ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ಕ್ಷುಲ್ಲಕ ಕಾರಣಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ವೃದ್ಧೆಯನ್ನು ಆಕೆಯ ಮನೆಯಿಂದ ಹೊರಗೆ ಎಳೆದುಕೊಂಡು ಹೋಗಿ, ಕಂಬಕ್ಕೆ ಕಟ್ಟಿ ನೆರೆಹೊರೆಯವರು ಕ್ರೂರವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜೂನ್ 24
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ 19ನೇ ವಾರ್ಡ್ ಸದಸ್ಯೆ ಜ್ಯೋತಿ ಪಾಟೀಲ್ ಆಯ್ಕೆಯಾಗಿದ್ದರೆ 49ನೇ ವಾರ್ಡ್ ಸದಸ್ಯ ಸಂತೋಷ ಚವ್ಹಾಣ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದಿನ
ಬ್ರಹ್ಮಾವರ: ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಎಂಬಲ್ಲಿ ದನದ ತಲೆ ಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಅವರು ಮಾಹಿತಿ ನೀಡಿದರು. ರಾಮ(49),
ಚಿಕ್ಕಬಳ್ಳಾಪುರ: ಜೂನ್ 30: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ಭೀಕರ ಟಿಟಿ ವಾಹನ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಪರಿಣಾಮ ಕರ್ನಾಟಕದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಮೃತರು. 8 ಜನರಿಗೆ ಗಾಯಗಳಾಗಿವೆ. ಮೃತರನ್ನು ಜಿಲ್ಲೆಯ
ನ್ಯೂಜೆರ್ಸಿ: ಮದುವೆಗಾಗಿ ಅಮೆರಿಕಕ್ಕೆ ಆಗಮಿಸಿದ್ದ 24 ವರ್ಷದ ಭಾರತೀಯ ಯುವತಿಯೊಬ್ಬಳು ನಾಪತ್ತೆಯಾಗಿರುವುದಾಗಿ ನ್ಯೂಜೆರ್ಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ಆರಂಭಿಸಿ, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಯುವತಿ ಸಿಮ್ರಾನ್ ಎಂದು ಗುರುತಿಸಲಾಗಿದೆ. ಆಕೆ ಬುಧವಾರ ನಾಪತ್ತೆಯಾಗುವ ಮುನ್ನಾ ಯಾರಿಗೂ ಕಾಯುತ್ತಿರುವುದು ಹಾಗೂ ತನ್ನ ಫೋನ್ ಅನ್ನು ಪರಿಶೀಲಿಸುತ್ತಿರುವುದು ಕಂಡುಬಂದಿದೆ ಎಂದು
ಪುರಿ: ಒಡಿಶಾದ ಜಗದ್ವಿಖ್ಯಾತ ಪುರಿ ಜಗನ್ನಾಥ ದೇಗುಲದ ಐತಿಹಾಸಿಕ ರಥಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜಗನ್ನಾಥ,
ಉಡುಪಿ:ಉಡುಪಿಯ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥದ ನಿರ್ಮಾಣಕ್ಕೆ ಭಾನುವಾರದ೦ದು ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಮ೦ತ್ರಾಲಯದ ಶ್ರೀರಾಘವೇ೦ದ್ರ ಮಠದ ಶ್ರೀಸುಬುಧೇ೦ದ್ರ ತೀರ್ಥಶ್ರೀಪಾದರು ಅದ್ದೂರಿಯ ಚಾಲನೆಯನ್ನು ನೀಡಿದರು. ಪರ್ಯಾಯ ಶ್ರೀಪುತ್ತಿಗೆಮಠದ ಶ್ರೀಸುಗುಣೇ೦ದ್ರ ತೀರ್ಥ ಶ್ರೀಪಾದರು ತಮ್ಮ ಚತುರ್ಥ ಪರ್ಯಾಯದಲ್ಲಿ ಲೋಕಕಲ್ಯಾಣರ್ಥವಾಗಿ,ತಮ್ಮ ಸನ್ಯಾಸ ಸುವರ್ಣಮಹೋತ್ಸವದ ಪ್ರಯುಕ್ತ ಶ್ರೀಕೃಷ್ಣದೇವರಿಗೆ ಸಮರ್ಪಿಸಲು ಸ೦ಕಲ್ಪಿಸುವ ಪಾರ್ಥಸಾರಥಿ ರಥ ಇದಾಗಿದೆ. ಕಾರ್ಯಕ್ರಮದ ಆರ೦ಭದಲ್ಲಿ
ಬೆಂಗಳೂರು: ಮಂಗಳೂರು ನಗರದ ಕುಡುಪುವಿನಲ್ಲಿ 2025ರ ಏಪ್ರಿಲ್ 27ರಂದು ನಡೆದಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರರ ತಂಡವು ನಡೆಸಿದ ಸತ್ಯಶೋಧನಾ ವರದಿಯನ್ನು ಶನಿವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗಿದ್ದು, ವರದಿಯಲ್ಲಿ ನಿಷ್ಪಕ್ಷಪಾತ ತನಿಖೆಯಲ್ಲಿ ಸರ್ಕಾರ ವಿಫಲ ಎಂದು ತಿಳಿಸಲಾಗಿದೆ. ‘ಮಂಗಳೂರು ಗುಂಪು ಹತ್ಯೆ
ಗಾಜಾ ನಗರದ ಅಲ್-ತುಫಾ ನೆರೆಹೊರೆಯಲ್ಲಿ ಜನನಿಬಿಡ ವಸತಿ ಕಟ್ಟಡದ ಮೇಲೆ ಇಸ್ರೇಲ್ ನಿನ್ನೆ ಶನಿವಾರ ನಡೆಸಿದ ಬಾಂಬ್ ದಾಳಿಯಲ್ಲಿ ಒಂಬತ್ತು ಮಕ್ಕಳು ಸೇರಿದಂತೆ ಕನಿಷ್ಠ 20 ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಗಾಜಾದ ಆರೋಗ್ಯ ಸಚಿವಾಲಯದ ಪ್ರಕಾರ, ಶನಿವಾರ ಗಾಜಾದಾದ್ಯಂತ ವಿವಿಧ ದಾಳಿಗಳಲ್ಲಿ ಕನಿಷ್ಠ 81 ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ. ಇದರಲ್ಲಿ ಅಮೆರಿಕ ಬೆಂಬಲಿತ
ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ಒಂಬತ್ತು ರಸ್ತೆ ನಿರ್ಮಾಣ ಕಾರ್ಮಿಕರು ಕೊಚ್ಚಿಹೋಗಿರುವ ಶಂಕೆಯಿದೆ. ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಬಾರ್ಕೋಟ್ ಪ್ರದೇಶದ ಸಿಲೈ ಬೆಂಡ್ ಬಳಿ ಭಾರೀ ಮಳೆ ಮತ್ತು ಮೇಘಸ್ಫೋಟದ ಪರಿಣಾಮವಾಗಿ ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ಉತ್ತರಕಾಶಿಯ ವಿಪತ್ತು