ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ ನಾಲ್ಕೂವರೆ ತಿಂಗಳುಗಳೇ ಕಳೆದಿವೆ. ಅವರು ಜೂನ್ 11ರಂದು ಬಂಧನಕ್ಕೆ ಒಳಗಾದರು. ಅವರ ವಿರುದ್ಧವೇ ಎಲ್ಲಾ ಸಾಕ್ಷ್ಯಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಯಿತು. ಚಾರ್ಜ್​ಶೀಟ್ ಸಲ್ಲಿಕೆ ಆದ ಬಳಿಕವೇ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಕೆಳಹಂತದ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ ಹಗರಣ) ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್‌ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಟೇಶ್‌ ಮನೆ ಮೇಲೆ ನಿನ್ನೆ ಇಡಿ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆಗೆ ಒಳಪಡಿಸಿದ್ದರು. ಪ್ರಸ್ತುತ ನಟೇಶ್‌ ಅವರನ್ನು ವಶಕ್ಕೆ ಪಡೆದ

ಸಿಕಾರ್: ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ಬಸ್‌ವೊಂದು ಫ್ಲೈಓವರ್‌ನ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಮತ್ತು 34ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್ ಮಾತನಾಡಿ, ಸಲಾಸರ್‌ನಿಂದ ಲಕ್ಷ್ಮಣಗಢಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ತಿರುವು

ಅಹಮದಾಬಾದ್‌: ಸ್ಮೃತಿ ಮಂಧಾನ ಅವರ ಭರ್ಜರಿ ಶತಕ ಹಾಗೂ ಹರ್ಮನ್‌ಪ್ರೀತ್ ಕೌರ್ ಅವರ ಅರ್ಧಶತಕದ ನೆರವಿನಿಂದ ಭಾರತ ವನಿತೆಯರ ತಂಡ ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದು ಬೀಗಿದೆ. ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ದ ನಡೆದ ಮೂರನೇ ಮತ್ತು ನಿರ್ಣಾಯಕ ಏಕದಿನ ಪಂದ್ಯದಲ್ಲಿ ಭಾರತ

ಮಂಗಳೂರು: ಕೇರಳದ ನೀಲೇಶ್ವರಂನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ ಪಟಾಕಿ ಅವಘಡದಲ್ಲಿ 150ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆ ಪೈಕಿ 26 ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲಾ 26 ಮಂದಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರಲ್ಲಿ ಮೂವರು ಬರ್ನ್ ಇಂಟೆನ್ಸಿವ್ ಕೇರ್ ಯುನಿಟ್‌ಗಳಲ್ಲಿ(ಬಿಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು

ಈ ಬಾರಿಯ ದೀಪಾವಳಿಯ ಹಬ್ಬಕ್ಕೆ ಇನ್ನು ಕೇವಲ ಎರಡೇ ದಿನ ಬಾಕಿಯಿದ್ದು ಜನರು ದೀಪಾವಳಿಹಬ್ಬವನ್ನು ಸ೦ಭ್ರಮದಿ೦ದ ಆಚರಸಲು ಎಲ್ಲಾ ರೀತಿಯ ಸಿದ್ದತೆಯಲ್ಲಿ ತೊಡಗಿದ್ದಾರೆ. ಹಬ್ಬಕ್ಕೆ ಬೇಕಾಗುವು ದೀಪದ ಎಣ್ಣೆ, ಗೂಡುದೀಪ, ಹಣತೆ, ಹೊಸ ಬಟ್ಟೆ ಹಾಗೂ ಸಿಹಿತಿ೦ಡಿಯನ್ನು ಖರೀದಿಸುವ ದೃಶ್ಯವ೦ತೂ ಎಲ್ಲೆಡೆಯಲ್ಲಿ ಕ೦ಡುಬರುತ್ತಿದೆ. ಹೊರ ಊರಿನಲ್ಲಿರುವ ಜನರು ಹಬ್ಬದ ಆಚರಣೆಗಾಗಿ ತಮ್ಮ

ಬೆಂಗಳೂರು: ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಶನಿವಾರ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ರಾಷ್ಟ್ರದ ಅಭಿವೃದ್ಧಿ ಮತ್ತು ರೈತರ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಿದರು. ತಮ್ಮ ಪತ್ನಿ ಸುದೇಶ್ ಧನ್ಕರ್ ಅವರೊಂದಿಗೆ ಗೌಡರೊಂದಿಗೆ ಒಂದು ಗಂಟೆ ಕಾಲ ಕಳೆದ ಉಪರಾಷ್ಟ್ರಪತಿ, ಗೌಡರ ಪತ್ನಿ ಚೆನ್ನಮ್ಮ ಶೀಘ್ರ

ಕಾನ್ಪುರ: 4 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಶವವೊಂದು ಉತ್ತರ ಪ್ರದೇಶದ ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆಯ ಬಳಿ ಪತ್ತೆಯಾದ ಘಟನೆ ವರದಿಯಾಗಿದೆ. ಉತ್ತರ ಪ್ರದೇಶದಲ್ಲಿ ಮಹಿಳೆಯೊಬ್ಬ ಹೈ ಪ್ರೊಪೈಲ್ ನಾಪತ್ತೆ ಪ್ರಕರಣಕ್ಕೆ ಇದೀಗ ಮಹತ್ತರ ಟ್ವಿಸ್ಟ್ ದೊರೆತಿದ್ದು, ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಂಗಲೆಯ ಬಳಿ ಮಹಿಳೆಯ ಶವ ಪತ್ತೆಯಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆ ನಾನಾ ಅವಾಂತರಗಳನ್ನು ಸೃಷ್ಟಿ ಮಾಡಿದ್ದು, ಇದೀಗ ಮಳೆ ಕಡಿಮೆಯಾಗಿದೆಯಾದರೂ ನಗರ ನಿವಾಸಿಗಳ ಟೆನ್ಷನ್ ಮಾತ್ರ ಇನ್ನೂ ನಿಂತಿಲ್ಲ. ಈ ನಡುವೆ ಮತ್ತೆ ನಗರದಲ್ಲಿ ಬಿಬಿಎಂಪಿ ಅಕ್ರಮ ಒತ್ತುವರಿ ತೆರವಿಗೆ ಮುಂದಾಗಿದೆ. ಹೌದು