ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಶತಮಾನೋತ್ಸವ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಇಂದು ರೂ.100 ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ. 100 ರೂಪಾಯಿ ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನ, ಇನ್ನೊಂದು ಬದಿಯಲ್ಲಿ ಸಿಂಹ, ಅಭಯ ಮುದ್ರೆಯಲ್ಲಿರುವ ಭಾರತ ಮಾತೆಯ ಚಿತ್ರ ಮತ್ತು ಸ್ವಯಂಸೇವಕರು

ಮಿರ್ಜಾಪುರ: ಪ್ರಸಿದ್ಧ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ಅವರು ಗುರುವಾರ ವಿಧಿವಶರಾಗಿದ್ದಾರೆ. ಪಂಡಿತ್ ಛನ್ನುಲಾಲ್ ಮಿಶ್ರಾ ಅವರಿಗೆ 89 ವರ್ಷದ ವಯಸ್ಸಾಗಿದ್ದು, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಹಲವು ತಿಂಗಳುಗಳಿಂದ ವೈದ್ಯಕೀಯ ಆರೈಕೆಯಲ್ಲಿದ್ದರು. ಇಂದು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ವಿಧಿವಶರಾಗಿದ್ದಾರೆ. ನಿಧನ ಸುದ್ದಿಯನ್ನು ಪುತ್ರಿ ನಮ್ರತಾ ಮಿಶ್ರಾ

ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾದ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಂಜೆ 4.42ರಿಂದ 5.06 ವರೆಗಿನ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ, ಚಿನ್ನದ ಅಂಬಾರಿಯಲ್ಲಿ ಆಸೀನಳಾಗಿರುವ ಚಾಮುಂಡೇಶ್ವರಿ ತಾಯಿಗೆ ಸಿಎಂ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಆರಂಭಗೊಂಡಿದೆ. ಜಂಬೂ ಸವಾರಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ

ಉಡುಪಿ:ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ದೇವರ ಸನ್ನಿಧಿಯಲ್ಲಿ ನವರಾತ್ರಿಯ ದಶಮಿ ದಿನವಾದ ಗುರುವಾರದ೦ದು ಚಂಡಿಕಾ ಯಾಗ ನಡೆಯಿತು. ಅರ್ಚಕರಾದ ಕೃಷ್ಣಾನಂದ ಭಟ್ ಮಣಿಪಾಲ್ , ಶರತ್ ಭಟ್ ಮಲ್ಪೆ ಧಾರ್ಮಿಕ ಪೂಜಾ ವಿಧಿಗಳನ್ನು ನಡೆಸಿ ಕೊಟ್ಟರು. ದೇವಳದ ಅರ್ಚಕರಾದ ದೀಪಕ್ ಭಟ್ , ದಯಾಘನ್ ಭಟ್ , ವಿನಾಯಕ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ವಿಜಯದಶಮಿ ಜಂಬೂ ಸವಾರಿಯೊಂದಿಗೆ ನವರಾತ್ರಿ ಹಬ್ಬ ಮುಕ್ತಾಯವಾಗುತ್ತಿದೆ.  ಈ ವರ್ಷ 11 ದಿನ ದಸರಾ ಆಚರಣೆ ಕಂಡಿದೆ. ಇಷ್ಟು ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅರಮನೆಯಲ್ಲಿ ಖಾಸಗಿ ದರ್ಬಾರ ನಡೆಯಿತು. ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ

ಮೈಸೂರು: ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು. ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಾಪು ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ

ಸಿಡೋರ್ಜೊ: ಇಸ್ಲಾಮಿಕ್ ಶಾಲಾ ಕಟ್ಟಡ ಕುಸಿದು ಎರಡು ದಿನಗಳ ನಂತರ ಕನಿಷ್ಠ 91 ವಿದ್ಯಾರ್ಥಿಗಳು ಕಾಂಕ್ರೀಟ್ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಯಲ್ಲಿ ಮಕ್ಕಳ ಹಾಜರಾತಿ ದಾಖಲೆಗಳು ಮತ್ತು ಕಾಣೆಯಾದವರ ಆತಂಕಗೊಂಡ ಕುಟುಂಬಗಳ ವರದಿಗಳನ್ನು ಪರಿಶೀಲಿಸಿದ ನಂತರ ಅಧಿಕಾರಿಗಳು ಈ ಸಂಖ್ಯೆಯನ್ನು ತಿಳಿಸಿದ್ದಾರೆ. ಪೂರ್ವ ಜಾವಾ ಪ್ರಾಂತ್ಯದ ಶತಮಾನಗಳಷ್ಟು ಹಳೆಯದಾದ

ಮನಿಲಾ: ಮಧ್ಯ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದ 6.9 ತೀವ್ರತೆಯ ಭೂಕಂಪವು ಬೊಗೊ ನಗರ ಮತ್ತು ಸೆಬು ಪ್ರಾಂತ್ಯದ ಹೊರವಲಯದ ಗ್ರಾಮೀಣ ಪಟ್ಟಣಗಳಲ್ಲಿ ಕುಸಿದ ಮನೆಗಳು, ನೈಟ್‌ಕ್ಲಬ್‌ಗಳು ಮತ್ತು ನೂರಾರು ನಿವಾಸಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇಂದು ರಕ್ಷಣಾ

ನವದೆಹಲಿ:ಅ. 01. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 15.50 ರೂ. ಏರಿಕೆ ಮಾಡುವ ಮೂಲಕ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ ಏರಿಕೆಯ ಶಾಕ್ ಕೊಟ್ಟಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಮಾರುಕಟ್ಟೆ ಕಂಪನಿಗಳು ಹೊಸ ಪರಿಷ್ಕರಣೆಯನ್ನು ಘೋಷಿಸಿದ್ದು, ಇಂದಿನಿಂದಲೇ ಈ ದರ ಜಾರಿಗೆ

ಭೋಪಾಲ್: ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ಫೇಲ್ ಆಗಿ ಸಾವನ್ನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಬೆಚ್ಚಿಬೀಳಿಸುವ ಹೃದಯ ವಿದ್ರಾವಕ ದುರಂತ ಸಂಭವಿಸಿದ್ದು, ಕಳೆದ 15 ದಿನಗಳಲ್ಲಿ ಆರು ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಆರಂಭದಲ್ಲಿ ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ