ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕಲಬುರಗಿ: ಕಲಬುರಗಿ ನಗರವನ್ನು ರೂ. 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು. ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ, ಸ್ಟಾರ್ಟ್ ಸಿಟಿಯಾಗಿ ಅಭಿವೃದ್ಧಿಪಡಿಸುವುದರಿಂದ ಇಲ್ಲಿನ ಜನರ ಜೀವನ ಗುಣಮಟ್ಟ ಸುಧಾರಿಸಲಿದ್ದು, ಹಿಂದುಳಿದ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ಆರೋಪಿಗಳಾದ ಹುಕ್ಕೇರಿಯ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ (ಈ ಹಿಂದಿನ ಹೆಸರು ಔರಂಗಾಬಾದ್)

ಉಡುಪಿಯ ವಿವಿದೆಡೆಯಲ್ಲಿ ಇ೦ದು ಶ್ರೀಅನ೦ತವೃತವನ್ನು ಸ೦ಭ್ರಮದಿ೦ದ ಆಚರಿಸಲಾಯಿತು. ಉಡುಪಿಯ ತೆ೦ಕಪೇಟೆಯಲ್ಲಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ,ಆಚಾರ್ಯಮಠ ತೆ೦ಕಪೇಟೆ,ಶ್ರೀಕೃಷ್ಣಮಠ ಮತ್ತು ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದಲ್ಲಿ ಕಲಶವನ್ನು ತು೦ಬಿಸಿ ಧಾರ್ಮಿಕ ವಿದಿವಿಧಾನದೊ೦ದಿಗೆ ಪೂಜೆಯನ್ನು ನೆರವೇರಿಸಲಾಯಿತು.

ಸಕಲೇಶಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಯ ಪೈಪ್ ಲೈನ್ ಸೋರಿಕೆಯಾಗಿದ್ದು, ಬೆಳೆ, ರಸ್ತೆ ಹಾಗೂ ಕಟ್ಟಡಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ. 15 ದಿನಗಳ ಹಿಂದೆಯೂ ಇದೇ ಸ್ಥಳದಲ್ಲಿ ಸೋರಿಕೆಯಾಗಿತ್ತು. ಮತ್ತೆ ಸೋರಿಕೆಯಿಂದ ಅಪಾರ ನಷ್ಟ ಉಂಟಾಗಿದೆ. ಸೆ. 6ರಂದು ಮೊದಲ ಹಂತದ ನೀರೆತ್ತುವ ಏತ ಯೋಜನೆಯನ್ನು

ಮಂಗಳೂರು: ಮುಸಲ್ಮಾನರ ಪವಿತ್ರ ಹಬ್ಬ ಈದ್ ಮಿಲಾದ್ ಮುನ್ನಾದಿನ ಕರಾವಳಿಯ ಮಂಗಳೂರಿನ ಎರಡು ಧಾರ್ಮಿಕ ಸ್ಥಳಗಳ ಮೇಲೆ ಕಲ್ಲು ತೂರಾಟ ಮತ್ತು ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ದಕ್ಷಿಣ ಕನ್ನಡ ಜಿಲ್ಲೆಯ ಕಾಟಿಪಳ್ಳ ಪಟ್ಟಣ ಮತ್ತು ಬಿ.ಸಿ.ರೋಡ್‌ನಲ್ಲಿ ಇಂದು ಸೋಮವಾರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮಂಗಳೂರು ತಾಲೂಕಿನ ಕಾಟಿಪಳ್ಳ ಪೇಟೆಯಲ್ಲಿ

ಹೊಸದಿಲ್ಲಿ : ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲಾಧಿಕಾರಿಯವರ ಅಧಿಕೃತ ಎಕ್ಸ್ ಹ್ಯಾಂಡಲ್ ಖಾತೆಯನ್ನು ಹ್ಯಾಕ್ ಮಾಡಿದ ಆರೋಪದ ಮೇಲೆ ನೋಯ್ಡಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಹ್ಯಾಕ್‌ ಮಾಡಿದ್ದ ಖಾತೆಯಿಂದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಪಪ್ಪು’ ಎಂದು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ತಂದೆ, ಮಗ ಸೇರಿ ಮೂವರು ಸಾವನ್ನಪ್ಪಿರುವಂತಹ ದುರ್ಘಟನೆ ಸಂಭವಿಸಿದೆ. ಮೃತರನ್ನು ತಂದೆ ರೇವಣ್ಣ (46) ಮಗ ಶರತ್ (26) ಹಾಗೂ ದಯಾನಂದ ಎಂದು ಗುರುತಿಸಲಾಗಿದೆ. ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ಘಟನೆ

ಮಂಗಳೂರು, ಸೆಪ್ಟೆಂಬರ್​​ 16: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ  ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಒಂದು ಕಡೆ ಬಂಟ್ವಾಳ ತಾಲೂಕಿ ಬಿಸಿ ರೋಡ್ ​ನಲ್ಲಿ ಹಿಂದೂ-ಮುಸ್ಲಿಮರ ಹೇಳಿಕೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮತ್ತೊಂದು ಕಡೆ ಇದೇ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸಿಹಿ, ಐಸ್​​ಕ್ರೀಂ,

ಉಡುಪಿ, ಸೆ. 16: ದುಬೈನಲ್ಲಿ  ವಾಸವಾಗಿದ್ದ ಕುಂದಾಪುರದ  ಮೂಲದ ಯುವಕ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾರೆ. ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್‌ ಡಿಸೋಜಾ (19 ವರ್ಷ) ಮೃತ ದುರ್ದೈವಿ. ದುಬೈಯಿಂದ ಸುಮಾರು 115 ಕಿ.ಮೀ. ದೂರದಲ್ಲಿರುವ ರಾಸ್‌ ಅಲ್‌ ಖೈಮಾದ ಸೈಂಟ್‌ ಮೆರೀಸ್‌ ಚರ್ಚ್‌ ಬಳಿ ಮನೆಯಲ್ಲಿ ವಾಸವಾಗಿದ್ದರು.

ವಾಷಿಂಗ್ಟನ್: ಸೆ. 16.ಅಮೆರಿಕದ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿತಾಗಿರುವ ಡೊನಾಲ್ಡ್ ಟ್ರಂಪ್ ಅವರ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ. ಫ್ಲೋರಿಡಾದ ಗಾಲ್ಫ್ ಕ್ಲಬ್ ನಲ್ಲಿದ್ದ ಟ್ರಂಪ್ ಮೇಲೆ ಅಜ್ಞಾತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಆದರೆ, ಟ್ರಂಪ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ವರ್ಷ ಜುಲೈ 13ರಂದು ಅವರ ಮೇಲೆ ಅಮೆರಿಕದ