ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನವದೆಹಲಿ: ಚೆನ್ನೈ ಮತ್ತು ರಾಜ್ಯದ ಇತರ ಕೆಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದ ಹಾನಿಗೊಳಗಾದ ಜನರಿಗೆ ಪರಿಹಾರ ಮತ್ತು ಮೂಲಸೌಕರ್ಯಗಳನ್ನು ಮರುನಿರ್ಮಾಣ ಮಾಡಲು ತಮಿಳುನಾಡು ಸರ್ಕಾರವು 5,000 ಕೋಟಿ ರೂಪಾಯಿಗಳ ಮಧ್ಯಂತರ ಪರಿಹಾರವನ್ನು ಕೇಂದ್ರ ಸರ್ಕಾರಕ್ಕೆ ಕೋರಿದೆ. ರಾಜ್ಯಸಭೆಯಲ್ಲಿ ಶೂನ್ಯವೇಳೆ ಈ ವಿಷಯವನ್ನು ಪ್ರಸ್ತಾಪಿಸಿದ ಡಿಎಂಕೆ ನಾಯಕ ತಿರುಚಿ ಶಿವ, ಮಿಚಾಂಗ್

ಹೈದರಾಬಾದ್: ತೆಲಂಗಾಣ ಕಾಂಗ್ರೆಸ್‌ (Telangana Congress) ಮುಖ್ಯಸ್ಥ ಅನುಮುಲಾ ರೇವಂತ್‌ ರೆಡ್ಡಿ (Anumula Revanth Reddy) ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದ್ದು, “ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. ನವೆಂಬರ್ 30 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ

ಜೈಪುರ: ರಾಜಸ್ಥಾನದ ಜೈಪುರದಲ್ಲಿ ಹಾಡಹಗಲೇ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಂದು ಮಧ್ಯಾಹ್ನ ಶ್ಯಾಮನಗರದಲ್ಲಿರುವ ಸುಖದೇವ್ ಸಿಂಗ್ ಅವರ ಮನೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಗುಂಡಿನ ದಾಳಿಯಲ್ಲಿ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ರಾಜ್ಯದ ಹೆಮ್ಮೆಯ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿಗಳ ಚೆಕ್ ಅನ್ನು ಮಂಗಳವಾರ ಹಸ್ತಾಂತರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುತಾತ್ಮ ಯೋಧನ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರ ಘೋಷಣೆ ಮಾಡಿದ

ಉತ್ತರ ಕನ್ನಡ, ಡಿ. 05: ಹವಾಮಾನ ವೈಪರೀತ್ಯದಿಂದ (Weather extremes) 27 ಮೀನುಗಾರರಿದ್ದ (Fishers) ಗೋವಾ (Goa) ಮೂಲದ ಬೋಟ್ ಅರಬ್ಬಿ ಸಮುದ್ರದಲ್ಲಿ (Arabian Sea) ಕಾಣೆಯಾಗಿದೆ. ನವೆಂಬರ್​​ 29 ರಂದು ಗೋವಾದ ಪಣಜಿಯಿಂದ ಹೊರಟಿದ್ದ ಬೋಟ್ ಅಂಕೋಲ ತಾಲೂಕಿನ ಬೆಲೆಕೇರಿ ಸಮುದ್ರ ಭಾಗದಲ್ಲಿ ಕೊನೆಯ ಲೊಕೇಷನ್ ತೋರಿಸಿತ್ತು.

ಚೆನ್ನೈ:ಡಿ 5, ಮಿಚಾಂಗ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಚೆನ್ನದಲ್ಲೂ ಪ್ರವಾಹ ಭೀತಿಯುಂಟಾಗಿದೆ. ಈಗಾಗಲೇ ಚೆನ್ನೈನಲ್ಲಿ 5 ಮಂದಿ ಪ್ರವಾಹಕ್ಕೆ ಬಲಿಯಾಗಿದ್ದು, ನೀರುಪಾಲಾಗುತ್ತಿದ್ದ 20ಕ್ಕೂ ಹೆಚ್ಚು ಜನರನ್ನು ರಕ್ಷಣಾ ಪಡೆಗಳು ರಕ್ಷಿಸಿದೆ. ಬಂಗಾಳಕೊಲ್ಲಿಯಲ್ಲಿ ಅಲ್ಪಾವಧಿಯ ವಾಯುಭಾರ ಕುಸಿತದಿಂದ ಚೆನ್ನೈನಲ್ಲಿ ನಿರಂತರ ಮಳೆಯಾಗುತ್ತಿದೆ. ಭಾನುವಾರ ಬೆಳಗ್ಗೆಯಿಂದ 400ರಿಂದ 500 ಮಿ.ಮೀ

ವಿಜಯಪುರ:ಡಿ 5, ನಗರದ ರಾಜ್ ಗುರು ಫುಡ್' ಗೋದಾಮಿನ ಮೆಕ್ಕೆಜೋಳ ಸಂಸ್ಕರಣ ಘಟಕದಲ್ಲಿ ನಡೆದ ದುರಂತದಲ್ಲಿ ಸಾವಿನ ಸಂಖ್ಯೆ ಏಳಕ್ಕೇರಿದೆ. ಮೃತರನ್ನು ಬಿಹಾರ ಮೂಲದ ಕಾರ್ಮಿಕರಾದ ರಾಮ್ರೀಜ್ ಮುಖಿಯಾ (29), ಶಂಬು ಮುಖಿಯಾ (26), ರಾಮ್ ಬಾಲಕ್ (38), ಲೋಖಿ ಜಾಧವ್ (56), ಕಿಶನ್ ಕುಮಾರ (20), ದಾಲನಚಂದ ಮುಖಿನ,

ತಮಿಳು ನಾಡು/ತೆಲಂಗಾಣ/ಆಂಧ್ರ ಪ್ರದೇಶ: ದಕ್ಷಿಣ ಭಾರತದಲ್ಲಿ ಮಳೆ, ತೀವ್ರ ಪ್ರವಾಹ ಸೃಷ್ಟಿಸಿರುವ ಮಿಚಾಂಗ್ ಚಂಡಮಾರುತ ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಆಂಧ್ರಪ್ರದೇಶದ ಬಾಪಟ್ಲಾ ಸಮೀಪ ನೆಲ್ಲೂರು ಮತ್ತು ಮಚಿಲಿಪಟ್ಟಣಂ ನಡುವೆ ತೀವ್ರ ಚಂಡಮಾರುತದಿಂದ  ಭೂಕುಸಿತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು  ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ. 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ

ಜಕಾರ್ತ:ಡಿ 4 ,: ಇಂಡೋನೇಷ್ಯಾದ ಮೌಂಟ್ ಮರಾಪಿಯಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ ಹಿನ್ನಲೆ 11 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 12ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಸುಮಾತ್ರಾದಲ್ಲಿ ಭಾನುವಾರ ಜ್ವಾಲಾಮುಖಿ ಸ್ಫೋಟಗೊಂಡಿದೆ. ಈ ವೇಳೆ ಅಲ್ಲಿ 75 ಜನರು ಇದ್ದರು ಎನ್ನಲಾಗಿದೆ. ಜ್ವಾಲಾಮುಖಿ ಸ್ಫೋಟದ ಬಳಿಕ ರಕ್ಷಣಾ