ಉಡುಪಿ: ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರೊಂದು ಕಟಪಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಅಗ್ನಿಶಾಮಕ ದಳದವರು ನಿರಂತರ ನೀರು ಹಾಯಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿರಿಸಿದ್ದಾರೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಕಟಪಾಡಿ
ಚಿತ್ರದುರ್ಗ: ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ಅಫಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್‌ಪೆಕ್ಟರ್‌ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು
ಭುವನೇಶ್ವರ: ಒಡಿಶಾದಲ್ಲಿ ಸಂಭವಿಸಿದ ಸುಂಟರಗಾಳಿ ಭಾರಿ ಅನಾಹುತ ಸೃಷ್ಟಿಸಿದ್ದು, ಸುಂಟರಗಾಳಿ ರುದ್ರನರ್ತನಕ್ಕೆ ಓರ್ವ ಸಾವನ್ನಪ್ಪಿದ್ದರೆ, ಬರೊಬ್ಬರಿ 70 ಮನೆಗಳು ಧ್ವಂಸಗೊಂಡಿವೆ ಎಂದು ಹೇಳಲಾಗಿದೆ. ಭಾನುವಾರ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ಬೀಸಿದ ಪ್ರಬಲವಾದ ನಾರ್ವೆಸ್ಟರ್ ಸುಂಟರಗಾಳಿಯು ವ್ಯಾಪಕ ನಷ್ಟವನ್ನುಂಟುಮಾಡಿದ್ದು, ಸುಮಾರು 70 ಮನೆಗಳಿಗೆ ಹಾನಿಯಾಗಿದೆ. ಅಂತೆಯೇ ಹಲವಾರು ಜನರು ಗಾಯಗೊಂಡಿದ್ದಾರೆ. ಆರಂಭಿಕ ವರದಿಗಳ ಪ್ರಕಾರ,
ಕಟಕ್: ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 10 ಮಂದಿ ರೋಗಿಗಳು ಮೃತಪಟ್ಟಿರುವ ದುರ್ಘಟನೆ ಸೋಮವಾರ ಮುಂಜಾನೆ ನಡೆದಿದೆ. ಈ ಘಟನೆ ಕಟಕ್ ನಗರದಲ್ಲಿರುವ ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು ವಿಭಾಗದಲ್ಲಿ ಸಂಭವಿಸಿದೆ. ಸೋಮವಾರ ಮುಂಜಾನೆ ಸುಮಾರು 2.59 ಗಂಟೆ ವೇಳೆಗೆ ಐಸಿಯುವಿನಲ್ಲಿ
ಧಾರವಾಡ: ವಿದ್ಯಾಕಾಶಿ ಧಾರವಾಡಲ್ಲಿ ಶನಿವಾರ ಆಲಿಕಲ್ಲು ಸಹಿತ ಭಾರಿ ಮಳೆ ಆಗಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ್ದ ಜನತೆಗೆ ವರುಣ ತಂಪೆರೆದಿದೆ. ಧಾರವಾಡದ ವಿವಿಧ ಭಾಗಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಈ ಮಳೆ ಬಿಸಿಲ ಬೇಗೆಯಿಂದ ಹೈರಾಣಾಗಿದ್ದ ಜನತೆಗೆ ತುಸು ಸಮಾಧಾನ ತಂದಿದೆ. ಆದರೆ ಗಾಳಿ ಜೋರಾಗಿ ಬೀಸುತ್ತಿರುವುದರಿಂದ
ಉಡುಪಿ:ಉಡುಪಿಯ ರಾಷ್ಟ್ರೀಯ ಹೆದ್ದಾರಿ 169A ಇಲ್ಲಿ ಇರುವ ಜಯಲಕ್ಷ್ಮಿ ಸಿಲ್ಕ್ ಇದರ ಎದುರುಗಡೆ ಇರುವ ದಿವೈಡರನ್ನು ಅಗಲಗೊಳಿಸಿ ಎಲೆಕ್ಟ್ರಿಕ್ ಕಂಬಗಳನ್ನು ಬೇರ್ಪಡಿಸಲು ಕಾರಣವೇನು.ಇದಕ್ಕೆ ಯಾರ ಕುಮ್ಮಕ್ಕು ಇತ್ತು. ಹಾಗೂ 169A ರಾಷ್ಟ್ರೀಯ ಹೆದ್ದಾರಿ ಬನ್ನಂಜೆ ಮತ್ತು ಸಿರಿಬೀಡು ವ್ಯಾಪ್ತಿಯಲ್ಲಿ ನಾರಾಯಣ ಗುರು ಮಂದಿರದ ಎದುರು ದೊಡ್ಡ ವಾಣಿಜ್ಯ ಸಂಕೀರ್ಣ
ಹೊಸಬೆಟ್ಟು ಪ್ರದೇಶದ ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಕದ್ದ ವಸ್ತುಗಳನ್ನು ಮತ್ತು ಅಪರಾಧಕ್ಕೆ ಬಳಸಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ರಾಜಸ್ಥಾನದ ಜೋಧಪುರದ ನಿವಾಸಿ ಮುಖೇಶ್ ದಾಸ್ (46) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಬೆಂಗಳೂರಿನ ಬನಶಂಕರಿಯ ಶ್ರೀನಿವಾಸ ನಗರದಲ್ಲಿ ವಾಸಿಸುತ್ತಿದ್ದಾನೆ. ಪೊಲೀಸರ
ಇರಾನ್‌ನ ಹೊಸ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡ ನಂತರ ಜಗತ್ತಿಗೆ ಮೊದಲ ಸಂದೇಶ ರವಾನಿಸಿರುವ ಮೊಜ್ತಬಾ ಖಮೇನಿ, ಅಮೆರಿಕ ಮತ್ತು ಇಸ್ರೇಲ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಾಳಿಗಳಲ್ಲಿ ಮೃತಪಟ್ಟ ಇರಾನಿಯನ್ನರ ಪ್ರತಿ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತದೆ. ಅಗತ್ಯವಿದ್ದರೆ ಸಂಘರ್ಷ ಹೊಸ ಮಜಲುಗಳನ್ನು ಪಡೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಇರಾನ್
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದ್ದು, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್