ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜತೆಗೆ ಸುಪ್ರೀಂ ಕೋರ್ಟ್ ನ್ಯಾಯಪೀಠವು ಜಾರಿ ನಿರ್ದೇಶನಾಲಯದಿಂದ ತಮ್ಮ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಭರ್ಜರಿ ಭೇಟಿಯಾಡಿದೆ. ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಗೆ ಇತ್ತೀಚಿಗೆ ರಾಜೀನಾಮೆ ನೀಡಿದ್ದ ಮಾಜಿ ಬಿ. ನಾಗೇಂದ್ರ ಅವರನ್ನು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮುಂಜಾನೆಯಿಂದಲೇ ಬೆಟ್ಟದ ಪಾದದಿಂದ ಸಾವಿರ ಮೆಟ್ಟಿಲು ಹತ್ತಿದ ಭಕ್ತರು, ದಾರಿಯುದ್ದಕ್ಕೂ ಜಯಘೋಷ ಮೊಳಗಿಸಿದರು. ಮೆಟ್ಟಿಲುಗಳಿಗೆ ಅರಿಶಿನ- ಕುಂಕುಮ ಹಚ್ಚಿ ಹರಕೆ ತೀರಿಸುತ್ತಿದ್ದಾರೆ. ಆಷಾಢ ಮಾಸದಲ್ಲಿ ಶಕ್ತಿ ದೇವತೆಗೆ ವಿಶೇಷ

ಕಠ್ಮಂಡು: ನೇಪಾಳದ ಹೆದ್ದಾರಿಯಲ್ಲಿ ಭಾರೀ ಕುಸಿತ ಸಂಭವಿಸಿದ್ದು, ಪರಿಣಾಮ ಹೆದ್ದಾರಿಯಲ್ಲಿ ಸಾಗುತ್ತಿದ್ದ ಎರಡು ಬಸ್ ಗಳು ಜಖಂಗೊಂಡು 7 ಭಾರತೀಯರು ಸೇರಿ ಒಟ್ಟು 65 ಮಂದಿ ಪ್ರಯಾಣಿಕರು ನಾಪತ್ತೆಯಾಗಿರುವ ಘಟನೆ ಶುಕ್ರವಾರ ವರದಿಯಾಗಿದೆ. ಚಿತ್ವಾನ್ ಜಿಲ್ಲೆಯ ನಾರಾಯಣಘಾಟ್-ಮುಗ್ಲಿಂಗ್ ರಸ್ತೆಯ ಸಿಮಲ್ಟಾಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಈ ವೇಳೆ ಹೆದ್ದಾರಿಯಲ್ಲಿ ಸಾಗುತ್ತಿದ್ದ

ಬೆಂಗಳೂರು, ಜು.11: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮ ದಲ್ಲಿ ಆಗಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ(SIT) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಅದರಂತೆ ದಿನಕ್ಕೊಂದು ವಿಚಾರಗಳು ಬೆಳಕಿಗೆ ಬರುತ್ತಲಿದೆ. ಇದೀಗ ಆರೋಪಿಗಳ‌ ಮತ್ತೊಂದು ಕಹಾನಿ ಬಯಲಾಗಿದ್ದು, ಹೈದರಾಬಾದ್ ಫಸ್ಟ್ ಬ್ಯಾಂಕ್​ನಲ್ಲಿ ತೆರೆದಿದ್ದ 18 ನಕಲಿ ಖಾತೆಗಳಿಗೂ ಬೆಂಗಳೂರಿನ ಕನೆಕ್ಷನ್ ಇರುವುದು ತಿಳಿದು

ಮಂಗಳೂರು, ಜುಲೈ 11: ನಗರದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ  ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಸ್​ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿಗೆ  ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Development Corporation) ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ನಿನ್ನೆ ಬುಧವಾರ ಆರಂಭವಾಗಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಬೃಹತ್ ಕಾರ್ಯಾಚರಣೆ ಇಂದು ಗುರುವಾರ ಕೂಡ ಮುಂದುವರಿದಿದೆ. ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ

ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ (Divya Vasantha)ಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ʻಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್‌ ಆಗಿದ್ದ

ಮೈಸೂರು: ಮುಡಾ ಗೆಬ್ಬೆದ್ದು ನಾರುತ್ತಿದೆ, ಅದನ್ನ ಕ್ಲೀನ್ ಮಾಡುವ ಕೆಲಸ ಮಾಡುತ್ತೇನೆ. ಮುಡಾ ಹಗರಣದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ‌. ತನಿಖಾ ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಕಾಲದಲ್ಲೂ ತಪ್ಪುಗಳು ಆಗಿದೆ. ಬಿಜೆಪಿ ಕಾಲದಲ್ಲೇ ಹೆಚ್ಚು ತಪ್ಪಾಗಿರುವುದು. ಅದನ್ನ ಸರಿಪಡಿಸುತ್ತೇನೆ ಎಂದು ಮುಖ್ಯಮಂತ್ರಿ

ಉಡುಪಿ: ಶ್ರೀಕೃಷ್ಣ ಸೇವಾ ಬಳಗದ ಆಶ್ರಯದಲ್ಲಿ ದಿನಾಂಕ 13-07-2024ರ ಶನಿವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಪದ್ಮಶ್ರೀ ಪುರಸ್ಕೃತ ಕಳರಿಪಟು, 78 ವಯಸ್ಸಿನ ಗುರು ಶ್ರೀಮತಿ ಮೀನಾಕ್ಷಿ ಅಮ್ಮ ಅವರ ಸಾಧನೆಗಾಗಿ ಗೌರವಾದರ ಸನ್ಮಾನ, ಕಳರಿಪಯಟ್ಟು ಕುರಿತು ಪ್ರಾತ್ಯಕ್ಷಿಕೆಯೊಂದಿಗೆ ಭಾಷಣ ಕಾರ್ಯಕ್ರಮವು ಅಪರಾಹ್ನ 3.30ರಿಂದ ನಡೆಯಲಿದ್ದು ಜೊತೆಯಲ್ಲಿ ದಿನೇಶನ್ ಕಣ್ಣೂರು ಮತ್ತು