ಮಡಿಕೇರಿ: ಕೊಡಗಿನಲ್ಲಿ ಶುಕ್ರವಾರ ಸಂಜೆ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಂಡಿದ್ದ ಎರಡು ಸಮುದಾಯದ ಭಕ್ತರು ಧರಿಸಿದ್ದ ಉಡುಪಿನ ಸಂಬಂಧ ಮನಸ್ತಾಪ ಉಂಟಾಗಿದೆ.
ಕೆಲವು ಕೊಡವ ಭಕ್ತರು ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನಕ್ಕೆ ತೆರಳುತ್ತಿದ್ದಾಗ, ಗೌಡ ಸಮುದಾಯಕ್ಕೆ ಸೇರಿದ ಸ್ಥಳೀಯರು ಅವರನ್ನು ತಡೆದಿದ್ದಾರೆ ಎನ್ನಲಾಗಿದೆ.
ದೇವಾಲಯದ ಆಡಳಿತ ಮಂಡಳಿಯ ಕೆಲವರು ಕೊಡವ ಭಕ್ತರಿಗೆ ಪ್ರವೇಶವನ್ನು ನಿರಾಕರಿಸಿದರು,