.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮಣಿಪಾಲ:ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ನಿಷೇಧಿತ ಹುಕ್ಕಾ ಸೇವನೆ ಮಾಡುತ್ತಿದ್ದ 8 ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ವಿದ್ಯಾರತ್ನ ನಗರದ ಡಿಸಿ ಆಫೀಸ್ ರಸ್ತೆಯಲ್ಲಿರುವ ಕಟ್ಟಡದ ಮೊದಲ ಮಹಡಿಯಲ್ಲಿರುವ ಕೆಫೆಯಲ್ಲಿ ಅಕ್ರಮವಾಗಿ ಹುಕ್ಕಾ ನೀಡಲಾಗುತ್ತಿದೆ ಎಂಬ ಖಚಿತ

ಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಶುಕ್ರವಾರ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಹೊರಟ್ಟಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. 75 ಸದಸ್ಯ ಬಲದ ಕರ್ನಾಟಕ

ಚೆನ್ನೈ: ತಮಿಳಿಗ ವೆಟ್ರಿ ಕಳಗಂ(TVK) ಪಕ್ಷದ ಸಂಸ್ಥಾಪಕ ಹಾಗೂ ತಮಿಳುನಾಡು ಮುಖ್ಯಮಂತ್ರಿ​ ದಳಪತಿ ವಿಜಯ್​ ದಾಂಪತ್ಯ ದೊಡ್ಡ ತಿರುವು ಪಡೆದುಕೊಂಡಿದ್ದು, ನಟನ ಪತ್ನಿ ಸಂಗೀತಾ ಅವರು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನಕ್ಕೆ ಅರ್ಜಿಯನ್ನು ಹಿಂಪಡೆದಿದ್ದಾರೆ. ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಸಂಗೀತಾ ಅವರು ಇಂದು ಹಿಂತೆಗೆದುಕೊಂಡಿದ್ದು,

ನವದೆಹಲಿ: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮೂವರು ವಿಷಯ ತಜ್ಞರ ಕೈವಾಡದ ಕುರಿತು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ. ಸಿಬಿಐ ಸಲ್ಲಿಸಿರುವ ಆರೋಪಪಟ್ಟಿ ಪ್ರಕಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮೂವರು ವಿಷಯ ತಜ್ಞರಾದ ರಸಾಯನಶಾಸ್ತ್ರದ ಪಿ.ವಿ. ಕುಲಕರ್ಣಿ, ಭೌತಶಾಸ್ತ್ರದ ಮನೀಷಾ

ಉಡುಪಿ:ಆ.7, ಶಿರ್ವ ಸಮೀಪದ ಮುದರ೦ಗಡಿಯಲ್ಲಿ ಖ್ಯಾತ ಉದ್ಯಮಿ, ಮುಖಂಡ ಡೇವಿಡ್ ಡಿ'ಸೋಜಾ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ಶುಕ್ರವಾರ ನಡೆದಿದೆ. ಶಿರ್ವಾ ಪ್ರದೇಶದ ಖ್ಯಾತ ಉದ್ಯಮಿ ಡೇವಿಡ್ ಡಿ'ಸೋಜಾ ಅವರು ಯಶಸ್ವಿ ಅರ್ಥ್ಮೂವರ್ಸ್ ಸೇರಿದಂತೆ ಹಲವು ವ್ಯವಹಾರಗಳನ್ನು ನಡೆಸುತ್ತಿದ್ದು, ಸ್ಥಳೀಯವಾಗಿ

ಬ್ಯಾಂಕಾಕ್: ಥಾಯ್ಲೆಂಡ್‌ನಲ್ಲಿ ಮಂಗಳವಾರ ನಡೆದ ಸ್ಥಳೀಯ ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು 24 ವರ್ಷದ ಆಟಗಾರ ಸೋಫ್ವಾನ್ ಅವಾಯೆ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ದಕ್ಷಿಣ ಥಾಯ್ಲೆಂಡ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಸಿಡಿಲು ಬಡಿದ ಪರಿಣಾಮ ಇತರ 12 ಆಟಗಾರರೂ ಗಾಯಗೊಂಡಿದ್ದಾರೆ. ಘಟನೆಯಿಂದ ಮೈದಾನದಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಮಳೆಯ ನಡುವೆಯೇ ಆಟಗಾರರು

ಮಂಗಳೂರು:ಆಗಸ್ಟ್ 06, ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್‌ ಡಾ.ವಹೀದಾ ಸುಲ್ತಾನಾ (70) ನಿಧನರಾಗಿದ್ದಾರೆ. ಮೈಸೂರು ಕಲ್ಯಾಣಗಿರಿ ನಿವಾಸಿಯಾಗಿರುವ ಡಾ.ವಹೀದಾ ಸುಲ್ತಾನಾ ಅವರಿಗೆ ಇಂದು (ಆಗಸ್ಟ್ 06) ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಸುಮಾರು 3 ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ

ಮುಂಬೈ: 2013ರ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ‘ತೆಹೆಲ್ಕಾ’ ನಿಯತಕಾಲಿಕೆಯ ಮಾಜಿ ಮುಖ್ಯ ಸಂಪಾದಕ ತರುಣ್ ತೇಜಪಾಲ್ ಅವರಿಗೆ ಬಾಂಬೆ ಹೈಕೋರ್ಟ್‌ ಗುರುವಾರ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್‌ನ ಗೋವಾ ಪೀಠ, 2021ರಲ್ಲಿ ಕೆಳ

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್ ತಾಲ್ಲೂಕಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಕಂಠಪೂರ್ತಿ ಕುಡಿದ ಟೆಕ್ಕಿಯೊಬ್ಬ ಬಾಲ್ಕನಿಯಿಂದ ಭದ್ರತಾ ಸಿಬ್ಬಂದಿ, ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಮತ್ತು ಪಾರ್ಕಿಂಗ್ ಶೆಡ್‌ ಮೇಲೆ ಏರ್ ಗನ್‌ನಿಂದ ಮನಸೋಇಚ್ಛೆ ಗುಂಡು ಹಾರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬಂಧಿತ ಟೆಕ್ಕಿಯನ್ನು ಉತ್ತರ ಪ್ರದೇಶದ ಲಖನೌ ಮೂಲದ 40 ವರ್ಷದ ಅನುರಾಗ್ ತಿವಾರಿ

ಉಡುಪಿ : ಭಾರತದ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಇಲ್ಲಿನ ಗುಂಡಿಬೈಲಿನ ಅಭಿರಾಮಧಾಮದಲ್ಲಿ 3ನೇವರ್ಷದ ಜಿಲ್ಲಾ ಮಟ್ಟದ ರಾಷ್ಟ್ರ–ಭಕ್ತಿ ಉದ್ಧೀಪನಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಸಮಸ್ತ ಶಾಲಾ ಮಕ್ಕಳಲ್ಲಿ ರಾಷ್ಟ್ರ-ಭಕ್ತಿ ಉದ್ಧೀಪನಗೊಳಿಸಲೆಂದೇ ದಿನಾಂಕ 11 ಮತ್ತು 12 ಆಗಸ್ಟ್‌ 2026ರಂದು ದೇಶ ಭಕ್ತಿಗೀತೆ ಗಾಯನ, ಪ್ರಬಂಧ ಸ್ಫರ್ಧೆ, ಭಾಷಣ/ಚರ್ಚಾ ಸ್ಫರ್ಧೆ, ಐತಿಹಾಸಿಕ ಏಕಪಾತ್ರಾಭಿನಯ