ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ 'ಮೋದಿ ಅಲೆ' ಇಲ್ಲ. ಹೀಗಾಗಿ ಕಾಂಗ್ರೆಸ್ ಆರಾಮದಾಯಕವಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. ಬಿಜೆಪಿ ತನ್ನ ನಾಲ್ಕು ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಏನನ್ನೂ ಮಾಡಿಲ್ಲ ಮತ್ತು ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ

ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಇಂದು

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಬುಧವಾರ ತೀರ್ಪು ಕಾಯ್ದಿರಿಸಿದೆ. ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕ

ಮಂಗಳೂರು; ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್. ಪದ್ಮರಾಜ್‌ ಅವರು ಚುನಾವಣಾ ಅಧಿಕಾರಿಗಳಿಗೆ ತಮ್ಮ ನಾಮ ಪತ್ರವನ್ನು ಸಲ್ಲಿಸಿದ್ದಾರೆ. ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಬೃಹತ್ ಮೆರವಣಿಗೆ ನಡೆಸಿ ತಮ್ಮ ಉಮೇದ್ವಾರಿಕೆಯನ್ನು ಸಲ್ಲಿಸಿದ್ದಾರೆ. ಮೆರವಣಿಗೆ ಆರಂಭಕ್ಕೂ ಮೊದಲು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಾಮಪತ್ರಕ್ಕೆ ಪೂಜೆ

ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ಬಿಜೆಪಿ ಅಭ್ಯರ್ಥಿ ಕೋಟಶ್ರೀನಿವಾಸ್ ಪೂಜಾರಿ ಮ೦ಗಳವಾರದ೦ದು ತಮ್ಮ ನಾಮಪತ್ರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು. ವಿನಯಕುಮಾರ್ ಸೊರಕೆ,ಮೋಟಮ್ಮ ಹಾಗೂ ಇತರ ಮುಖ೦ದರು ಹೆಗ್ಡೆಗೆ ಸಾಥ್ ನೀಡಿದರು.ಸಿ.ಟಿ.ರವಿ,ಸುರೇಶ್ ಶೆಟ್ಟಿ ಗುರ್ಮೆ,ಯಶ್ಪಾಲ್ ಸುವರ್ಣ ರವರು ಕೋಟ ಶ್ರೀನಿವಾಸ್ ಪೂಜಾರಿಗೆ ಸಾಥ್ ನೀಡಿದರು. ಎರಡುಪಕ್ಷದವರು ಕಾರ್ಯಕರ್ತರ ಸಭೆಯನ್ನು ನಡೆಸಿತ್ತು,

ಬೆಂಗಳೂರು: ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರರಾವ್‌ ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಎರಡು ವರ್ಷದಿಂದ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಪತ್ನಿ

ನವದೆಹಲಿ: ಪತಂಜಲಿ ಉತ್ಪನ್ನಗಳ ದಾರಿತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿ, ವಿಚಾರಣೆಯನ್ನು ಏಪ್ರಿಲ್ 10ಕ್ಕೆ ಮುಂದೂಡಿದೆ. ಪತಂಜಲಿ ಸಂಸ್ಥೆಯ ಉತ್ಪನ್ನಗಳ ದಾರಿತಪ್ಪಿಸುವ ಜಾಹೀರಾತಿನ ಪ್ರಕರಣದಲ್ಲಿ, ಯೋಗ ಗುರು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ

ತೈಪೆ, ತೈವಾನ್: ಬುಧವಾರ ಮುಂಜಾನೆ ಪ್ರಬಲ ಭೂಕಂಪವು ಇಡೀ ತೈವಾನ್ ದ್ವೀಪವನ್ನು ನಡುಗಿಸಿದೆ. ಘಟನೆಯಲ್ಲಿ ಇದುವರೆಗೆ 4 ಜನರು ಮೃತಪಟ್ಟಿದ್ದಾರೆ. ದಕ್ಷಿಣ ನಗರದಲ್ಲಿ ಕಟ್ಟಡಗಳು ಕುಸಿದು ದಕ್ಷಿಣ ಜಪಾನಿನ ದ್ವೀಪಗಳಲ್ಲಿ ಸುನಾಮಿಯನ್ನು ಸೃಷ್ಟಿಸಿವೆ ಎಂದು ವರದಿಯಾಗಿವೆ. ಭೂಕಂಪದಿಂದ ಬೃಹತ್ ಕಟ್ಟಡಗಳು ವಾಲುವ ದೃಶ್ಯ, ಹಲವು ಕಟ್ಟಡಗಳು ನೆಲಸಮವಾಗುತ್ತಿರುವ ದೃಶ್ಯ ವಿಡಿಯೊದಲ್ಲಿ

ಮಂಡ್ಯ: ಸಕ್ಕರೆ ನಾಡು ಮಂಡ್ಯ ಬಿಟ್ಟು ಬೇರೆ ಕಡೆ ನನ್ನ ರಾಜಕೀಯ ಜೀವನವಿಲ್ಲ, ಮಂಡ್ಯ ಮಣ್ಣಿನ ಸೊಸೆಯಾಗಿ ಜಿಲ್ಲೆಯ ಜನರ ಕೈಬಿಡಲು ನಾನು ಇಷ್ಟಪಡುವುದಿಲ್ಲ. ಈ ಮಂಡ್ಯದ ಋಣ ಮತ್ತು ಈ ಮಂಡ್ಯದ ಜನವನ್ನು ನಾನು ಎಂದೆಂದಿಗೂ ಬಿಡುವುದಿಲ್ಲ ಎಂದು ಪ್ರಮಾಣ ಮಾಡಿ ಹೇಳುತ್ತೇನೆ ಎಂದು ಸಂಸದೆ ಸುಮಲತಾ ಪುನರುಚ್ಛರಿಸಿದ್ದಾರೆ.

ಬೆಂಗಳೂರು: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ '400 ಪಾರ್' (400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ) ಗುರಿಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಪಕ್ಷದ ಹಿರಿಯ ನಾಯಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಜೊತೆ ಇಂಡಿಯಾ ಬ್ಲಾಕ್ ನ್ನು ಹೋಲಿಸಲು ಸಾಧ್ಯವೇ ಇಲ್ಲ.