ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಮ್ಮ ಅರೆಸ್ಟ್ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಹೌದು.. ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೀಡಾಗಿದ್ದ ಅರವಿಂದ್ ಕೇಜ್ರಿವಾಲ್ ಮತ್ತೊಂದುಷ್ಟು ದಿನ ಜೈಲಿನಲ್ಲೇ ಕಾಲ ಕಳೆಯಬೇಕಿದ್ದು,

ಬ್ರಹ್ಮಾವರ: ಬಿಜೆಪಿ ಯುವ ಮೋರ್ಚಾದ ಮುಖಂಡೊಬ್ಬನ ಮನೆಯ ಮೇಲೆ ಉಡುಪಿ ಅಬಕಾರಿ ಪೊಲೀಸರು ರಾತ್ರಿ ವೇಳೆ ದಾಳಿ ನಡೆಸಿ  ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ನಡೆದಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ

ಬೆಂಗಳೂರು: ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷಕೆ ಹೊಸತು ಹೊಸತು ತರುತಿದೆ.  ಎಲ್ಲರಿಗೂ ಕ್ರೋಧಿ ನಾಮ ಸಂವತ್ಸರ ಚಾಂದ್ರಮಾನ ಯುಗಾದಿ ಹಬ್ಬದ ಶುಭಾಶಯಗಳು

ಬೆಂಗಳೂರು, (ಏಪ್ರಿಲ್ 05): ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ (code of conduct violation) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ(Kota Srinivas Poojary )ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ,

ವಿಜಯಪುರ, ಏಪ್ರಿಲ್​ 05: ಕಳೆದ ಏಪ್ರಿಲ್​ 3ರ ಸಾಯಂಕಾಲ ಜಮೀನಿನಲ್ಲಿರುವ ತೆರೆದ ಕೊಳವೆ ಬಾವಿಯಲ್ಲಿ (Borewell) ಜಾರಿ ಬಿದ್ದಿದ್ದ ಪುಟ್ಟ ಬಾಲಕ ಸಾತ್ವಿಕ್ 20 ಗಂಟೆಗಳ ಕಾಲ ತಲೆ ಕೆಳಗಾವಿ ಬಿದ್ದು ಪವಾಡ ಸದೃಶ್ಯವಾಗಿ ಜೀವಂತವಾಗಿ ಬಂದದ್ದು ವಿಸ್ಮಯ ಎಂದೇ ಹೇಳಬಹುದು. ಸಾತ್ವಿಕ ಬದುಕಿ ಬರಲಿ ಎಂದು ಸಾಕಷ್ಟು ಜನರು ದೇವರಿಗೆ ಪಾರ್ಥನೆ

ಶಿವಮೊಗ್ಗ/ಬೆಂಗಳೂರು, (ಏಪ್ರಿಲ್ 05): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ(Bengaluru Rameshwaram café blast Case)  ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ) ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗ(Shivamogga)  ಜಿಲ್ಲೆ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎನ್ನುವಾತನನ್ನು ಇಂದು (ಏಪ್ರಿಲ್ 05) ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಬೆಂಗಳೂರು ಪೊಲೀಸರು ಐವರಿ ಕೋಸ್ಟ್ ಪ್ರಜೆಯೊಬ್ಬನನ್ನು ಬಂಧಿಸಿದ್ದು ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳಕ್ಕೆ ಸಿಕ್ಕ ಮಾಹಿತಿ ಮೇರೆಗೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ತಂಡವು ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ 33 ವರ್ಷದ

ಬೆಂಗಳೂರು: ಬೇಸಿಗೆಯ ಬಿರು ಬಿಸಿಲಿನ ಮಧ್ಯೆ ಬೆಂಗಳೂರಿನ ಆರ್.ಟಿ.ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಮಿರಾಕಲ್ ಡ್ರಿಂಕ್ಸ್ ಮತ್ತು ಐಡಿಎಸ್ ಕಟ್ಟಡದ ನೆಲಮಹಡಿಯಲ್ಲಿ ಐಟಿ ಕಂಪೆನಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡು ನಂತರ