ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕಾರವಾರ, ಏಪ್ರಿಲ್ 20: ದುಷ್ಕರ್ಮಿಗಳು ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನನ್ನು ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್​ಎನ್​ಎಲ್​ ಕಚೇರಿ ಬಳಿ‌ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ  ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿಯಲಾಗಿದ್ದು, ತಕ್ಷಣ ಸತೀಶ್​ರನ್ನ

ಬೆಂಗಳೂರು: ಬೀದರ್ ಮತ್ತು ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷಾ ಕೊಠಡಿಗಳಿಗೆ ಪ್ರವೇಶಿಸುವ ಮೊದಲು ವಿದ್ಯಾರ್ಥಿಗಳು ತಮ್ಮ ಜನಿವಾರ (ಪವಿತ್ರ ದಾರ) ತೆಗೆಯುವಂತೆ ಒತ್ತಾಯಿಸಲಾಗಿದೆ ಎಂಬ ವರದಿಗಳ ನಂತರ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಧಾರ್ಮಿಕ ಸಂಘಟನೆಗಳು, ರಾಜಕೀಯ ಮುಖಂಡರು ಮತ್ತು ನಾಗರಿಕ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಜನಿವಾರ

ದೀರ್ ಅಲ್-ಬಾಲಾಹ್: ಕಳೆದ 48 ಗಂಟೆಗಳಲ್ಲಿ ಗಾಜಾ ಮೇಲೆ ಇಸ್ರೇಲ್ ನಡೆಸಿರುವ ದಾಳಿಯಲ್ಲಿ ಮಕ್ಕಳು ಸೇರಿದಂತೆ 90 ಕ್ಕೂ ಹೆಚ್ಚು ಮಂದಿ ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ, ಮಾನವೀಯ ವಲಯ ಎಂದು ಗುರುತಿಸಿದ ಸ್ಥಳದಲ್ಲಿ ಆಶ್ರಯ ಪಡೆದಿದ್ದ ಮಕ್ಕಳು, ಮಹಿಳೆಯರು ಸೇರಿದಂತೆ 15 ಮಂದಿ ಒಂದೇ

ಲಕ್ನೋ:ಏ.19. ನೇಪಾಳದ ಪೊಖಾರಾಕ್ಕೆ ಭಾರತೀಯ ಪ್ರವಾಸಿಗರನ್ನು ಕೊಂಡೊಯ್ಯುತ್ತಿದ್ದ ಬಸ್ ಒಂದು ಡಾಂಗ್ ಜಿಲ್ಲೆಯ ಚಿಸಾಪಾನಿಯಲ್ಲಿ ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ 25 ಜನ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.ಪ್ರಾಥಮಿಕ ತನಿಖೆಯ ಪ್ರಕಾರ, ಬಸ್‌ನ ಬ್ರೇಕ್ ವಿಫಲವಾದ ಕಾರಣ ಚಾಲಕ ಗೋಡೆಗೆ ಡಿಕ್ಕಿ ಹೊಡೆದಿದ್ದಾನೆ. ಗಾಯಗೊಂಡ 25 ಪ್ರವಾಸಿಗರಲ್ಲಿ 19 ಜನರನ್ನು ಉತ್ತರ

ಮುಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದ ಘಟನೆ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ಇದರಿಂದ ಒಬ್ಬರು ಅರ್ಚಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2.00

ನವದೆಹಲಿ, ಏಪ್ರಿಲ್ 19: ಕೆನಡಾದಲ್ಲಿ ನಡೆದ ಗುಂಡಿನ ದಾಳಿಯೊಂದರಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಅಪರಿಚಿತರ ನಡುವೆ ನಡೆದ ಗುಂಡಿನ ದಾಳಿಯ ವೇಳೆ ಅಕಸ್ಮಾತಾಗಿ ಗುಂಡು ತಗುಲಿ, ಭಾರತೀಯ ವಿದ್ಯಾರ್ಥಿನಿ ಹರ್​ಸಿಮ್ರತ್ ರಾಂಧಾವಾ ಅನ್ಯಾಯವಾಗಿ ಮೃತಪಟ್ಟಿದ್ದಾರೆ. ಒಂಟೋರಿಯೋದ ಹ್ಯಾಮಿಲ್ಟನ್​​ನಲ್ಲಿರುವ ಮೊಹಾಕ್ ಕಾಲೇಜಿನಲ್ಲಿ ಅಧ್ಯಯನ ನಡೆಸುತ್ತಿದ್ದ ಹರ್​ಸಿಮ್ರತ್ ರಾಂಧಾವಾ ಬಸ್ಸು

ರಾಮನಗರ: ಭೂಗತ ಲೋಕದ ಮಾಜಿ ಡಾನ್‌ ಮುತ್ತಪ್ಪ ರೈ ಅವರ ಪುತ್ರ 35 ವರ್ಷದ ರಿಕ್ಕಿ ರೈ ಮೇಲೆ ತಾಲ್ಲೂಕಿನ ಬಿಡದಿ ಹೋಬಳಿಯ ಕರಿಯಪ್ಪನದೊಡ್ಡಿಯಲ್ಲಿ ರಾತ್ರಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಬಿಡದಿ ಪೊಲೀಸ್ ಠಾಣೆಯಲ್ಲಿ ಶನಿವಾರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಿಕ್ಕಿ ಅವರ ಕಾರು ಚಾಲಕ ಜಿ. ಬಸವರಾಜು

ಬೆಂಗಳೂರು: ಪಿಯುಸಿ ಪರೀಕ್ಷೆ ಬೆನ್ನಲ್ಲೇ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿದ್ದು, ಕೊನೆಯ ದಿನವಾದ ಗುರುವಾರ ಶಿವಮೊಗ್ಗ ಮತ್ತು ಬೀದರ್​ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ ತೆಗೆದುಹಾಕುವಂತೆ ಅಧಿಕಾರಿಗಳು ಸೂಚನೆ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಬೀದರ್​​ನ ಸಾಯಿ ಸ್ಫೂರ್ತಿ ಪರೀಕ್ಷಾ

ನವದೆಹಲಿ: ವಕ್ಫ್ ಕಾಯ್ದೆಯ ಪ್ರಮುಖ ನಿಬಂಧನೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ ತೀರ್ಪನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಸ್ವಾಗತಿಸಿದ್ದು, ಸಂವಿಧಾನಬಾಹಿರ ಶಾಸನದ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಾದಿಸಿವೆ. ಸುಪ್ರೀಂ ಕೋರ್ಟ್‌ನ ಅವಲೋಕನಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ವಕ್ಫ್ ತಿದ್ದುಪಡಿ ಕಾಯ್ದೆಯು ಕೇವಲ 'ಕಾನೂನುಬದ್ಧವಾಗಿ ದೋಷಪೂರಿತವಲ್ಲ, ಬದಲಾಗಿ ನೈತಿಕವಾಗಿ ಶೂನ್ಯವಾಗಿದೆ

ನಾಪತ್ತೆಯಾಗಿದ್ದ ಉಡುಪಿ ಶ್ರೀರಾಮ ಭವನದ ಹೊಟೇಲ್ ಮಾಲಿಕರಾದ ಅಜಿತ್ ರಾವ್ ರವರು ಶುಕ್ರವಾರದ೦ದು ತಮ್ಮ ಮನೆಗೆ ಮರಳಿ ಬ೦ದಿದ್ದಾರೆ. ನಾಪತ್ತೆಯಾಗಲು ಕಾರಣವೇನೆ೦ದು ಇನ್ನೂ ತಿಳಿದು ಬ೦ದಿಲ್ಲ. ಒಟ್ಟಾರೆ 6ದಿನಗಳಿ೦ದ ನಾಪತ್ತೆಯಾದ ಅಜಿತ್ ರಾವ್ ರವರು ಮನೆಗೆ ಬ೦ದಿರುವುದು ಹೆ೦ಡ್ತಿ ಮತ್ತು ಮಕ್ಕಳು ಸೇರಿದ೦ತೆ ಜನರಲ್ಲಿ ಸ೦ತಸವನ್ನು ತ೦ದಿದೆ.