕೊರೆಯುವ ಯಂತ್ರಕ್ಕೆ ಅಡ್ಡ ಬಂದ ಕಬ್ಬಿಣದ

ಶ್ರೀಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ರಜೌರಿಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ

ಬೆಂಗಳೂರು: ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಪ್ರತಿ ನಾಪತ್ತೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಒಪ್ಪಿಕೊಂಡಿದ್ದಾರೆ. ವರದಿ ನಿಗೂಢವಾಗಿ ಕಣ್ಮರೆಯಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ(New Indian Express) ಅಕ್ಟೋಬರ್ 6 ರಂದು ವರದಿ ಮಾಡಲಾಗಿತ್ತು.ಆಗ

ಟೆಲ್‌ ಅವಿವ್‌: ಹಮಾಸ್ ವಶದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಉಗ್ರರು ಒಪ್ಪಿಗೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಗಾಜಾದಲ್ಲಿ 4 ದಿನಗಳ ಕದನ ವಿರಾಮವನ್ನು ಇಸ್ರೇಲ್‌ ಅನುಮೋದಿಸಿದೆ. ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವ ಕತಾರ್‌ ಮತ್ತು ಅಮೆರಿಕದ ಅಧಿಕಾರಿಗಳು, ಇಸ್ರೇಲ್ ಮತ್ತು ಹಮಾಸ್‌ ಒಪ್ಪಂದವು ಸನ್ನಿಹಿತವಾಗಿದೆ ಎಂದು