ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ಕನಿಷ್ಠ 400ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಹೇಳಲಾಗುತ್ತದೆ. ಇಂದು ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿವೆ. ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು
ಬಾಗಲಕೋಟೆ, ಜುಲೈ.30: ಬೆಳಗಾವಿಯಲ್ಲಿ (Belagavi) ಮೂರು ನದಿಗಳ ಆರ್ಭಟಕ್ಕೆ ಅಡಿಬಟ್ಟಿ ಗ್ರಾಮದ 30ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಜಲಾವೃತವಾಗಿದೆ. ನೆಮ್ಮದಿಯಾಗಿ ಬದುಕ್ತಿದ್ದ ಜನರ ಬದುಕು ಬೀದಿದೆ ಬಂದಿದೆ. ನಿನ್ನೆಯಷ್ಟೇ ಮನೆಯಲ್ಲಿದ್ದವರು ಇದೀಗ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯೋ ಸ್ಥಿತಿ ತಂದಿಟ್ಟಿದ್ದಾನೆ ವರುಣರಾಯ, ಮೂರು ನದಿಗಳ ನೀರು ನೂರಾರು ಜನರ ಬದುಕನ್ನೇ
ಪ್ಯಾರಿಸ್ ಒಲಿಂಪಿಕ್ಸ್ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾರತದ ಮಣಿಕಾ ಬಾತ್ರಾ ಪ್ರಿ ಕ್ವಾರ್ಟರ್ಫೈನಲ್ಗೆ ಎಂಟ್ರಿ ಕೊಟ್ಟಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸೋಮವಾರ ನಡೆದ ಮಹಿಳಾ ಸಿಂಗಲ್ಸ್ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಮಣಿಕಾ ಬಾತ್ರಾ ಹಾಗೂ ಫ್ರಾನ್ಸ್ನ ಪ್ರಿತಿಕಾ ಪವಾಡೆ
ಮಂಡ್ಯ, (ಜುಲೈ 29): ಕೆಲ ವರ್ಷಗಳಿಂದ ಸರಿಯಾದ ಮಳೆ ಇಲ್ಲದೇ ಬರಿದಾಗಿದ್ದ ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಸೇರಿ ಅವರು ಇಂದು (ಜುಲೈ 29) ಕಾವೇರಿಗೆ ಬಾಗಿನ ಅರ್ಪಿಸಿದರು. ಆದ್ರೆ, ಈ ಬಾಗಿನ ಕಾರ್ಯಕ್ರಮದ
ನವದೆಹಲಿ: ಸಂಸತ್ ಕಲಾಪದಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರಬೇಕಾದರೆ, ನಿರ್ಮಲಾ ಸೀತಾರಾಮನ್ ತಲೆ ಚಚ್ಚಿಕೊಂಡ ವಿಡಿಯೋ ಎಲ್ಲೆಡೆ ವೈರಲ್ ಆಗತೊಡಗಿದೆ. ಕೇಂದ್ರ ಬಜೆಟ್ ನ್ನು ಮಧ್ಯಮ ವರ್ಗ, ಹಿಂದುಳಿದ ವರ್ಗಗಳ ವಿರೋಧಿ ಬಜೆಟ್ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಟೀಕಾ ಪ್ರಹಾರ ನಡೆಸಿದರು. ಬಜೆಟ್ ತಯಾರಿಕೆಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಪಟ್ಟಣದಲ್ಲಿ ಸೋಮವಾರ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಇಂದು ಮಧ್ಯಾಹ್ನ ಸೋಪೋರ್ ಪಟ್ಟಣದ ಶಾಯರ್ ಕಾಲೋನಿಯಲ್ಲಿ ಈ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ
ನವದೆಹಲಿ: ದೆಹಲಿ ಕೋಚಿಂಗ್ ಸೆಂಟರ್ ನಲ್ಲಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಾವೃತವಾದ ರಸ್ತೆಯಲ್ಲಿ ವಾಹನ ಚಲಾಯಿಸುವ ಮೂಲಕ ರಾವ್ಸ್ ಸಿವಿಲ್ ಸರ್ವಿಸ್ ಕೋಚಿಂಗ್ ಇನ್‌ಸ್ಟಿಟ್ಯೂಟ್ ಗೇಟ್‌ಗೆ ಹಾನಿ ಮಾಡಿದ ಆರೋಪದ ಮೇಲೆ ಎಸ್ ಯುವಿ ಚಾಲಕ ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು
ಉತ್ತರ ಪ್ರದೇಶದ ಕಾನ್ಪುರದಲ್ಲಿ ಸರ್ಕಾರಿ ಭೂಮಿ ಕಬಳಿಕೆ ಆರೋಪದ ಮೇಲೆ ಟಿವಿ ಪತ್ರಕರ್ತ ಸೇರಿದಂತೆ 14 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಜಮೀನಿನ ಮಾರುಕಟ್ಟೆ ಮೌಲ್ಯ 1000 ಕೋಟಿ ರೂ.ಗೂ ಹೆಚ್ಚಿದೆ. ಬಂಧನದ ನಂತರ ಪೊಲೀಸ್ ಠಾಣೆಯಲ್ಲಿ ಭಾರೀ ಕೋಲಾಹಲ ಉಂಟಾಯಿತು. ಈ ಸಂಬಂಧ ಪೊಲೀಸರು ಪ್ರೆಸ್ ನೋಟ್
ಮಂಡ್ಯ: ಎರಡು ವರ್ಷಗಳ ನಂತರ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅಭಿಜಿತ್ ಲಗ್ನದಲ್ಲಿ ಬಾಗಿನ ಅರ್ಪಿಸಿದರು. ಇಂದು ಕೆಆರ್ ಎಸ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ನಂತರ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿಗಳಿಗೆ, ಡಿಸಿಎಂ ಡಿಕೆ
ರಾಮನಗರ: ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಕೈ ಕತ್ತರಿಸಿದ ಆರೋಪದ ಮೇಲೆ ಕನಕಪುರದಲ್ಲಿ ಭಾನುವಾರ ಇಬ್ಬರು ರೌಡಿಶೀಟರ್‌ಗಳ ಕಾಲುಗಳಿಗೆ ಪೊಲೀಸರು ಗುಂಡು ಹಾರಿಸುವ ಮೂಲಕ ಅವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಹರ್ಷ ಅಲಿಯಾಸ್ ಕೈಮಾ ಮತ್ತು ಕರುಣೇಶ್ ಅಲಿಯಾಸ್ ಕಣ್ಣ ಎಂದು ಗುರುತಿಸಲಾಗಿದೆ. ಇಬ್ಬರು ರೌಡಿಶೀಟರ್‌ಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ