ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ, ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಇದೆ. ಕಳೆದ ಒಂದು ವಾರದ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಫೆಂಗಲ್ ಚಂಡಮಾರುತದಿಂದಾಗಿ ಸಾಕಷ್ಟು ಅವ್ಯವಸ್ಥೆ ಸೃಷ್ಟಿಯಾಗಿತ್ತು. ಇದೀಗ ಬಂಗಾಲಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮ ಈಗಾಗಲೇ ಬೆಂಗಳೂರಿನ ಮೇಲೆ ಗೋಚರಿಸಲಾರಂಭಿಸಿದೆ. ಬೆಂಗಳೂರು ಗ್ರಾಮಾಂತರ,

ಮಂಡ್ಯ : ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಮದ್ದೂರಿನ ಸೋಮನಹಳ್ಳಿಯ ಕಾಫಿ ಡೇ ಆವರಣದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಬುಧವಾರ ನೆರವೇರಿತು. ಕುಶಾಲು ತೋಪು ಹಾರಿಸುವ ಮೂಲಕ ಪೊಲೀಸರು, ಎಸ್.ಎಂ.ಕೃಷ್ಣ ಅವರಿಗೆ ಗೌರವ ನಮನ ಸಲ್ಲಿಸಿದರು. ಒಕ್ಕಲಿಗ ಸಂಪ್ರದಾಯಕ್ಕೆ ಅನುಗುಣವಾಗಿ ಅವರ ಅಂತ್ಯ ಸಂಸ್ಕಾರ

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪ ವಾಟ್ಸ್‌ ಆ್ಯಪ್‌ ಮತ್ತು ಟೆಲಿಗ್ರಾಂ ಲಿಂಕ್‌ ಮೂಲಕ ಕೆಲಸದ ಆಮಿಷ ತೋರಿಸಿ ಆನ್‌ಲೈನ್‌ ಮೂಲಕ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಜಮ್ಮು ಕಾಶ್ಮೀರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ. ಬೆಂಗಳೂರಿನ ಜಲಸಂದ್ರ

ಬೆಂಗಳೂರು, ಡಿಸೆಂಬರ್​ 11: 2024 ಕ್ಕೆ ವಿದಾಯ ಹೇಳಿ, 2025ನ್ನು ಬರ ಮಾಡಿಕೊಳ್ಳುವ ಸಮಯ ಬಂದೇ ಬಿಟ್ಟಿದೆ. ಹೊಸ ವರ್ಷ ಆಚರಣೆಗೆ ದಿನಗಣನೆ ಶುರುವಾಗಿದೆ. ಈ ಹೊಸ ವರ್ಷದ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಕೂಡ ಸಜ್ಜಾಗುತ್ತಿದೆ. ಹೀಗಾಗಿ ಈ ಬಾರಿ ಹೆಚ್ಚಿನ ಭದ್ರತೆಗಾಗಿ ಕೇಂದ್ರ ವಿಭಾಗ ಪೊಲೀಸರಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಹೊಸ ವರ್ಷ

ಕಪೂರ್ ಕುಟುಂಬದ ಪ್ರಮುಖ ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ ಕಪೂರ್ 100ನೇ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಜೊತೆಗೆ ಒಂದು ಅಮೂಲ್ಯ ಉಡುಗೊರೆಯನ್ನೂ ನೀಡಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಕಪೂರ್ ಕುಟುಂಬ ಕೊಟ್ಟಿರುವ ಕೊಡುಗೆ ಅಪಾರವಾದುದು. ಈಗ ಹೆಮ್ಮರವಾಗಿ ಬೆಳೆದಿರುವ ಬಾಲಿವುಡ್​ಗೆಅಡಿಪಾಯ ಹಾಕಿದ್ದೆ ಕಪೂರ್ ಕುಟುಂಬದ ಪೃಥ್ವಿರಾಜ್ ಕಪೂರ್. ಪೃಥ್ವಿರಾಜ್

ಕಾರವಾರ, ಡಿಸೆಂಬರ್​ 11: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ  ತಾಲೂಕಿನ ಮುರುಡೇಶ್ವರದಲ್ಲಿ  ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿ ಸಮುದ್ರ ಪಾಲಾಗಿದ್ದ ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿವೆ. ಮಂಗಳವಾರ ಶಾವಂತಿ (15)ಯ ಮೃತದೇಹ ಪತ್ತೆಯಾಗಿತ್ತು. ಇಂದು (ಡಿಸೆಂಬರ್​ 11) ದೀಕ್ಷಾ (15), ಲಾವಣ್ಯ (15), ವಂದನಾ (15) ಮೃತ ದೇಹಗಳು ಪತ್ತೆಯಾಗಿವೆ. ನಾಲ್ವರೂ

ನಟಿ ರಚಿತಾ ರಾಮ್ ಮತ್ತು ನಟ ಸತೀಶ್ ನೀನಾಸಂ ಅವರು ಮತ್ತೆ ಒಂದಾಗಿದ್ದರೆ. ‘ಅಯೋಗ್ಯ’ ಸಿನಿಮಾದಲ್ಲಿ ಜನರನ್ನು ರಂಜಿಸಿದ್ದ ಅವರು ಈಗ ‘ಅಯೋಗ್ಯ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ಸೂಪರ್ ಹಿಟ್ ಆದ ‘ಅಯೋಗ್ಯ’ ಸಿನಿಮಾ ಬಿಡುಗಡೆಯಾಗಿ 6 ವರ್ಷ ಕಳೆದಿದೆ. ಈಗ ‘ಅಯೋಗ್ಯ 2’ ಚಿತ್ರ ಸೆಟ್ಟೇರಿದೆ. ಬೆಂಗಳೂರಿನ

ಮುಂಬೈ: ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಭಾರತೀಯ ಸಂವಿಧಾನದ ಪ್ರತಿಕೃತಿಯನ್ನು ಹಾನಿಗೊಳಿಸಿದ ನಂತರ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಈ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದರು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು. ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಸಂಬಂಧಿಸಿದಂತೆ

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರಿನ ಬಳಿ  ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಢಿಕ್ಕಿ ಹೊಡೆದ ಕಾರು ಮತ್ತು ಓವರ್‌ಟೇಕ್‌ ಮಾಡುತ್ತಿದ್ದ ಇನ್ನೊಂದು ಕಾರು ಕಮರಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಸಾವನ್ನಪ್ಪಿದವರು ಸೇವಂತಿಗುಡ್ಡೆಯ ನಿವಾಸಿ ಕೃಷ್ಣಪ್ಪ ಅವರ ಪತ್ನಿ ಬೇಬಿ (65) ಎಂದು ತಿಳಿದು ಬಂದಿದೆ. ಆಡಂಕುದ್ರಿನಲ್ಲಿ

ಬೆಳಗಾವಿ, (ಡಿಸೆಂಬರ್ 11): 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದರೂ ಸಹ ಪ್ರತಿಭಟನೆಕಾರರು ಬ್ಯಾರಿಕೇಡ್​ಗಳನ್ನು ತಳ್ಳಿ ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದ್ದಾರೆ. ಇದರಿಂದ ಸುವರ್ಣಸೌಧ ಮುಂಭಾಗ ಭಾರೀ ಹೈಡ್ರಾಮಾ