ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಎಂದು ಮಾಹಿತಿ ತಿಳಿದು
ಮುಂಬೈ: ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾ ಠಾಕ್ರೆ ಅವರಿಗೆ ಭಾರತ ರತ್ನ ನೀಡಬೇಕು ಎಂದು ಶಿವಸೇನೆ(ಯುಬಿಟಿ) ಗುರುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ದಿವಂಗತ ಬಾಳಾ ಠಾಕ್ರೆ ಅವರ 99ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್, ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು "ಅರ್ಹರಲ್ಲದ"
ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಕನಿಷ್ಠ 13 ಪ್ರಯಾಣಿಕರು ಮೃತಪಟ್ಟ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ದುರಂತಕ್ಕೆ ಹಳಿಯ ವಕ್ರತೆಯು ಪ್ರಾಥಮಿಕವಾಗಿ ಗೋಚರತೆಯ ಮೇಲೆ ಬೀರಿದ ಪರಿಣಾಮ ಕಾರಣ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವದಂತಿ ಹಬ್ಬಿ ಲಕ್ನೋ-ಸಿಎಸ್‌ಎಂಟಿ ಪುಷ್ಪಕ್ ಎಕ್ಸ್‌ಪ್ರೆಸ್‌ನ ಪ್ರಯಾಣಿಕರು ಭೀತಿಯಿಂದ ಹಳಿ ಮೇಲೆ
ಮಲ್ಪೆ ಬೀಚ್ ನಲ್ಲಿ ದಂಪತಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಈಡಾಗಿದ್ದು ಈ ಪ್ರಕರಣದಲ್ಲಿ ಪೊಲೀಸರ ನಡೆ ಸರಿಯಾಗಿ ದೂರುದಾರ ಪರವಾಗಿ ಇಲ್ಲದಿರುವುದೇ ಇಂದಿನ ಘಟನೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಆರೋಪಿತರು ಉಡುಪಿ ಕೋರ್ಟ್ ನ ಮುಖಾಂತರ ಜಾಮೀನು ಪಡೆದು ನಿನ್ನೆ ದಿನ ರಾತ್ರಿ ದೂರು
ಹೈದರಾಬಾದ್: ಪತ್ನಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡುಗಳಾಗಿ ಮಾಡಿ, ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿ ಬಳಿಕ ಕೆರೆಗೆ ಎಸೆದ ಆರೋಪದ ಮೇಲೆ ಮಾಜಿ ಯೋಧನನ್ನು ಬಂಧಿಸಿರುವ ಘಟನೆ ಮೀರಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಜಿಲ್ಲೆಲಗುಡದಲ್ಲಿ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ಗುರುಮೂರ್ತಿ ವಿಚಾರಣೆ ವೇಳೆ ತನ್ನ ಪತ್ನಿ ಪುಟ್ಟವೆಂಕಟ ಮಾಧವಿ
ಉಡುಪಿ: ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿ ದಾಳಿ ಮಾಡಿದವರನ್ನು ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಉದ್ದೇಶಕ್ಕೆ ಪಾರ್ಲರ್ ಮೇಲೆ ದಾಳಿಯಾಗಿದೆ ಎಂಬುದು ಮಾಹಿತಿ ಇಲ್ಲ.
ಬೆಂಗಳೂರು, ಜನವರಿ 23: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ. ಸಿಟಿ ರವಿ ವಿರುದ್ಧ ಜನವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ. ಶಾಸಕರ ನಡುವೆ ಸದನದಲ್ಲಿ
ಮಂಗಳೂರು, ಜನವರಿ 23: ಅನೈತಿಕ ಚಟುವಟಿಕೆ ಆರೋಪಿಸಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ಸಂಘಟನೆಯಿಂದ ದಾಳಿ ಮಾಡಿರುವಂತಹ ಘಟನೆ ಬಿಜೈ ಕೆಎಸ್ಆರ್ ಟಿಸಿ ಬಳಿ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ನಲ್ಲಿ ನಡೆದಿದೆ. ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಲಾಗಿದೆ. ಮಸಾಜ್ ಸೆಂಟರ್ನ
ನಟ ಸುದೀಪ್ ಅವರ ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ ನಟನೆಗೆ ಸುದೀಪ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಟಿ, ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಅವರಿಗೆ 2019ನೇ ಸಾಲಿನ ‘ಅತ್ಯುತ್ತಮ
ಉಡುಪಿ: ನಗರದಲ್ಲಿ ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳು ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್ ಮಹಾಝ್ ಎಂದು ಗುರುತಿಸಲಾಗಿದೆ. ವೈದ್ಯ ವಿದ್ಯಾರ್ಥಿ ಹೆಚ್ಚಿನ M.PH ವಿಧ್ಯಾಭ್ಯಾಸನ್ನು ಯುಕೆ ಯಲ್ಲಿ