ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ:ಮೇ.12: ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ಈ ಚುನಾವಣೆಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಶಾಸಕ ರಘುಪತಿ ಭಟ್ ಪಕ್ಷದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ

ನವದೆಹಲಿ: ಬಿಜೆಪಿ ಹಾಗೂ ಶಿವಸೇನೆ (ಉದ್ಧವ್ ಠಾಕ್ರೆ ಬಣ) ಗಳ ಹಿಂದುತ್ವಕ್ಕೆ ವ್ಯತ್ಯಾಸಗಳಿವೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ತಮ್ಮ ಪಕ್ಷದ ಹಿಂದುತ್ವ ಮನೆಗಳಲ್ಲಿ ಒಲೆ ಹೊತ್ತಿಸಿದರೆ, ಬಿಜೆಪಿಯ ಹಿಂದುತ್ವ ಮನೆಗಳನ್ನೇ ಹೊತ್ತಿ ಉರಿಯುವಂತೆ ಮಾಡುತ್ತದೆ ಎಂದು ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ಉದ್ಧವ್ ಠಾಕ್ರೆ,

ಉಡುಪಿ: ಉಡುಪಿ ಬಿ ಜೆ ಪಿಯ ಕಕ್ಕು೦ಜೆ ವಾರ್ಡಿನ ನಗರಸಭಾ ಸದಸ್ಯ ಡಿ.ಬಾಲಕೃಷ್ಣ ಶೆಟ್ಟಿ, ಆತನ ಪತ್ನಿ ಹಾಗೂ ಇತರ ಸಹಚರರೊ೦ದಿಗೆ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪ್ರಕರಣದ ದೂರುದಾರರಿಗೂ ಹಾಗೂ1 ನೇ ಆರೋಪಿ ಡಿ ಬಾಲಕೃಷ್ಣ ಶೆಟ್ಟಿಗೂ ಸುಮಾರು 4 ವರ್ಷಗಳಿಂದ ಸವಿತಾರ ಮನೆ

ಬೆಂಗಳೂರು, ಮೇ 11: ಕೆಎ​ಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ​ಸಂಜಯ್​ನಗರದ ನಿವಾಸದಲ್ಲಿ ನಡೆದಿದೆ. ಚೈತ್ರಾಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲರಾಗಿದ್ದರು. ಮನೆಯಲ್ಲಿ ಫ್ಯಾನ್​​ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ದೆಹಲಿ ಮೇ 11: ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ (Supreme Court) ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ತಿಹಾರ್ ಜೈಲಿನಿಂದ ಹೊರಬಂದ  ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು(ಶನಿವಾರ) ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ ಕೇಂದ್ರ ಕಚೇರಿಯಲ್ಲಿ ತಮ್ಮ ಬೆಂಬಲಿಗರಿಗೆ ಫ್ಲೈಯಿಂಗ್

ಉಡುಪಿ:ಪುಲಿಂದ ಮುನಿ ಪೂಜಿತ ಕೊಡಂಗಳ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ನಿಮಿತ್ತ ದಿನಾಂಕ:10/05/2024 ಅಕ್ಷಯತೃತೀಯದ೦ದು ದೇವರ ಸನ್ನಿಧಿಯಲ್ಲಿ ಅದಮಾರು ಮಠದ ಹಿರಿಯ ಯತಿಗಳಾದ ಪರಮಪೂಜ್ಯ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿದ್ವಾನ್ ಹೆರ್ಗ ಜಯರಾಮ ತಂತ್ರಿಗಳ ನೇತೃತ್ವದಲ್ಲಿ ಸುತ್ತುಪೌಳಿಯ ನಿರ್ಮಾಣದ ಕಾರ್ಯಕ್ಕೆ ಚಾಲನೆಯನ್ನು ಮಾಡಲಾಯಿತು.

ಉಡುಪಿ: ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಗುರುಪೀಠಗಳಲ್ಲೊಂದಾದ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆ ಮತ್ತು ಸಮಾಜದ ಉದ್ಧಾರಕ್ಕಾಗಿ ಹಮ್ಮಿಕೊಂಡ, ಮಠಾಧಿಪತಿಗಳಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿ ಅವರಿಂದ ಉಪದೇಶಿಸಲ್ಪಟ್ಟ ಶ್ರೀರಾಮನಾಮಜಪ ಅಭಿಯಾನವು ತಾರೀಕು

ಕೊಡಗು, ಮೇ.10: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಕೊಂದು ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಆರೋಪಿ ಪ್ರಕಾಶ್(35) ಮೃತದೇಹ ಪತ್ತೆಯಾಗಿದೆ. ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಶೋಧಕಾರ್ಯ ಮಾಡುವ ಸಮಯದಲ್ಲಿ ಸೂರ್ಲಬ್ಬಿ ಗ್ರಾಮದಿಂದ 3 ಕಿ.ಮೀ. ದೂರದ ಹಮ್ನಿಯಾಲದಲ್ಲಿ ಪ್ರಕಾಶ್ ಅಲಿಯಾಸ್

ಸುಳ್ಯ, ಮೇ.10: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ನಾಲ್ಕನೇ ಆರೋಪಿ ಮುಸ್ತಾಫ ಪೈಚಾರ್ ಕೊನೆಗೂ ಎನ್‌ಐಎ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಹತ್ಯೆ ಪ್ರಕರಣದ ಆರೋಪಿ ಮುಸ್ತಾಫ ಪೈಚಾರ್ ಯಾನೆ ಮಹಮ್ಮದ್ ಮುಸ್ತಾಫ ಎಸ್(43) ತಲೆಮರೆಸಿಕೊಂಡಿದ್ದ. ಇದೀಗ ಈತನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಇಂದು ಬೆಳಗ್ಗೆ ಎನ್.ಐ.ಎ ಇನ್‌ಸ್ಪೆಕ್ಟರ್ ಷಣ್ಮುಂಗಮ್

ಹಾಸನ, ಮೇ.10. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ಅಶ್ಲೀಲ ವೀಡಿಯೋ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಹಾಗೂ ದೇವರಾಜೇಗೌಡಗೆ ಎಸ್‌ಐಟಿ ತಂಡ ನೋಟಿಸ್ ನೀಡಿದೆ. ಏ.23 ರಂದು ಹಾಸನ ಸೈಬರ್ ಪೊಲೀಸ್ ಠಾಣೆಗೆ ಪ್ರಜ್ವಲ್ ರೇವಣ್ಣ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ದೂರು ನೀಡಿದ್ದರು. ಅದನ್ನು ಆಧರಿಸಿ ಕಾರ್ತಿಕ್