ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನ್ಯೂಯಾರ್ಕ್‌, ಮೇ.31: ಹಷ್‌ ಮನಿ ಕೇಸ್‌ಗೆ ಸಂಬಂಧಪಟ್ಟಂತೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ದೋಷಿ ಎಂದು ನ್ಯೂಯಾರ್ಕ್‌ ನ ಕೋರ್ಟ್‌ ತೀರ್ಪುನೀಡಿದೆ. ಅಪರಾಧ ಪ್ರಕರಣವೊಂದರಲ್ಲಿ ಶಿಕ್ಷೆಗೊಳಗಾದ ಮೊದಲ ಯುಎಸ್‌ ಮಾಜಿ ಅಧ್ಯಕ್ಷ ಎನ್ನಲಾಗಿದೆ. ಪ್ರಕರಣದಲ್ಲಿ ಎಲ್ಲಾ 34 ಆರೋಪಗಳಲ್ಲಿಯೂ ಟ್ರಂಪ್‌ ದೋಷಿ ಎಂದು ನ್ಯೂಯಾರ್ಕ್‌ ನ್ಯಾಯಾಧೀಶರು ಆದೇಶ

ಕೇರಳ, ಮೇ.31: ಕಣ್ಣೂರು ವಿಮಾನ ನಿಲ್ದಾಣದಲ್ಲಿ ಗಗನಸಖಿಯೊಬ್ಬರನ್ನು ಚಿನ್ನವನ್ನು ಕಳ್ಳಸಾಗಣೆ ಮಾಡಿ ಗುದನಾಳದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಶುಕ್ರವಾರ ತಿಳಿಸಿದೆ. ಗಗನಸಖಿ ಸುರಭಿ ಖಾತುನ್ ಎಂದು ಗುರುತಿಸಲಾಗಿದೆ. ಈಕೆ ಕೋಲ್ಕತ ಮೂಲದವಳು. ಮಸ್ಕತ್​​ನಿಂದ ಕಣ್ಣೂರಿಗೆ ಆಗಮಿಸಿದ ಏರ್ ಇಂಡಿಯಾ

ಬೆಂಗಳೂರು: ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ರಾಜ್ಯ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಕೋರ್ಟ್ ಕೆಲಸವನ್ನು ನೀವು ಮಾಡಬೇಡಿ. ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶುಕ್ರವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ವಿಶೇಷ ತನಿಖಾ ತಂಡ(ಎಸ್‌ಐಟಿ) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತು. TNIE ಈ ಹಿಂದೆ ವರದಿ ಮಾಡಿದಂತೆ,

ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಹೆಚ್ಚಾಗುತ್ತಿದ್ದು, ಪ್ರತಿ ಗಂಟೆಗೆ 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಕಳೆದ 28 ದಿನಗಳಲ್ಲಿ ಒಟ್ಟು 74,915 ಪ್ರಕರಣಗಳು ದಾಖಲಾಗಿದ್ದು, 118 ಕಿ.ಮೀ ಉದ್ದದ ಹೆದ್ದಾರಿಯಲ್ಲಿ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ 22 ಕ್ಯಾಮೆರಾಗಳು ದೃಶ್ಯಗಳನ್ನು ಸೆರೆ ಹಿಡಿದಿವೆ. ಹೆಚ್ಚಿನ ಚಾಲಕರು, ಸಹ ಪ್ರಯಾಣಿಕರು

ಪಾಟ್ನಾ: ಬಿಹಾರದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿದಂತೆ 14 ಜನ ಬಿಸಿಲಿನ ಶಾಖದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ತಿಳಿಸಿದ್ದಾರೆ. ವಿಪತ್ತು ನಿರ್ವಹಣಾ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ, ಭೋಜ್‌ಪುರದಲ್ಲಿ ಹೆಚ್ಚಿನ ಸಾವುನೋವುಗಳು ವರದಿಯಾಗಿವೆ. ಅಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಐವರು ಅಧಿಕಾರಿಗಳು ಶಾಖದಿಂದ

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್ ನೀಡಿದೆ. ಜೂನ್ 1 ರಂದು ಹೊಳೆನರಸೀಪುರದ ಮನೆಯಲ್ಲಿ ತನಿಖೆ ಮತ್ತು ವಿಚಾರಣೆಗೆ ಹಾಜರಿರುವಂತೆ ಭವಾನಿ ಅವರಿಗೆ ತಿಳಿಸಿದೆ. ‘ಮೊದಲು ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ತಾವು,

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ. ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್

ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದೆ. ಕಳೆದ 28ವರುಷಗಳಿದಲೂ "ಕಲ್ಸ೦ಕ ಗಿರಿಜಾ ಸಿಲ್ಕ್"ನ ಜವಳಿ ಸ೦ಸ್ಥೆಯಲ್ಲಿ ಮಾರಾಟ ಮಾಡುವ ವಸ್ತ್ರಗಳ ಬಗ್ಗೆ ಗ್ರಾಹಕರು