``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಹಾವೇರಿ, ಜುಲೈ 13: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಗ್ಗಾಂವಿ ಬಳಿ ಇಂದು ಬೆಳಗ್ಗೆ ನಡೆದಿದೆ. ನೀಲಪ್ಪ ಮೂಲಿಮನಿ(23), ಸುದೀಪ್ ಕೋಟಿ(18) ಸ್ಥಳದಲ್ಲೇ ಮೃತಪಟ್ಟಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶಿವನಗೌಡ ಯಲ್ಲನಗೌಡ್ರ(20), ಕಲ್ಮೇಶ ಮಾನೋಜಿ (26) ಮೃತರು.

ಬೆಳಗಾವಿ, ಜುಲೈ.13: ಇನ್ಸ್ಟಾಗ್ರಾಂನಲ್ಲಿ ರೀಲ್ಸ್  ಮಾಡುತ್ತ ಹುಟ್ಟಿದ ಪ್ರೀತಿಗೆ ಸ್ವತಃ ಊರನ್ನು, ಅಪ್ಪ-ಅಮ್ಮನನ್ನು ಬಿಟ್ಟು ಮೈಸೂರಿನಿಂದ ಬೆಳಗಾವಿಗೆ ಬಂದು ಮದುವೆಯಾಗಿ ಗರ್ಭಿಣಿಯೂ ಆಗಿದ್ದ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಸದ್ಯ ನೇಣು ಬಿಗಿದ ಸ್ಥಿತಿಯಲ್ಲಿ ನೆಲದ ಮೇಲೆ ಮಲಗಿರುವಂತೆ ಮಹಿಳೆ ಶವ ಪತ್ತೆಯಾಗಿದ್ದು ಹಲವು ಅನುಮಾನಗಳು

ರಾಯಚೂರು, ಜುಲೈ 13: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ರಾಯಚೂರಿನಲ್ಲಿ ಮಹತ್ವದ ದಾಖಲೆ ಕಲೆ ಹಾಕಿದ್ದಾರೆ. ಸುಮಾರು 4 ಕೋಟಿ ರೂಪಾಯಿ ಹಣದ ರಹಸ್ಯ ಭೇದಿಸಿದ್ದಾರೆ. ಕಾಂಗ್ರೆಸ್ ಶಾಸಕ, ನಿಗದಮ ಅಧ್ಯಕ್ಷ ಬಸನಗೌಡ ದದ್ದಲ್ ಸಂಬಂಧಿ ಕಾರ್ತಿಕ್ ಮೂಲಕ

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ಚಾಲಕ ಅಪಾಯದಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬಿಜಾಡಿ ಕ್ರಾಸ್ ಬಳಿ ಜು. 12 ರಂದು ಶುಕ್ರವಾರ ಸಂಜೆ ನಡೆದಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ಬೀಜಾಡಿ ಕ್ರಾಸ್ ಬಳಿ ಹೆದ್ದಾರಿಯಲ್ಲಿ ಹಾಕಿರುವ ಬ್ಯಾರೀಕೆಡ್ ನ್ನು ಕಂಡು

ಶಿಗ್ಗಾವಿ : ಪಟ್ಟಣದ ಹನುಮನರ ಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರು ನೀಲಪ್ಪ ಮೂಲಿಮನಿ( 23), ಸುದೀಪ್ ಕೋಟಿ( 18) ಎಂದು ತಿಳಿದುಬಂದಿದೆ. ಮೃತ ದುರ್ದೈವಿಗಳು ಸವಣೂರು ತಾಲೂಕು ಬೇವಿನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು ಬೆಳಿಗ್ಗೆ ಬೆಳಗಾವಿ

ಬೆಂಗಳೂರು: ರಾಜ್ಯದಲ್ಲಿ ವರುಣ ಅಬ್ಬರ ಮುಂದುವರೆದಿದ್ದು, ಇಂದು(ಶುಕ್ರವಾರ) ಸಂಜೆ ಆಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆಗಮನವಾಗಿದೆ. ನಗರದ ಕೋರಮಂಗಲ, ಶಾಂತಿನಗರ, ಕೆ.ಹೆಚ್​ ರಸ್ತೆ, ವಿಧಾನಸೌಧ, ಕಬ್ಬನ್​ಪಾರ್ಕ್, ಮೆಜೆಸ್ಟಿಕ್, ವಿಜಯನಗರ, ರಾಜಾಜಿನಗರ, ಬನಶಂಕರಿ ಹಾಗೂ ಜಯನಗರದ ಸುತ್ತಮುತ್ತ ಮಳೆ ಶುರುವಾಗಿದೆ. ಗಾಳಿ ಸಹಿತ ಮಳೆಯಿಂದ ವಾಹನ ಸವಾರರ ಪರದಾಟ ನಡೆಸಿದ್ದು,

ಉಪ್ಪಿನಂಗಡಿ: ಜು. 13:ಬೈಕ್‌ ಹಾಗೂ ಪಿಕಪ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಶುಕ್ರವಾರ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ನಡೆದಿದೆ. ಮಂಗಳೂರು ಕೋಡಿಕ್ಕಲ್‌ ನಿವಾಸಿ ಪ್ರಣಮ್‌ ಕೋಟ್ಯಾನ್‌ (23) ಮೃತ ದುರ್ದೈವಿ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ

ತರಗತಿ ನಡೆಯುತ್ತಿರುವಾಗ ಎರಡು ಅಂತಸ್ತಿನ ಶಾಲೆಯೊಂದು ಕುಸಿದು 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ ದಾರುಣ ಘಟನೆ ಉತ್ತರ-ಮಧ್ಯ ನೈಜೀರಿಯಾದಲ್ಲಿ ನಡೆದಿದೆ. ಅವಶೇಷಗಳಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗಾಗಿ ಶೋಧ ನಡೆಯುತ್ತಿದೆ. ಪರಿಹಾರ ಮತ್ತು ರಕ್ಷಣಾ ತಂಡಗಳನ್ನು ಸ್ಥಳ್ದಲ್ಲಿ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ

ಬಂಟ್ವಾಳ:ಜು 13ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಪ್ರಮಾಣ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1ಮೀ.ನಷ್ಟಿದೆ. ನೇತ್ರಾವತಿ ನದಿಯಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ. ಮಲೆನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ. ತುಂಬೆ

ಪಾಟ್ನಾ: ಬಿಹಾರದಲ್ಲಿ ಸಿಡಿಲಿಗೆ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬಿಹಾರ ಮುಖ್ಯಮಂತ್ರಿ ಕಚೇರಿ ಶುಕ್ರವಾರ ನೀಡಿರುವ ಮಾಹಿತಿ ಅನ್ವಯ ಕಳೆದ 24 ಗಂಟೆಗಳಲ್ಲಿ ಬಿಹಾರದಾದ್ಯಂತ ಸಿಡಿಲು ಬಡಿತ-ಸಂಬಂಧಿತ ಘಟನೆಗಳಲ್ಲಿ ಒಟ್ಟು 21 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಬಿಹಾರದ ಮಧುಬನಿಯಲ್ಲಿ ಗರಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್‌ನಲ್ಲಿ ನಾಲ್ಕು, ರಾಜಧಾನಿ ಪಾಟ್ನಾದಲ್ಲಿ