ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ನವದೆಹಲಿ: ಸತತ ಎರಡನೇ ಅವಧಿಗೆ ಲೋಕಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ 18ನೇ ಲೋಕಸಭೆಯ ಸ್ಪೀಕರ್ ಆದ ಓಂ ಬಿರ್ಲಾ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು. ಇಂದು ಲೋಕಸಭೆಯಲ್ಲಿ ಲೋಕಸಭಾಧ್ಯಕ್ಷರಾಗಿ ಓಂ ಬಿರ್ಲಾ ಅವರು ಆಯ್ಕೆಯಾದ ನಂತರ ಮಾತನಾಡಿದ ಪ್ರಧಾನಿ ಮೋದಿ, ಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಭಾರತ

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ಅಮಿತ್ ದಿಗ್ವೇಕರ್ ಸೇರಿದಂತೆ ಇತರರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಗೌರಿ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್‌ ದಿಗ್ವೇಕರ್‌ ಅಲಿಯಾಸ್‌ ಅಮಿತ್‌ ಅಲಿಯಾಸ್‌ ಪ್ರದೀಪ್‌ ಮಹಾಜನ್‌; ಏಳನೇ ಆರೋಪಿ ಸುರೇಶ್‌ ಎಚ್‌ ಎಲ್‌ ಅಲಿಯಾಸ್‌

ನವದೆಹಲಿ: ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಸ್ಪೀಕರ್ ಆಗಿ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಂಟು ಬಾರಿ ಕೇರಳದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ ಮರು ಆಯ್ಕೆಗೊಂಡಿದ್ದಾರೆ. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ

T20 World Cup 2024: ಟಿ20 ವಿಶ್ವಕಪ್ ನಾಕೌಟ್ ಹಂತಕ್ಕೆ ಬಂದು ನಿಂತಿದೆ. 20 ತಂಡಗಳೊಂದಿಗೆ ಶುರುವಾದ ಟೂರ್ನಿಯು ಇದೀಗ 4 ತಂಡಗಳ ಕದನವಾಗಿ ಮಾರ್ಪಟ್ಟಿದೆ. ಅದರಂತೆ ನಾಕೌಟ್ ಹಂತದಲ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯಗಳಿಗೂ ವೆಸ್ಟ್ ಇಂಡೀಸ್​ನ ಕೆರಿಬಿಯನ್ ದ್ವೀಪಗಳ

ಉಡುಪಿ:ನಗರಸಭೆ ಮತ್ತು ಉಡುಪಿ ಅಭಿವೃದ್ಧಿಯ ಪ್ರಾಧಿಕಾರದಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆಯ ಹಣ ಕೆರೆ ಅಭಿವೃದ್ಧಿಗೆಂದೆ ಮೀಸಲಾಗಿರುವ ಅನುದಾನದಲ್ಲಿ ಸುಮಾರು ಅಂದಾಜು60 ಲಕ್ಷ ವೆಚ್ಚದಲ್ಲಿ ಪರ್ಕಳದ ದುರ್ಗಾ ನಗರದಲ್ಲಿ ನೂತನವಾಗಿ ರಚಿಸಲಾದ ಕೆರೆ ಉದ್ಘಾಟನೆ ಮುನ್ನಕುಸಿದಿದೆ. ಈ ಕೆರೆ ಮಣ್ಣುಅಗೆಯುವಾಗ ತ್ರಿಶೂಲ ಇರುವ ಕಲ್ಲು ಹಾಗೂ ಅಭಿಶೇಕ ನಡೆದ ತೀರ್ಥ ಹರಿದು

ನವದೆಹಲಿ: 18ನೇ ಲೋಕಸಭೆ ಸ್ಪೀಕರ್ ಸ್ಥಾನಕ್ಕಾಗಿ ಎನ್ ಡಿಎ ಅಭ್ಯರ್ಥಿ ಓಂ ಬಿರ್ಲಾ ಹಾಗೂ ವಿರೋಧ ಪಕ್ಷಗಳ ಇಂಡಿಯಾ ಬಣದ ಅಭ್ಯರ್ಥಿ ಕೋಡಿಕುನ್ನಿಲ್ ಸುರೇಶ್ ನಡುವೆ ಪೈಪೋಟಿಯನ್ನು ಕಾಣಬಹುದಾಗಿದೆ. ಉಪ ಸ್ಪೀಕರ್ ಸ್ಥಾನವನ್ನು ಬಿಟ್ಟುಕೊಡುವುದಾಗಿ ಎನ್ ಡಿಎ ಭರವಸೆ ನೀಡದ ಹಿನ್ನೆಲೆಯಲ್ಲಿ ವಿರೋಧಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿವೆ. ಸಂಸತ್

ದೆಹಲಿಯಲ್ಲಿನ ನೀರಿನ ಕೊರತೆಯ ಕುರಿತು ಕಳೆದ ನಾಲ್ಕು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ನಡೆಸುತ್ತಿದ್ದ ಜಲಸಚಿವ ಅತಿಶಿ ಅವರು ಐದನೇ ದಿನವಾದ ಮಂಗಳವಾರ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಮುಂಜಾನೆ ಅವರ ಆರೋಗ್ಯ ಹದಗೆಟ್ಟ ನಂತರ ಅತಿಶಿ ಅವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂಬಂಧ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ವಿಚಾರಣಾ ನ್ಯಾಯಾಲಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣಾ ನ್ಯಾಯಾಲದ ಆದೇಶ ತಡೆಹಿಡಿಯುವಂತೆ ಕೋರಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿಯೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದಿದ್ದು, ಲಾರಿಯ ಕಂಟೈನರ್ ಹೆದ್ದಾರಿಯಲ್ಲಿ ಅಡ್ಡಲಾಗಿ ತಿರುಗಿ ನಿಂತ ಘಟನೆ ಉಪ್ಪಿನಂಗಡಿ ಬಳಿಯ ಕೂಟೇಲು ಎಂಬಲ್ಲಿ ಇಂದು ನಡೆದಿದೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ