ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇಂದು ಕಾರ್ಗಿಲ್‌ ವಿಜಯ ದಿವಸ. 1999 ರ ಕಾರ್ಗಿಲ್‌ ಯುದ್ಧದಲ್ಲಿ ಹೋರಾಡಿದ ಹಾಗೂ ಮಡಿದ ಸೈನಿಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಮತ್ತು ವೀರ ಸೈನಿಕರ ತ್ಯಾಗ ಬಲಿದಾನವನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಅಂದು ಭಾರತೀಯರು ಯೋಧರ ಧೈರ್ಯ, ಸಾಹಸಕ್ಕೆ ಪತರಗುಟ್ಟಿದ ಪಾಕಿಸ್ತಾನಿ ಸೇನೆ ಕಾರ್ಗಿಲ್‌ನಿಂದ ಕಾಲ್ಕಿತ್ತು ಓಡಿ

ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ ವಿಸ್ತೃತ ಚರ್ಚೆಯ ಅಗತ್ಯವಿರುವುದರಿಂದ ವಿಧೇಯಕ ಹಿಂಪಡೆದು ಸದನ ಸಮಿತಿ ರಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಮುಡಾ ಹಗರಣದ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ ಬೆಂಗಳೂರು

ಕಾಸರಗೋಡು:ಜಿಲ್ಲೆಯಲ್ಲಿ ಬುಧವಾರ , ಗುರುವಾರ ಬೀಸಿದ ಸುಂಟರಗಾಳಿ ಹಾಗೂ ಮಳೆಗೆ ಅಪಾರ ಹಾನಿ ಉಂಟಾಗಿದ್ದು , ಹಲವು ಮರಗಳು , ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದ್ದು, ವಾಹನ ಮನೆಗಳಿಗೆ ಹಾನಿ ಉಂಟಾಗಿದೆ. ನಿಲುಗಡೆ ಗೊಳಿಸಿದ್ದ ವಾಹನಗಳ ಮೇಲೂ ಮರಗಳು ಉರುಳು ಬಿದ್ದಿವೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ.

ಮಂಗಳೂರು: ಕರಾವಳಿಯಲ್ಲಿ ಮಳೆಯ ಅವಾಂತರ ಮುಂದುವರಿದಿದೆ ಭಾರಿ ಗಾಳಿ ಮಳೆಗೆ ಮನೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ. ಮೃತ ಬಾಲಕನ್ನು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು ಗುರುತಿಸಲಾಗಿದೆ. ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ತಡೆಗೋಡೆ

ಪ್ಯಾರಿಸ್ ಒಲಿಂಪಿಕ್ಸ್‌ನ ರ‍್ಯಾಂಕಿಂಗ್ ಸುತ್ತಿನಲ್ಲಿ ಭಾರತದ ಮಹಿಳಾ ಆರ್ಚರಿ ತಂಡ ಉತ್ತಮ ಪ್ರದರ್ಶನ ನೀಡಿದೆ. ದೀಪಿಕಾ ಕುಮಾರಿ, ಅಂಕಿತಾ ಭಗತ್ ಮತ್ತು ಭಜನ್ ಕೌರ್ ಭಾರತಕ್ಕೆ ಒಟ್ಟು 1,983 ಅಂಕಗಳನ್ನು ನೀಡಿದ್ದಾರೆ. ಇದರೊಂದಿಗೆ ಭಾರತ ತಂಡ ನಾಲ್ಕನೇ ಸ್ಥಾನ ಪಡೆದು ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ವೈಯಕ್ತಿಕ ಸ್ಕೋರ್ ಕುರಿತು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್ ಅವರು ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಈಗ ದರ್ಶನ್​ ಅವರಿಗೆ ಜೈಲಿನ ಊಟವೇ ಗತಿ ಆಗಿದೆ. ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ

ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ಇದೀಗ ಟಾಕ್ಸಿಕ್ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೆ ಇತ್ತೀಚೆಗಷ್ಟೇ ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳ ನಿದ್ದೆಗೆಡಿಸಿದ್ದು ಹೊಸ ಟ್ರೆಂಡ್ ಸೃಷ್ಟಿ ಮಾಡಿದ್ದರು. ಆದರೆ ಇದೀಗ ಟಾಕ್ಸಿಕ್ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಹೌದು ಟಾಕ್ಸಿಕ್ ಚಿತ್ರದ ವಿರುದ್ಧ ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ.

Paris Olympics 2024: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ ಪ್ರಣಯದೂರು ಪ್ಯಾರಿಸ್​ ಸಜ್ಜಾಗಿ ನಿಂತಿದೆ. ಇಂದಿನಿಂದ ಶುರುವಾಗಲಿರುವ ಒಲಿಂಪಿಯಾಡ್​ನಲ್ಲಿ ಈ ಬಾರಿ 206 ದೇಶಗಳ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯುತ್ತಿದ್ದು, ಇವರಲ್ಲಿ 47 ಮಹಿಳಾ ಸ್ಪರ್ಧಿಗಳಿರುವುದು ವಿಶೇಷ.

ನವದೆಹಲಿ: ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯ ಸಮಸ್ಯೆ ಪರಿಹರಿಸಲು ಮಾರ್ಗೋಪಾಯಗಳನ್ನು ಕಂಡುಕೊಳ್ಳುವಂತೆ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. ಪಂಜಾಬ್-ಹರಿಯಾಣ "ಸರ್ಕಾರಗಳು ರೈತರ ಪ್ರತಿಭಟನೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಮತ್ತು ರೈತರೊಂದಿಗೆ ಮಾತುಕತೆ ನಡೆಸುವ ಸ್ವತಂತ್ರ ವ್ಯಕ್ತಿಗಳ ಸಮಿತಿ ರಚಿಸುವಂತೆ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ದೀಪಂಕರ್