ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮಡಿಕೇರಿ: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ ಮಾಡಿದ ಘಟನೆ ನ.23ರ ಶನಿವಾರ ಮಧ್ಯಾಹ್ನ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ. ಪರಾರಿಯಾಗುವ ಸಂದರ್ಭ ಕಳ್ಳರು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು, ಪೊಲೀಸರ ಅತಿಥಿಯಾಗಿದ್ದಾರೆ. ಪಟ್ಟಣದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯಿರುವ ಶ್ರೀಕುಮಾರಲಿಂಗೇಶ್ಚರ ಹಾರ್ಡ್ ವೇರ್ ಅಂಗಡಿಯಲ್ಲಿ ಮಾಲೀಕ ತೀರ್ಥ

ಮೈಸೂರು, ನವೆಂಬರ್​ 25: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ  ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಹಿನ್ನೆಲೆ ಸಿಎಂ ಈ ಆದೇಶ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ ನೀಡಿದ್ದಾರೆ. ಚುನಾವಣೆಯ ಹೀನಾಯ ಸೋಲಿನ ಹೊಣೆ ಹೊತ್ತು ಪಟೋಲೆ ರಾಜೀನಾಮೆ ನೀಡಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಎರಡಂಕಿ ತಲುಪಿದೆ. ಕೇವಲ 10 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು, ಆದರೆ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸಾಧನೆ ಉತ್ತಮವಾಗಿತ್ತು. ಭಂಡಾರಾ

ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 28 ರಂದು ಜಾರ್ಖಂಡ್ ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದ್ದೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಎಪಿ ರಾಷ್ಟ್ರೀಯ ಸಂಚಾಲಕ

ಜಿದ್ದಾ (ಸೌದಿ ಅರೇಬಿಯ) : ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯುತ್ತಿರುವ ಐಪಿಎಲ್‌ ಮೆಗಾ ಹರಾಜಿನಲ್ಲಿ ಭಾರತದ ಬ್ಯಾಟರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರು 27 ಕೋಟಿ ರೂ. ಗೆ ಹರಾಜಾಗಿದ್ದಾರೆ. ಆ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬೆಲೆಗೆ ಹರಾಜಾದ ಆಟಗಾರ ಎನಿಸಿಕೊಂಡಿದ್ದಾರೆ. ಮೂಲ ಬೆಲೆ 2 ಕೋಟಿ

ಮಂಗಳೂರು:ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್​ನಲ್ಲಿ ಹಣ ಬಂದಿದೆ ಎಂದು ಕಾಂಗ್ರೆಸ್ ಎಂಎಲ್​ಸಿ ಹರಿಪ್ರಸಾದ್ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿ ತೂಕದ ಲೆಕ್ಕದಲ್ಲಿ ಹಣ ಖರ್ಚು ಮಾಡಿದ್ದಾರೆ . ರಾಜ್ಯದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದೆ. ರಾಜ್ಯದಲ್ಲಿ ಬೇರೆ ಪಕ್ಷಗಳು ಭಾರಿ ಹಣದ ಹೊಳೆ ಹರಿಸಿತ್ತು.

ಉಡುಪಿ:ಕೇಂದ್ರದ ಮೋದಿ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಸುಳ್ಳು ಭರವಸೆಗಳು ಮತ್ತು ಕೇವಲ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸುವುದು ಈ ಎಲ್ಲ ಕಾರಣಗಳಿಂದ ಕಂಗೆಟ್ಟ ಮತದಾರರು ಕಾಂಗ್ರೆಸ್ ಪಕ್ಷದ ಸರಕಾರ ತಮಗೆ ನೀಡಿದಂತಹ ಗ್ಯಾರಂಟಿ ಯೋಜನೆಗಳಿಂದ ಸಂತುಷ್ಟರಾಗಿ ತಮಗೆ ಆಸರೆಯಾಗಿ ನಿಂತ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಮೂರು

ಪರ್ತ್: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಿರ್ಣಾಯಕ ಘಟ್ಟ ತಲುಪಿದ್ದು, ಭಾರತದ ಬೃಹತ್ ಮೊತ್ತದಲ್ಲಿ ಮಹತ್ತರ ಪಾತ್ರವಹಿಸಿದ ವಿರಾಟ್ ಕೊಹ್ಲಿ ಶತಕದ ಮೂಲಕ ಭಾರತದ ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್ ರ ದಾಖಲೆಯೊಂದನ್ನು ಧೂಳಿಪಟ ಮಾಡಿದ್ದಾರೆ. ಹೌದು.. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದ ಜಾಗದಲ್ಲಿ ನಟ ದರ್ಶನ್ ಇದ್ದ ಬಗ್ಗೆ ಫೋಟೋ ಸಿಕ್ಕ ಹಿನ್ನೆಲೆ ದರ್ಶನ್ ಜಾಮೀನು ರದ್ದತಿ ಬಗ್ಗೆ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತಾಡಿದ ಅವರು, ದರ್ಶನ್ ಜತೆಗಿದ್ದ ಇತರೆ ಆರೋಪಿಗಳ ಮೊಬೈಲ್ ಫೋನ್ ಗಳನ್ನು ಎಫ್ ಎಸ್

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ NCP ಶಾಸಕಾಂಗದ ಪಕ್ಷದ ನಾಯಕರಾಗಿ ಅಜಿತ್ ಪವಾರ್ ಭಾನುವಾರ ಆಯ್ಕೆಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಸಂಸದ ಸುನೀತ್ ತಟ್ಕರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮತ್ತು ಅವರ ಸಹೋದ್ಯೋಗಿ ಅನಿಲ್ ಪಾಟೀಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ಮರು ನೇಮಕ ಮಾಡಲಾಯಿತು. ಪಾಟೀಲ್