ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಪೊಲೀಸರು ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ ವೈದ್ಯಕೀಯ ತಪಾಸಣೆ ಮುಕ್ತಾಯಗೊಂಡಿದ್ದು ಮುನಿರತ್ನ ಅವರನ್ನು ಅಶೋಕ್​​ನಗರ ಠಾಣೆಗೆ ಕರೆತರಲಾಗಿದೆ. ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್

ಬೆಂಗಳೂರು: ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಮಾನತೆ, ಐಕ್ಯತೆ, ಸಾಮರಸ್ಯ, ಸಾಮಾಜಿಕ ನ್ಯಾಯವನ್ನು ಬಿಂಬಿಸುವ ಐತಿಹಾಸಿಕ ಜಗತ್ತಿನ ಅತಿ ಉದ್ದದ ಮಾನವ ಸರಪಳಿ ರಚನೆ ಮೂಲಕ ದಾಖಲೆ ಸೃಷ್ಟಿಸಲಾಯಿತು. ಬೀದರ್ ನಿಂದ ಚಾಮರಾಜನಗರದವರೆಗೂ 31 ಜಿಲ್ಲೆಗಳನ್ನೊಳಗೊಂಡ 2,500 ಕಿ.ಮೀ ಉದ್ದದ ಮಾನವ ಸರಪಳಿಯನ್ನು ವಿವಿಧ ನಾಗರಿಕ ಸಂಘಟನೆಗಳ ಸಹಯೋಗದಲ್ಲಿ ಕರ್ನಾಟಕ

ಹೈತಿ,ಸೆ.15,ಹೈತಿಯ ದಕ್ಷಿಣ ಪೆನಿನ್ಸುಲಾದ ರಸ್ತೆಯೊಂದರಲ್ಲಿ ಪೆಟ್ರೋಲ್ ಸೋರಿಕೆಯಾದ ಟ್ಯಾಂಕರ್ ಟ್ರಕ್ ಸ್ಫೋಟಗೊಂಡು 15 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.ಸುಮಾರು 40 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಧ್ಯರಾತ್ರಿ ಪೆಟ್ರೋಲ್ ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ನಂತರ ಟ್ಯಾಂಕರ್ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಸುಮಾರು 20 ಮನೆಗಳೂ ಸುಟ್ಟು

ಕಲಬುರಗಿ, ಸೆಪ್ಟೆಂಬರ್​ 15: ರಷ್ಯಾದಲ್ಲಿ  ಸಿಲುಕಿಕೊಂಡಿದ್ದ ಕಲಬುರಗಿಯ  ಮೂವರು ಯುವಕರು ತಾಯ್ನಾಡಿಗೆ ಮರಳಿದ್ದಾರೆ. ಕಲಬುರಗಿಯ ಮೂವರು ಸೇರಿ ಒಟ್ಟು ಆರು ಜನ ಭಾರತೀಯರು ತವರಿಗೆ ವಾಪಸ್ ಆಗಿದ್ದಾರೆ. ಕಲಬುರಗಿಯ ನೂರಾನಿ ಮೊಹಲ್ಲಾ ನಿವಾಸಿ ಸೈಯದ್ ಇಲಿಯಾಸ್ ಹುಸೇನಿ, ಇಸ್ಲಾಮಬಾದ್​​ ಕಾಲೋನಿ ನಿವಾಸಿ ಮೊಹಮ್ಮದ್ ಸಮೀರ್, ಮಿಜಗುರಿ ಪ್ರದೇಶದ ಮೊಹಮ್ಮದ್

ಬೆಲ್ಜಿಯಂನ ಬ್ರಸೆಲ್​​ನಲ್ಲಿ ನಡೆದ ಡೈಮಂಡ್ ಲೀಗ್​ ಜಾವೆಲಿನ್ ಥ್ರೋ ಫೈನಲ್​​ನಲ್ಲಿ ನೀರಜ್ ಚೋಪ್ರಾ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಂತಿಮ ಹಣಾಹಣಿಯಲ್ಲಿ ಅ್ಯಂಡರ್ಸನ್ ಪೀಟರ್ಸ್ 87.87 ಮೀಟರ್ ದೂರಕ್ಕೆ ಭರ್ಜಿ ಎಸೆದು ಮೊದಲ ಸ್ಥಾನ ಪಡೆದರೆ, ನೀರಜ್ ಚೋಪ್ರಾ 87.86 ದೂರಕ್ಕೆ ಎಸೆಯುವಲ್ಲಿ ಯಶಸ್ವಿಯಾಗಿದ್ದರು. ಅಂದರೆ ಇಲ್ಲಿ ಮೊದಲ ಸ್ಥಾನ ಹಾಗೂ

ಮಂಗಳೂರು: ಇನ್ನು ಮುಂದೆ  ಸಂಚಾರ ನಿಯಮ ಉಲ್ಲಂಘಿಸುವ ಮೊದಲು ವಾಹನ ಚಾಲಕರು ಸಾಕಷ್ಟು ಚಿಂತಿಸಬೇಕಾಗಿದೆ. ಸಿಕ್ಕಿಬಿದ್ದರೆ ದಂಡ ಪಾವತಿಸಿ ಸುಮ್ಮನಾಗಬಹುದು ಎಂದು ಭಾವಿಸಿದ್ದರೆ ಆಪಾಯ ಖಚಿತ. ಯಾಕೆಂದರೆ ಪೊಲೀಸರು  ಇಂಥವರ ಚಾಲನಾ ಪರವಾನಿಗೆಯನ್ನು ಅಮಾನತು ಮಾಡುವ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಸಂಚಾರ ನಿಯಮ ಉಲ್ಲಂಘನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು

ಕುಂದಾಪುರ: ಸಮೀಪದ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ಜಾನುವಾರು ಕಳ್ಳತನ  ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಮೊಹಮ್ಮದ್‌ ಸೀನಾನ್‌(19), ಹಾಗೂ ಇನ್ನೋರ್ವ ಬಾಲಕ ಎಂದು ತಿಳಿದು ಬಂದಿದೆ. ಪ್ರಕರಣದ ವಿವರ: ಗಂಗೊಳ್ಳಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ:  94/2024 ಕಲಂ. 303(2) BNS. ಮತ್ತು ಕಲಂ. 4,

ಹೊಸದಿಲ್ಲಿ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಇಂದ (ಸೆ.15) ಬೆಳಗ್ಗೆ ಕಾರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಮುಂಜಾನೆ 4:30 ರ ಸುಮಾರಿಗೆ ಉತ್ತರ ಪ್ರದೇಶದ ದೇವಾಸ್ ನಿವಾಸಿಗಳು ಸಿಕಾರ್

ಬೆಂಗಳೂರು, ಸೆಪ್ಟೆಂಬರ್​ 15: ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಿದ್ದ ಫೋಟೋ ವೈರಲ್​​ ಆಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಫೋಟೋದಲ್ಲಿ ಆರೋಪಿ ದರ್ಶನ್​ ಜೊತೆ ರೌಡಿಶೀಟರ್​​ ವಿಲ್ಸನ್​​ ಗಾರ್ಡನ್​ ನಾಗ ಕೂಡ ಇದ್ದನು. ಇದೀಗ, ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ

ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಬಿಜೆಪಿ ತನ್ನ ವಿರುದ್ಧ ಸುಳ್ಳು ಆರೋಪ ಮಾಡಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಹೀಗಾಗಿ ಸಾರ್ವಜನಿಕ ನ್ಯಾಯಾಲಯದ ಮೊರೆ ಹೋಗುತ್ತೇವೆ.ಅವರ ಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ನವೆಂಬರ್‌ನಲ್ಲಿ ದೆಹಲಿ ಚುನಾವಣೆ ನಡೆಸುವಂತೆ