ಬೆಂಗಳೂರು, ಡಿಸೆಂಬರ್ 25: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದಲ್ಲಿ ಸೇನಾ ವಾಹನ 150 ಅಡಿ ಕಂದಕಕ್ಕೆ ಉರುಳಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ದುರಂತದಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ಮಾರಿಗೊಂಡ (25), ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬಿಜಾಡಿಯ ಯೋಧ
ಮಂಗಳೂರು, ಡಿಸೆಂಬರ್ 25: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ
ಛತ್ತೀಸ್‌ಗಢದ ಬಿಜೆಪಿ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ಮಹತಾರಿ ವಂದನಾ ಯೋಜನೆಯಡಿ ತಿಂಗಳಿಗೆ ಒಂದು ಸಾವಿರ ರೂಪಾಯಿ ಗೌರವಧನವನ್ನು ನೀಡುತ್ತಿದೆ. ಇದೀಗ ಈ ಯೋಜನೆಯಡಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಹೆಸರಿನಲ್ಲಿರುವ ಖಾತೆಗೆ ರೂ.1000 ಜಮಾ ಆಗುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.ಸುಮಾರು ಹತ್ತು ತಿಂಗಳಿನಿಂದ ಸನ್ನಿ ಲಿಯೋನ್ ಹೆಸರಿನ ಬ್ಯಾಂಕ್ ಖಾತೆಗೆ
ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಕ್ಕೆ ವಾಪಾಸ್ ಕಳುಹಿಸಲು ರಾಜತಾಂತ್ರಿಕ ಟಿಪ್ಪಣಿಯನ್ನು ಭಾರತಕ್ಕೆ ಕಳುಹಿಸಿದೆ. ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಥವಾ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್, ಬಾಂಗ್ಲಾದೇಶವು ಮಾಜಿ ಪ್ರಧಾನಿಯನ್ನು ನ್ಯಾಯಾಂಗ ಪ್ರಕ್ರಿಯೆಗೆ ಹಿಂತಿರುಗಿಸಲು ಬಯಸುತ್ತದೆ ಎಂದು ಭಾರತ ಸರ್ಕಾರಕ್ಕೆ
ನವದೆಹಲಿ: ಭಾನುವಾರ ಬ್ರೆಜಿಲ್‌ನ ಪ್ರವಾಸಿ ಪಟ್ಟಣವಾದ ಗ್ರಾಮಡೊಗೆ ಸಣ್ಣ ವಿಮಾನವೊಂದು ಪತನಗೊಂಡ ಹಿನ್ನೆಲೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 1 ಡಜನ್ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬ್ರೆಜಿಲ್‌ನ ಸಿವಿಲ್ ಡಿಫೆನ್ಸ್ ಏಜೆನ್ಸಿ ಪ್ರಕಾರ, ಹಡಗಿನಲ್ಲಿದ್ದ ಎಲ್ಲಾ 10 ಪ್ರಯಾಣಿಕರು ಮತ್ತು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ನೆಲದ ಮೇಲೆ ಡಜನ್‌ಗಿಂತಲೂ
ಬಳ್ಳಾರಿ, ಡಿಸೆಂಬರ್ 24: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮನ್ನು ಕೇವಲವಾಗಿ ನಡೆಸಿಕೊಂಡಿದ್ದು, ಬಹಳ ಅಪಮಾನ ಮಾಡಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ವಿಜಯನಗರದ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಹಳ್ಳಿ ಹಳ್ಳಿಯಲ್ಲಿ ಜಾಗೃತಿ ಮೂಡಿಸಿ ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ
ಕಲಬುರಗಿ, ಡಿಸೆಂಬರ್ 24: ಶಾಲಾ ಬಸ್ಗೆ ಮಗುವನ್ನು ಹತ್ತಿಸುವಾಗ ವಿದ್ಯುತ್ ವೈಯರ್ ತಗುಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಮೋಹನ್ ಲಾಡ್ಜ್ ಮುಂಭಾಗದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕರೆಂಟ್ ಶಾಕ್ನಿಂದ ಗಂಭೀರವಾಗಿ ಗಾಯಗೊಂಡಿರುವ ಬಾಗ್ಯಶ್ರೀ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗ್ಯಶ್ರೀ ಅವರು ಎಂದಿನಂತೆ ತಮ್ಮ
ಬೆಂಗಳೂರು, (ಡಿಸೆಂಬರ್ 24): ಶ್ವೇತಾ ಗೌಡ ವಂಚನೆ ಕೇಸ್‌ನಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ವರ್ತೂರು ಪ್ರಕಾಶ್ ವಿಚಾರಣೆ ಬಳಿಕ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ವರ್ತೂರು ಪ್ರಕಾಶ್, ಎಸಿಪಿ ಗೀತಾ ಎದುರು ವಿಚಾರಣೆ ಎದುರಿಸಿದ್ದು, ಇದೇ ವೇಳೆ
ಬೆಂಗಳೂರು: ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೋಮವಾರ ಸೂಚನೆ ನೀಡಿದರು. ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕ್ರಿಸ್‌ಮಸ್ ಹಾಗೂ
ಬೆಂಗಳೂರು: ಬಿಜೆಪಿ ನಾಯಕ ಸಿ ಟಿ ರವಿಯವರು ನನ್ನ ಬಗ್ಗೆ ಅವಾಚ್ಯ ಶಬ್ದ ಬಳಸಿಲ್ಲವೆಂದಾದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ನೋಡೋಣ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ. ಮಾಧ್ಯಮಗಳಿಗೆ ನೀಡಿದ ಸಂದರ್ಶನ ವೇಳೆ ಮಾತನಾಡಿದ ಅವರು ಹಲವು ವಿಚಾರಗಳನ್ನು ಹೇಳಿದ್ದಾರೆ.