ಉಪ್ಪಿನಂಗಡಿ:ಏ.4, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ನೀರಕಟ್ಟೆಯ ಅಪಾಯಕಾರಿ ತಿರುವನ್ನು ಚಾಲಕನ ನಿಯಂತ್ರಣ
ಥೈಲ್ಯಾಂಡ್: ಥೈಲ್ಯಾಂಡ್‌ನಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರೊಂದಿಗಿನ ಪ್ರಧಾನಿ ಮೋದಿ ಅವರ ಭೇಟಿಯ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ. "ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ" ಎಂದು ವಿಕ್ರಮ್ ಮಿಸ್ರಿ ಹೇಳಿದ್ದಾರೆ. ಬಾಂಗ್ಲಾದೇಶದೊಂದಿಗೆ ಸಕಾರಾತ್ಮಕ
ಬೈಂದೂರು: ಉಡುಪಿ ಜಿಲ್ಲೆಯ ಗಂಗೊಳ್ಳಿಯ ಮಳ್ಳಿಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಟೋರಿಕ್ಷಾ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಆಟೋ ಚಾಲಕ ಬಾಬು ಪೂಜಾರಿ ಗಂಭೀರ ಗಾಯಗೊಂಡು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಂದೂರಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರ್ ಹಾಗೂ ಆಟೋ ರಿಕ್ಷಾ
ಉಡುಪಿ:ಎ.4. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಇದೇ ಎ.30 ಹಾಗೂ ಮೇ 1ರಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಆಶ್ರಯದಲ್ಲಿ ನಡೆಯಲಿರುವ 17ನೇ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ.ಪಾದೇಕಲ್ಲು ವಿಷ್ಣು ಭಟ್ಟ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ
ಚೆನ್ನೈ : ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಹಿಂದೆ ಸರಿದಿದ್ದಾರೆ. ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ಪಕ್ಷದ ಮುಂದಿನ ಬಿಜೆಪಿ ಮುಖ್ಯಸ್ಥರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗುವುದು ಮತ್ತು ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದು ಹೇಳಿದರು. ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾಮಲೈ, ನಾನು ಬಿಜೆಪಿ
ಚಂಡೀಗಢ: ಏ.04, 2 ಕೋಟಿ ಮೌಲ್ಯದ ಹೆರಾಯಿನ್ ಜೊತೆ ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್ ನ್ನು ಬಂಧಿಸಲಾಗಿದೆ. ಆಕೆಯನ್ನು ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. 17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್‌ಸ್ಟೇಬಲ್ ಅಮನ್‌ದೀಪ್ ಕೌರ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣ ಬೆನ್ನಲ್ಲೇ ಆಕೆಯನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು,
ಮಂಗಳೂರು:ಏಪ್ರಿಲ್, 4. ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ, ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಬಂದಿದೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್ನೆಟ್ ಆಧಾರಿತ
ನವದೆಹಲಿ: ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್,ರು ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ. ರಾಜಸ್ಥಾನದ ನಂತರ ಕರ್ನಾಟಕವು ದೇಶದಲ್ಲಿ ಎರಡನೇ ಅತಿದೊಡ್ಡ ಒಣಭೂಮಿ ಪ್ರದೇಶವನ್ನು ಹೊಂದಿದೆ ಎಂದು ಸಭೆಯಲ್ಲಿ ಸಿದ್ದರಾಮಯ್ಯ
ಬೆಂಗಳೂರು: ಭಾರತದ ಔಷಧ ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಅಮೆರಿಕ ಸರ್ಕಾರವು ಔಷಧ ಉತ್ಪನ್ನಗಳನ್ನು ಸುಂಕದಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ಈ ಬೆಳವಣಿಗೆಯನ್ನು ಸ್ವಾಗತಿಸಿರುವ, ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಔಷಧ ವಲಯದ ಮೇಲಿನ ಸಕಾರಾತ್ಮಕ ಪರಿಣಾಮಗಳ ಬಗ್ಗೆ ತಿಳಿಸಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಬಲವಾದ ದ್ವಿಪಕ್ಷೀಯ ಸಂಬಂಧವನ್ನು
ಬೆಂಗಳೂರು: ಸುಲಿಗೆ ಹಾಗೂ ಬೆದರಿಕೆ ಆರೋಪದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಕನ್ನಡ ಮಾಸಿಕ ಪತ್ರಿಕೆಯ ಇಬ್ಬರು ಪತ್ರಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಾಡಪ್ರಭು ಕೆಂಪೇಗೌಡ ಲೇಔಟ್ (ಎನ್‌ಪಿಕೆಎಲ್) ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸಿ ಎನ್ ಅಶೋಕ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ