ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕಾಂತಾರ’ ಸಿನಿಮಾದ ಮುಹೂರ್ತ ನಡೆದಿದ್ದ ಆನೆಗುಡ್ಡೆ ಗಣಪತಿ ದೇವಸ್ಥಾನದಲ್ಲೇ ಈಗ ‘ಗಾಡ್ ಪ್ರಾಮಿಸ್’ ,ಸಿನಿಮಾಗೂ ಮುಹೂರ್ತ ಮಾಡಲಾಗಿದೆ. ಹೊಸ ನಿರ್ದೇಶಕ ಸೂಚನ್ ಶೆಟ್ಟಿ ಅವರು ನಟಿಸಿ, ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದೆ. ‘ಗಾಡ್ ಪ್ರಾಮಿಸ್’ ಚಿತ್ರದ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರದ ಆನೆಗುಡ್ಡೆ ಗಣಪತಿ ದೇವಾಲಯದಲ್ಲಿ ಮುಹೂರ್ತ ನಡೆದಿದ್ದು,

ಬೆಂಗಳೂರು, (ಮೇ.10): ಹಾಸನ  ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ  ವಿರುದ್ಧ ಒಂದರ ಮೇಲೊಂದು ಎಫ್​ಐಆರ್ ದಾಖಲಾಗುತ್ತಿವೆ. ಅದರಲ್ಲೂ ಮೂರನೇ ಎಫ್​ಐಆರ್​ ದಾಖಲಾಗಿರುವ ಸೆಕ್ಷನ್ ಪ್ರಜ್ವಲ್ ರೇವಣ್ಣಗೆ ಕಾನೂನು ಕಂಟಕ ಎದುರಾಗಿದೆ. ಪ್ರಜ್ವಲ್​ ರೇವಣ್ಣ ವಿರುದ್ಧ ಮೂರನೇ ಎಫ್​ಐಆರ್​ನಲ್ಲಿ ಐಪಿಸಿ 376(2)(N), 376(2)(K), 354(A), 354(B), 354(C) ಹಾಗೂ 506

ಚಿಕ್ಕಮಗಳೂರು, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು

ನವದೆಹಲಿ, ಮೇ 10: ಉದ್ಯೋಗಿಗಳಿಂದ ಪ್ರತಿಭಟನೆ ಎದುರಿಸುತ್ತಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್  ಸಂಸ್ಥೆ ವಾರಾಂತ್ಯದೊಳಗೆ ಬಿಕ್ಕಟ್ಟು ಶಮನ ಮಾಡಿಕೊಂಡಿದೆ. ಕ್ಯಾಬಿನ್ ಸಿಬ್ಬಂದಿ ಮುಷ್ಕರ ಅಂತ್ಯಗೊಂಡಿದ್ದು ಇಂದು ಶುಕ್ರವಾರ ಸಂಸ್ಥೆಯ ಬಹುತೇಕ ವಿಮಾನಗಳು ಇನ್ನೆರಡು ದಿನದಲ್ಲಿ ಪೂರ್ಣಪ್ರಮಾಣದಲ್ಲಿ ಸಂಚಾರ ನಡೆಸಲಿವೆ. ಮೇ 7ರಂದು ನೂರಾರು ಉದ್ಯೋಗಿಗಳು ಹೇಳದೇ ಕೇಳದೇ ರಜೆ

ತೆಲುಗು ಚಿತ್ರರಂಗದ ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಬೆಂಕಿ ಬಿದ್ದಿದ್ದು ಸುಮಾರು ನಾಲ್ಕು ಕೋಟಿ ರೂಪಾಯಿ ನಷ್ಟವಾಗಿದೆ. ಆದರೆ ಈ ಬೆಂಕಿ ಅವಘಡದಲ್ಲಿ ಯಾರಿಗೂ ಯಾವುದೇ ಗಾಯ ಅಥವಾ ಜೀವಹಾನಿ ಸಂಭವಿಸಿಲ್ಲ ಎಂದು ಚಿತ್ರತಂಡ ತಿಳಿಸಿದೆ. ಶಾರ್ಟ್ ಸರ್ಕ್ಯೂಟ್​ನಿಂದಾಗಿ

ದೆಹಲಿ, ಮೇ.10: ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​​​ (Arvind Kejriwal) ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​​​ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ. ಹಾಗೂ ಜೂನ್​​ ಎರಡಕ್ಕೆ ಶರಣಾಗುವಂತೆ ತಿಳಿಸಿದೆ. ಲೋಕಸಭೆ ಚುನಾವಣೆಯ ನಡುವೆ ಆಮ್ ಆದ್ಮಿ ಪಕ್ಷಕ್ಕೆ

ಬೆಂಗಳೂರು, ಮೇ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ  ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ  ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ

ಬೆಂಗಳೂರು, ಮೇ 9: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಕರ್ನಾಟಕ

ಬೆಳ್ತಂಗಡಿ, ಮೇ 8 : ಹಿರಿಯ ರಾಜಕೀಯ ಮುತ್ಸದ್ದಿ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ, ಕೆ. ವಸಂತ ಬಂಗೇರ (79) ಇಂದು ನಿಧನರಾಗಿದ್ದಾರೆ.ನಾಳೆ ಮುಂಜಾನೆ ಅವರ ಪಾರ್ಥಿವ ಶರೀರ ಹುಟ್ಟೂರಾದ ಬೆಳ್ತಂಗಡಿಗೆ ತರುವ ಸಾಧ್ಯತೆಯಿದೆ.

ಹೈದರಾಬಾದ್: ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಬಾಚುಪಲ್ಲಿ ಪೊಲೀಸರ ಪ್ರಕಾರ, ಬಲಿಯಾದವರು ಒಡಿಶಾ ಮತ್ತು ಛತ್ತೀಸ್‌ಗಢಕ್ಕೆ ಸೇರಿದ ವಲಸೆ ಕಾರ್ಮಿಕರು ಎಂದು ತಿಳಿದು ಬಂದಿದೆ. ಘಟನೆ