ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) 'ಸ್ಪಾಟ್ ಸಂಖ್ಯೆ 13'ರಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್(ಜಿಪಿಆರ್) ತಂತ್ರಜ್ಞಾನ ಬಳಸಿ ತೀವ್ರ ಶೋಧ ನಡೆಸುತ್ತಿದೆ. ಮೂಲಗಳ ಪ್ರಕಾರ, ಸ್ಥಳವನ್ನು ಸ್ಕ್ಯಾನ್ ಮಾಡಲು ಮತ್ತು ಭೂಮಿಯಲ್ಲಿ ಹೂತುಹೋಗಿರುವ ಯಾವುದೇ ವಸ್ತುಗಳನ್ನು ಪತ್ತೆಹಚ್ಚಲು

ಮಣಿಪಾಲ:ನಗರದಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿಕೊಂಡು, ಕರ್ಕಶ ಶಬ್ಧ ಮಾಡಿಕೊಂಡು ಹೋಗುತ್ತಿದ್ದ ಕಾರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅತೀ ವೇಗ ಹಾಗೂ ನಿರ್ಲಕ್ಷ್ಯತನದಿಂದ ಕಾರನ್ನು ಚಲಾಯಿಸಿಕೊಂಡು ಬಂದ ಕೇರಳದ ಕಣ್ಣೂರು ನಿವಾಸಿ ಶೋಹೈಲ್ ನೀಲಾಕತ್(26)ನನ್ನು ವಶಕ್ಕೆ ಪಡೆಯಲಾಗಿದೆ. ಚಾಲಕ ಉಡುಪಿ ಕಡೆಯಿಂದ

ಉಡುಪಿ: ಬೈಂದೂರು ಮತ್ತು ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ 2024 ರಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಬ್ಬರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಬೈಂದೂರು ಪೊಲೀಸ್ ಪ್ರಕರಣದಲ್ಲಿ ಬೈಂದೂರಿನ ಗಂಗನಾಡು ಮೂಲದ ರಾಘವೇಂದ್ರ ಗೊಂಡ (35) ಮತ್ತು

ಉಡುಪಿ:ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಸ೦ಬ೦ಧಿಸಿದ ಸಗ್ರಿಯಲ್ಲಿರುವ ಪಿಲಿಚಾಮು೦ಡಿ ಹಾಗೂ ಇತರ ಪರಿವಾರ ದೈವಗಳ ಗುಡಿಯ ಜೀರ್ಣೋದ್ಧಾರದ ಬಗ್ಗೆ ಗ್ರಾಮಸಭೆಯನ್ನು ಭಾನುವಾರದ೦ದು ಕಡಿಯಾಳಿ ದೇವಸ್ಥಾನದ ಶರ್ವಾಣಿ ಮ೦ಟಪದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ ವಿಜಯರಾಘರಾವ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಸ೦ದರ್ಭದಲ್ಲಿ ಕಾರ್ಯಕಾರಿಣಿ ಸಮಿತಿ ಪಟ್ಟಿಯನ್ನು ಪ್ರಕಟಿಸಲಾಯಿತು. ಗೌರವಾಧ್ಯಕ್ಷರುಗಳಾಗಿ ಯಶ್ಪಾಲ್ ಸುವರ್ಣ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ನಾಗರಹೊಳೆಯ ವೀರನಹೊಸಳ್ಳಿಯಿಂದ ಗಜಪಯಣದ ಮೂಲಕ ಆಗಮಿಸಿದ್ದ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಭಾನುವಾರ ಅರಮನೆ ಆವರಣದಲ್ಲಿ ವಿಧ್ಯುಕ್ತವಾಗಿ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆ.4ರಂದು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ್ದ ಗಜಪಡೆ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿದ್ದವು. ಭಾನುವಾರ ಮಧ್ಯಾಹ್ನ ಆನೆಗಳಿಗೆ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯು ತನ್ನ ಪೋಷಕರು ವಿವಾಹಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ, ಇದನ್ನು ತಪ್ಪಿಸಿ ಎಂದು ತಾನೇ ಖುದ್ದಾಗಿ ಪೊಲೀಸ್‌ ಸ್ಟೇಷನ್‌ಗೆ ಆಗಮಿಸಿ ದೂರು ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಹೆಂಡತಿ ಕಳೆದುಕೊಂಡ ವ್ಯಕ್ತಿಯೊಬ್ಬನಿಗೆ ಎರಡನೇ ಮದುವೆ ಮಾಡಲು ಹೊರಟಿದ್ದ ಪೋಷಕರಿಂದ ಬಾಲಕಿಯನ್ನು ರಕ್ಷಿಸಲಾಗಿದೆ. 'ನನಗೆ ವಯಸ್ಸಿನ್ನು ಹದಿನಾರು. 8

ಬೆಂಗಳೂರು: ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದ್ದು, ಈ ನಡುವಲ್ಲೇ ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪ್ರತಿಭಟನೆ ನಡೆಸುತ್ತಿವೆ. ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಎನ್‌ಡಿಎ ಮೈತ್ರಿಕೂಟದ ಶಾಸಕರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್‌ ಸರ್ಕಾರದ ಬೇಜವಾಬ್ದಾರಿತನದಿಂದ 11 ಜನ

ನವದೆಹಲಿ: ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡು ಚುನಾವಣಾ ದುಷ್ಕೃತ್ಯಗಳನ್ನು ನಡೆಸುತ್ತಿದೆ ಎಂದು ಆರೋಪಿಸಿ ಇಂಡಿಯಾ ಮೈತ್ರಿಕೂಟದ ಸಂಸದರು ಸೋಮವಾರ (ಆಗಸ್ಟ್ 11) ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದು, ಈ ವೇಳೆ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಬಳಿ ಭಾರೀ ಹೈಡ್ರಾಮಾ ನಡೆದಿದೆ. ಲೋಕಸಭೆ ವಿರೋದ ಪಕ್ಷದ ನಾಯಕ ರಾಹುಲ್ ಗಾಂಧಿ

ಬೆಂಗಳೂರು: ರಾಜ್ಯ ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್‌.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ. ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೋದಿಯವರು, ಇದೇ ಮೆಟ್ರೋ ರೈಲಿನಲ್ಲಿ ಎಲೆಕ್ಟ್ರಾನಿಕ್

ಉಡುಪಿ:ನ೦ಜನಗೂಡು ಶ್ರೀರಾಘವೇ೦ದ್ರಸ್ವಾಮಿಗಳವರ ಮಠ ರಥಬೀದಿ ಉಡುಪಿಯಲ್ಲಿ ಭಾನುವಾರದಿ೦ದ ಶ್ರೀರಾಘವೇ೦ದ್ರಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವವು ಆರ೦ಭಗೊ೦ಡಿದ್ದು ಸಾವಿರಾರು ಮ೦ದಿ ಇ೦ದು ದರ್ಶನಪಡೆದು ಪುನೀತರಾದರು. ಸೋಮವಾರದ೦ದು ಪರ್ಯಾಯ ಪುತ್ತಿಗೆ ಶ್ರೀಯತಿಗಳಿಬ್ಬರ ಉಪಸ್ಥಿತಿಯಲ್ಲಿ ವಿಶೇಷ ಪೂಜೆಯೊ೦ದಿಗೆ ಭಕ್ತರಿಗೆ ಚಿರೊಟ್ಟಿ-ಹಾಲುಪಾಯಸ ಮಹಾಅನ್ನಸ೦ತರ್ಪಣೆಯು ನಡೆಯಲಿದೆ.