ನವದೆಹಲಿ: ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ, ಸಮಾಜಸೇವಕಿ, ಲೇಖಕಿ ಡಾ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ
ಉಡುಪಿ:ಮಹತೋಭಾರ ಉಡುಪಿಯ ಅಜ್ಜಯ್ಯ ಎಂದೇ ಖ್ಯಾತಿಯ ಶ್ರೀಮದನಂತೇಶ್ವರ ದೇವರ ವಾರ್ಷಿಕ ಉತ್ಸವಕ್ಕೆ ಪರ್ಯಾಯ ಶ್ರೀಪುತ್ತಿಗೆ ಉಭಯ ಶ್ರೀಪಾದರಿಂದ ದೇವತಾ ಸನ್ನಿಧಿಯಲ್ಲಿ ಪ್ರಾರ್ಥನೆ ಮೂಲಕ ಚಾಲನೆ, ಅಂಕುರಾರೋಪಣೆಕಾರ್ಯಕ್ರಮವು ಗುರುವಾರದ೦ದು ಸಾಯ೦ಕಾಲ ನೆರವೇರಿಸಲಾಯಿತು.
ಉಡುಪಿ:ರುಕ್ಮಿಣಿ ಸತ್ಯಭಾಮೆ ಸಹಿತ ಪಾಂಡುರಂಗ ವಿಠಲನ ಆರಾಧಕರಾದ ಉಡುಪಿಯ ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಪಂಡರಾಪುರ ಪಾಂಡುರಂಗ ವಿಠಲ ದೇವರ ದರ್ಶನ ಪಡೆದರು. ಮಠದ ದಿವಾನರಾದ ಉದಯ ಸರಳತ್ತಾಯ ಶ್ರೀಶಭಟ್ ಕಡೆಕಾರು ಮೊದಲಾದವರು ಶ್ರೀಗಳೊ೦ದಿಗೆ ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ಬೆಂಗಳೂರಿನ ಜನಪ್ರಿಯ ಉಪಾಹಾರ ಕೇಂದ್ರ ‘ದಿ ರಾಮೇಶ್ವರಂ ಕೆಫೆ’ಯಲ್ಲಿ ಕಳೆದ ವಾರ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಶಂಕಿತ ಆರೋಪಿ ಘಟನೆಯ ನಂತರ ಬಟ್ಟೆ ಬದಲಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದಾನೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಗುರುವಾರ ತಿಳಿಸಿದ್ದಾರೆ. ಸ್ಫೋಟದ ನಂತರ
ಬೆಂಗಳೂರು, ಮಾರ್ಚ್ 6: ಲೋಕಸಭೆ ಚುನಾವಣೆಗೆ (Lok Sabha Elections) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ (BJP) ಎರಡನೇ ಪಟ್ಟಿ ಬಿಡುಗಡೆ ಮಾಡುವುದಕ್ಕಾಗಿ ಇಂದು ದೆಹಲಿಯಲ್ಲಿ ಸಭೆ ನಡೆಸುತ್ತಿದೆ. ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿರುವ ಎನ್ಐಎ ಬಾಂಬರ್ ಫೋಟೋ ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ ಬಾಂಬರ್ ಫೋಟೋ ಬಿಡುಗಡೆ ಮಾಡಿದೆ. ಅಲ್ಲದೇ ಈ
ಕೋಲ್ಕತಾ: ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ತಾವು ಬಿಜೆಪಿ ಸೇರುವುದಾಗಿ ಮಂಗಳವಾರ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಭಿಜಿತ್ ಗಂಗೋಪಾಧ್ಯಾಯ ಅವರು, ಮಾರ್ಚ್ 7ರಂದು ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ರಾಷ್ಟ್ರೀಯ
ಬೆಂಗಳೂರು: ರಾಮೇಶ್ವರ ಕೆಫೆ ಸ್ಫೋಟ ಪ್ರಕರಣದ ಆರೋಪಿಗಳು ರಾಜ್ಯ ತೊರೆದಿರುವ ಸಾಧ್ಯತೆಗಳಿವೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಹೇಳಿದ್ದಾರೆ. ಪ್ರಕರಣದ ತನಿಖೆಯಲ್ಲಿ ಪೊಲೀಸರು ಯಾವುದೇ ಪ್ರಗತಿ ಸಾಧಿಸಿಲ್ಲ. ಆದರೆ, ಆರೋಪಿಗಳು ನೆರೆ ರಾಜ್ಯಕ್ಕೆ ಪರಾರಿಯಾಗಿರುವ ಶಂಕೆಗಳಿವೆ ಎಂದು ಹೇಳಿದ್ದಾರೆ. ಏತನ್ಮಧ್ಯೆ, ಶಂಕಿತನ ಮತ್ತೊಂದು ವೀಡಿಯೊ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
ಮಂಗಳೂರು: ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ಕಡಬದಲ್ಲಿ ಸೋಮವಾರ ಕಿಡಿಗೇಡಿಯಿಂದ ಆ್ಯಸಿಡ್ ದಾಳಿಗೊಳಗಾಗಿ ನಗರದ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ
ನವದೆಹಲಿ: ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಇದರಿಂದಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದಿಂದ ಈ ತೀರ್ಪು ಹೊರಬಿದ್ದಿದೆ. ಡಿಕೆ