ಬೆಂಗಳೂರು: ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಪ್ರಖ್ಯಾತ ಹಿರಿಯ ನಟಿ ಲೀಲಾವತಿ ಅವರು ಇಂದು ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.ನೆಲಮಂಗಲದ ಸೋಲದೇವನ ಹಳ್ಳಿಯ ನಿವಾಸದಲ್ಲೇ ಅವರಿಗೆ ಆರೈಕೆ ಮಾಡಲಾಗುತ್ತಿತ್ತು. ಪುತ್ರ ವಿನೋದ್ ರಾಜ್
ನವದೆಹಲಿ/ಬೆಂಗಳೂರು: ಇಸಿಸ್ ಭಯೋತ್ಪಾದನೆ ಸಂಚು ಪ್ರಕರಣ ಸಂಬಂಧ ತನಿಖೆ ಮುಂದುವರಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಳಿ ವೇಳೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರ ಸೇರಿ 13 ಮಂದಿಯನ್ನು ಬಂಧನಕ್ಕೊಳಪಡಿಸಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಪೊಲೀಸ್ ಪಡೆಗಳ ನೆರವಿನೊಂದಿಗೆ ಎನ್‌ಐಎ ಇಂದು
ಉಡುಪಿ: ಡಿ.8, ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಗುರುವಾರದ೦ದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿ ಭೇಟಿ ನೀಡಿದರು. ಪ್ರಥಮ ಬಾರಿಗೆ ಶ್ರೀಕ್ಷೇತ್ರಕ್ಕೆ ಆಗಮಿಸಿರುವ ಶ್ರೀಗಳವರನ್ನು ಪೂರ್ಣಕುಂಭ, ಮಂಗಳ ವಾದ್ಯದೊಂದಿಗೆ ಬರಮಾಡಿಕೊಳ್ಳಲಾಯಿತು. ಬಳಿಕ ದೇವಳದ ವತಿಯಿಂದ ಶ್ರೀಪಾದರಿಗೆ ಪಾದಪೂಜೆ, ಗುರು ಕಾಣಿಕೆ ಸಮರ್ಪಿಸಲಾಯಿತು. ಬಳಿಕ ಆಶೀರ್ವಚನ ನೀಡಿದ
ಉಡುಪಿ:ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವು ಬಹುಮತದಿಂದ ಅಧಿಕಾರದ ಗದ್ದುಗೆ ಪಡೆದುಕೊಂಡಿದ್ದು ಇದು ನರೇಂದ್ರ ಮೋದಿ ಅವರ ಪಾಲಿಗೆ ಹಾಗೂ ಬಿಜೆಪಿಯವರ ಪಾಲಿಗೆ ಬಿಸಿ ತುಪ್ಪವಾಗಿ ಪರಿಗಣಿಸಿದೆ ತೆಲಂಗಾಣದಲ್ಲಿ ತಾವು ಅಧಿಕಾರಕ್ಕೆ ಬಂದು ದಕ್ಷಿಣ ಭಾರತದಲ್ಲಿ ನಮ್ಮ ಹಿಡಿತವನ್ನು ಸಾಧಿ ಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ
ದೆಹಲಿ: ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ತಿದ್ದುಪಡಿ ಮಸೂದೆ -2023 ಹಾಗೂ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ 2023 ಅನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಇಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಈ ಎರಡು ಮಸೂದೆಗಳನ್ನು ಮಂಡಿಸಿದರು. ಮಸೂದೆ ಮಂಡಿಸಿ
ಅಬುಜಾ: ವಾಯುವ್ಯ ನೈಜೀರಿಯಾದಲ್ಲಿ (Nigeria) ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿದೆ. ನೈಜೀರಿಯಾದ ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಸೇನೆ ಹಾರಿಸಿದ್ದ ಡ್ರೋನ್ ಗುರಿ ತಪ್ಪಿದ್ದು, ನಾಗರಿಕರ ಮೇಲೆ ದಾಳಿ ಮಾಡಿದೆ. ನೈಜೀರಿಯಾದ ಸಂಘರ್ಷದ
ಬೆಂಗಳೂರು: ಹಿರಿಯ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹಾಗೂ ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸೂಚನೆ ನೀಡಿದ್ದಾರೆ. ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಎಂ.ಎಂ.ಕಲಬುರ್ಗಿ
ಉಡುಪಿ:ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನಕ್ಕೆ ಡಿಸೆ೦ಬರ್ 7ರ ಗುರುವಾರದ೦ದು ಸಾಯಂಕಾಲ 4.00 ಘಂಟೆಗೆ ಪರಮಪೂಜ್ಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧಿಪತಿ ಶ್ರೀಮದ್ ವಿದ್ಯಾಧೀಶತೀರ್ಥ ಸ್ವಾಮೀಜಿಯವರ ಪ್ರಥಮ ಭೇಟಿ ನೀಡಲಿದ್ದಾರೆ೦ದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಶ್ರೀಗಳು ಬ್ರಹ್ಮಾವರ ದೇವಳದಿಂದ ಆಗಮಿಸಲಿದ್ದು ಶ್ರೀಗಳವರಿಗೆ ಪೂರ್ಣಕುಂಭ ಸ್ವಾಗತದೊ೦ದಿಗೆ ಸ್ವಾಗತಿಸಲಾಗುವುದು ನ೦ತರ ಶ್ರೀ ದೇವರ
ಉಡುಪಿ: ಉಡುಪಿಯ ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀಕೃಷ್ಣ ಪೂಜೆಯ ದ್ವೈವಾರ್ಷಿಕ ಪರ್ಯಾಯ ನಿಟ್ಟಿಲ್ಲಿ ನಾಲ್ಕನೇ ಬಾರಿ 2024 ಜ.18ರಂದು ಸರ್ವಜ್ಞ ಪೀಠವನ್ನೇರಲಿದ್ದು ಪರ್ಯಾಯ ಪೂರ್ವಭಾವಿ ನಾಲ್ಕನೇ ಹಾಗೂ ಕೊನೆಯದಾದ ಧಾನ್ಯ ಮುಹೂರ್ತವು ಬುಧವಾರ ನೆರವೇರಿಸಲಾಯಿತು. ಬಾಳೆ, ಅಕ್ಕಿ, ಕಟ್ಟಿಗೆ ಮುಹೂರ್ತ ಪೂರೈಸಿದ್ದು ತೀರ್ಥ ಕ್ಷೇತ್ರ ಸಂಚಾರ ಬಳಿಕ
ಮಂಗಳೂರು: ಡಿ 5: ನಿಷೇಧಿತ ಮಾದಕ ವಸ್ತುವಾದ ಮೆತಫಿಟಮೈನ್ ಮತ್ತು ಎಲ್‌ಎಸ್‌ಡಿ ಸ್ಟ್ಯಾಂಪ್ ಡ್ರಗ್ಸ್ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅರೋಪಿಗಳನ್ನು ಶಿಶಿರ ದೇವಾಡಿಗ ಹಾಗೂ ಶುಶಾನ್ ಎಲ್ ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರದ ಸಾರ್ವಜನಿಕ ರಸ್ತೆ ಬದಿಯಲ್ಲಿ